Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರಿನಲ್ಲಿ ಕಾರ್ಮಿಕ ಸಂಘಟನೆಗಳಿಂದ...

ತುಮಕೂರಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ8 Jan 2020 5:35 PM IST
share
ತುಮಕೂರಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ತುಮಕೂರು, ಜ.8: ಬೆಲೆ ಏರಿಕೆ, ಉದ್ಯೋಗ ಸೃಷ್ಟಿ, ಕನಿಷ್ಠ ಕೂಲಿ ಸೇರಿದಂತೆ ವಿವಿಧ ಭರವಸೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳನ್ನು ಹಮ್ಮಿಕೊಂಡಿದ್ದ ಮುಷ್ಕರವನ್ನು ಪೊಲೀಸರಿಂದ ಬೆದರಿಕೆ ಹಾಕಿಸಿ ಹತ್ತಿಕ್ಕಿರುವ ಸರ್ಕಾರದ ಕ್ರಮ ಸರಿಯಲ್ಲ ಎಂದು ಎಐಟಿಯುಸಿ ನಾಯಕ ಎನ್.ಶಿವಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಕಾರ್ಮಿಕ ಸಂಘಟನೆಗಳಾದ, ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ, ಐಎನ್‍ಟಿಯುಸಿ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆ ಬಿಎಸ್‍ಎನ್‍ಎಲ್ ಕಚೇರಿ ಮುಂದೆ, ಬೆಲೆ ಏರಿಕೆಗೆ ಕಡಿವಾಣ, ಉದ್ಯೋಗ ಸೃಷ್ಟಿ, 21 ಸಾವಿರ ರೂಪಾಯಿ ಕನಿಷ್ಟ ಕೂಲಿ, ಆರ್ಥಿಕ ಪ್ರಗತಿಗೆ ತಡೆಯೊಡ್ಡಿರುವ ನೀತಿಗಳನ್ನು ಬದಲಿಸಲು, ರೈತರ ಆತ್ಮಹತ್ಯೆ ತಡೆ, ಬೆಳೆ ವೈಜ್ಞಾನಿಕ ಬೆಂಬಲ ಬೆಲೆ, ಕೃಷಿ ಬಿಕ್ಕಟ್ಟು ನಿವಾರಣೆಗೆ ಆಗ್ರಹಿಸಿ, ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣ ವಿರೋಧಿಸಿ, ಸ್ಕೀಂ ನೌಕರರ ಕಾಯಮಾತಿಗೆ, ಗುತ್ತಿಗೆ ಪದ್ದತಿ ರದ್ದತಿಗೆ ಒತ್ತಾಯಿಸಿ, ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗೆ ಆಗ್ರಹಿಸಿ, ಮಾಸಿಕ 10 ಸಾವಿರ ರೂಪಾಯಿ ಕನಿಷ್ಠ ಪಿಂಚಣಿಗೆ ಪ್ರತಿಭಟನಾಕಾರರು ಒತ್ತಾಯಿಸಿದರು. 

ಪ್ರತಿಭಟನೆಯನ್ನು ಉದ್ದೇಶಿಸಿ ಎಐಟಿಯುಸಿ ನಾಯಕ ಎನ್.ಶಿವಣ್ಣ ಮಾತನಾಡಿ, ರಾಜ್ಯ ಸರ್ಕಾರ ಹೋರಾಟವನ್ನು ಹತ್ತಿಕ್ಕಲು ಪೊಲೀಸ್ ಇಲಾಖೆಯ ಮೂಲಕ ನಡೆಸಿರುವ ಪ್ರಯತ್ನ ಸರಿಯಲ್ಲ. ಸರ್ಕಾರ ಪ್ರತಿಭಟನೆಗಳನ್ನು ಹತ್ತಿಕ್ಕುವ ಬದಲು ಸಮಸ್ಯೆಯನ್ನು ಬಗೆಹರಿಸಲಿ ಎಂದು ಆಗ್ರಹಿಸಿದರು. 

ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ, ಆರ್ಥಿಕ ಬೆಳವಣಿಗೆ ಕುಂಠಿತಗೊಳ್ಳಲು ಸರ್ಕಾರದ ನೀತಿಗಳೇ ಕಾರಣ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಬದಲು ಪ್ರತಿದಿನ ಸಾವಿರಾರು ಉದ್ಯೋಗಗಳನ್ನು ಕಳೆಯುವಂತೆ ನೀತಿಯನ್ನು ಸರ್ಕಾರ ಜಾರಿಗೊಳಿಸಿದೆ. ಕಾರ್ಮಿಕ ಸಂಘಟನೆಗಳಿಂದ ಕಾರ್ಖಾನೆಗಳು ಮುಚ್ಚುತ್ತಿವೆ ಎಂಬ ಶೋಭಾ ಕರಂದ್ಲಾಜೆ ಅವರಿಗೆ ತಿರುಗೇಟು ನೀಡಿದ ಅವರು, ದೇಶದಲ್ಲಿ ಕಾರ್ಮಿಕ ಸಂಘಟನೆಗಳಿಂದ ಶೇಕಡ 6ರಷ್ಟು ಮಾತ್ರ ಕಾರ್ಖಾನೆಗಳು ಬಾಗಿಲು ಮುಚ್ಚಿವೆ. ಉಳಿದ 94ರಷ್ಟು ಕಾರ್ಖಾನೆಗಳು ಮಾಲಕರ ಆಂತರಿಕ ಜಗಳ, ಸರ್ಕಾರದ ನೀತಿಗಳು ಮತ್ತು ಸಬ್ಸೀಡಿ ಪಡೆಯುವ ಬಂಡವಾಳಿಗರ ಕೂಟದಿಂದಾಗಿದೆ ಎಂದು ಆಪಾದಿಸಿದರು. ಕಾರ್ಮಿಕರ ಚಳವಳಿಗೆ ಅವಹೇಳನ ಮಾಡಿದ್ದಾರೆಂದು ಶೋಭಾ ಕರಂದ್ಲಾಜೆ ಅವರನ್ನು ತರಾಟೆಗೆ ತೆಗೆದುಕೊಂಡರು.

