Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಜ.15ಕ್ಕೆ ಅಡ್ಯಾರ್...

ಮಂಗಳೂರು : ಜ.15ಕ್ಕೆ ಅಡ್ಯಾರ್ ಕಣ್ಣೂರಿನಲ್ಲಿ ಸಿಎಎ ವಿರುದ್ಧ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 Jan 2020 7:02 PM IST
share
ಮಂಗಳೂರು : ಜ.15ಕ್ಕೆ ಅಡ್ಯಾರ್ ಕಣ್ಣೂರಿನಲ್ಲಿ ಸಿಎಎ ವಿರುದ್ಧ ಬೃಹತ್ ಪ್ರತಿಭಟನೆ

ಮಂಗಳೂರು, ಜ.8: ಕೇಂದ್ರ ಸರಕಾರದ ಸಿಎಎ, ಎನ್‌ಆರ್‌ಸಿಗಳಂತಹ ಸಂವಿಧಾನ ವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸಲು ಜಿಲ್ಲೆಯ 28 ಸಂಘಟನೆಗಳ ನೇತೃತ್ವದಲ್ಲಿ ದ.ಕ. ಮತ್ತು ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿಯು ಜ.15ರಂದು ಮಧ್ಯಾಹ್ನ 2:30ಕ್ಕೆ ಅಡ್ಯಾರ್-ಕಣ್ಣೂರು ಕೇಂದ್ರ ಜುಮಾ ಮಸೀದಿ ಸಮೀಪದ ಶಹಾ ಗಾರ್ಡನ್‌ನಲ್ಲಿ ಬೃಹತ್ ಜನಜಾಗೃತಿ ಸಮಾವೇಶ ಆಯೋಜಿಸಲಾಗಿದೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ.ಕ. ಮತ್ತು ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್‌ಹಾಜ್ ಕೆ.ಎಸ್.ಮುಹಮ್ಮದ್ ಮಸೂದ್, ನಗರದ ಪುರಭವನದಲ್ಲಿ ಸಮಾವೇಶ ಆಯೋಜನೆಗೆ ಮಂಗಳೂರು ಪೊಲೀಸ್ ಆಯುಕ್ತರು ಅವಕಾಶ ನೀಡದ ಹಿನ್ನೆಲೆಯಲ್ಲಿ ಅಡ್ಯಾರ್ ಕಣ್ಣೂರಿಗೆ ಸ್ಥಳಾಂತರಿಸಲಾಗಿದೆ. ಸಮಾವೇಶವು ಶಾಂತಿಯುತವಾಗಿ ನಡೆಯಲಿದ್ದು, ದ.ಕ. ಮತ್ತು ಉಡುಪಿಯ ಖಾಝಿಗಳು, ಎಲ್ಲ ಧರ್ಮಗಳ ಮುಖಂಡರು, ಚಿಂತಕರು ಆಗಮಿಸಲಿದ್ದಾರೆ ಎಂದರು.

ಸಮಾವೇಶದಲ್ಲಿ ರಾಷ್ಟ್ರಧ್ವಜಗಳು ಮಾತ್ರ ರಾರಾಜಿಸಲಿವೆ. ಸಂವಿಧಾನದ ಚೌಕಟ್ಟಿನಲ್ಲಿಯೇ ಸಮಾರಂಭ ಜರುಗಲಿದೆ. ಕೇಂದ್ರ ಸರಕಾರದ ಜನವಿರೋಧಿ ನೀತಿಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಮಾವೇಶದಲ್ಲಿ ಸವಿವರವಾಗಿ ಮಾಹಿತಿ ನೀಡಲಾಗುವುದು. ಇಸ್ಲಾಂ ಸೇರಿದಂತೆ ಎಲ್ಲ ಧರ್ಮಗಳಿಗೂ ಇದರ ಪರಿಣಾಮ ಬೀರಲಿದೆ ಎಂದು ಹೇಳಿದರು.

ಮುಸ್ಲಿಂ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಹಾಜಿ ಬಿ.ಎಂ.ಮುಮ್ತಾಝ್ ಅಲಿ ಮಾತನಾಡಿ, ಅಡ್ಯಾರ್-ಕಣ್ಣೂರಿನ ಶಹಾ ಗಾರ್ಡನ್‌ನ ಐದು ಎಕರೆ ಜಾಗದಲ್ಲಿ ಸಮಾವೇಶ ಜರುಗಲಿದೆ. ಸಮಾವೇಶಕ್ಕೆ ಆಗಮಿಸುವ ಎಲ್ಲ ವಾಹನಗಳಿಗೆ ಕೇಂದ್ರ ಮಸೀದಿ ಸಮೀಪದ ಐದು ಎಕರೆ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯಿಂದ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯ ಜನಸಾಗರವೇ ಹರಿದುಬರಲಿದೆ. ರಾಷ್ಟ್ರದ ಹಿತದೃಷ್ಟಿಯಿಂದ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಹಾಜಿ ಅಬ್ದುಲ್ ರಶೀದ್ ಝೈನಿ ಮಾತನಾಡಿ, ದೇಶಾದ್ಯಂತ ದೊಡ್ಡ ಮಟ್ಟದ ಆತಂಕ ಸೃಷ್ಟಿಸಿರುವ ಜನವಿರೋಧಿ ನೀತಿಗಳ ಪರಿಣಾಮದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಿದ್ದೇವೆ. ಇದು ಕೇವಲ ಮುಸ್ಲಿಂ ಸೆಂಟ್ರಲ್ ಕಮಿಟಿಗೆ ಮಾತ್ರ ಸೀಮಿತವಾದ ಸಮಾವೇಶವಲ್ಲ. ಕೇಂದ್ರ ಸರಕಾರವು ಕೂಡಲೇ ಸಿಎಎ, ಎನ್‌ಆರ್‌ಸಿಗಳನ್ನು ಹಿಂಪಡೆಯಲು ಒತ್ತಾಯಿಸಲಿದ್ದೇವೆ. ದೇಶದ ಸಂವಿಧಾನ, ಪರಂಪರಾಗತವಾಗಿ ಕಾಯ್ದುಕೊಂಡು ಬಂದ ಸಿದ್ಧಾಂತಗಳನ್ನು ರಕ್ಷಣೆ ಮಾಡುವ ಹೊಣೆ ಎಲ್ಲರದ್ದಾಗಿದೆ ಎಂದರು.

‘ಗಾಳಿಸುದ್ದಿಗೆ ಕಿವಿಗೊಡಬೇಡಿ’

ಸಮಾವೇಶ ಸ್ಥಳಾಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ದ.ಕ. ಮತ್ತು ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್‌ಹಾಜ್ ಕೆ.ಎಸ್.ಮುಹಮ್ಮದ್ ಮಸೂದ್, ಗಾಳಿಸುದ್ದಿಗಳೇ ವೇಗವಾಗಿ ಹರಿದಾಡುತ್ತವೆ. ಇಂತಹ ಗಾಳಿಸುದ್ದಿಯ ಬಗ್ಗೆ ಕಿವಿಗೊಡಬಾರದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಇಬ್ರಾಹೀಂ ಕೋಡಿಜಾಲ್, ಹಾಜಿ ಸಿ. ಮುಹಮ್ಮದ್, ಹಾಜಿ ಅಹ್ಮದ್