ಎಐಯುಟಿಯುಸಿ ನಾಯಕಿ ಮಂಜುಳ ಮಾತನಾಡಿ, ಕಾರ್ಮಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಸರ್ಕಾರ ಮುಂದಾಗುವಂತೆ ಆಗ್ರಹಿಸಿದರು. ಚಳವಳಿಯನ್ನು ಬೆಂಬಲಿಸಿ ಜಿಲ್ಲಾ ಕೊಳಗೇರಿಗಳ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಎ. ನರಸಿಂಹಮೂರ್ತಿ ಮಾತನಾಡಿ, ಆರ್ಥಿಕ-ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸದ ಕೇಂದ್ರದ ಮೋದಿ ಸರ್ಕಾರ ಜನತೆಯನ್ನು ವಿಭಜಿಸುವ ಪೌರತ್ವ ಮಸೂದೆ ಜಾರಿಗೆ ತಂದಿರುವುದನ್ನು ಖಂಡಿಸಿದರು.

ಹಿರಿಯ ಪರಿಸರವಾದಿ ಸಿ.ಯತಿರಾಜು ಮಾತನಾಡಿ, ಕಾರ್ಮಿಕರು ಇಂದು ಅನುಭವಿಸುತ್ತಿರುವ ಸೌಲಭ್ಯಗಳು ಹಿರಿಯರ ತ್ಯಾಗಬಲಿದಾನಗಳ ಪ್ರತೀಕ, ಅದನ್ನು ಸ್ಮರಿಸುತ್ತಾ ಕಾರ್ಮಿಕರಲ್ಲಿ ರಾಜಕೀಯ ಪ್ರಜ್ಞೆ ಬಾರದಿದ್ದರೆ ಹೋರಾಟ ಸಾರ್ಥಕತೆ ಪಡೆಯಲಾರದು ಎಂದರು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಜಾತ್ಯತೀತ ಜನತಾ ದಳದ ಅಧ್ಯಕ್ಷ ಆರ್.ಸಿ. ಆಂಜಿನಪ್ಪ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಸಿಪಿಐ ಜಿಲ್ಲಾ ಮುಖಂಡ ಕಂಬೇಗೌಡ, ಸಮಾಜ ಸೇವಾಕರ್ತ ತಾಜುದ್ದೀನ್ ಶರೀಪ್, ರೈತ ಸಂಘದ ಮುಖಂಡರು ಹಾಗೂ ಎಐಟಿಯುಸಿ ಗಿರೀಶ್, ಎಸ್‍ಎಫ್‍ಐಯ ಈ. ಶಿವಣ್ಣ, ಎಐಡಿಎಸ್‍ಒ ಅಶ್ವಿನಿ ಮಾತನಾಡಿದರು. 

ಪ್ರತಿಭಟನಾ ಸಭೆಯಲ್ಲಿ ಸಿಐಟಿಯು ತಾಲೂಕು ಅಧ್ಯಕ್ಷ ಷಣ್ಮುಖಪ್ಪ, ಕಾಯದರ್ಶಿ ರಂಗಧಾಮಯ್ಯ, ಖಜಾಂಚಿ ಪುಟ್ಟೇಗೌಡ, ಅಂಗನವಾಡಿ ನೌಕರರ ಸಂಘಟನೆ ಗಂಗಾ, ಪ್ರೇಮಾ, ಆಟೋ ಚಾಲಕರ ಸಂಘದ ಇಂತು, ಕಟ್ಟಡ ಕಾರ್ಮಿಕರ ಸಂಘದ ಗೋವಿಂದರಾಜು, ಎಐಟಿಯುಸಿ ನಾಯಕ ಆಶ್ವತ್ಥನಾರಾಯಣ್, ಡಿವೈಎಫ್‍ಐ ದರ್ಶನ್, ಪುಟ್‍ಪಾತ್, ಅಂಗನವಾಡಿ, ಕಾರ್ಖಾನೆ ಕಾರ್ಮಿಕರು, ಜೀವವಿಮಾ ನೌಕರರ ಸಂಘಟನೆಯ ನಂಜುಂಡುಸ್ವಾಮಿ, ಕಲ್ಯಾಣಿ, ಸಿಪಿಎಂ ನಗರ ಕಾರ್ಯದರ್ಶಿ ಎಸ್.ರಾಘವೇಂದ್ರ, ಕಾರ್ಮಿಕ ಮುಖಂಡರಾದ ಕಾಂತರಾಜು, ಶಂಕರಪ್ಪ, ವೆಂಕಟೇಶ, ಗೋವಿಂದರಾಜು, ನರಸಿಂಹಮೂರ್ತಿ, ಬಸವರಾಜ್, ಜಾಫರ್, ರವಿಶಂಕರ್, ಶಾಂತರಾಜು ಮೊದಲಾದವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X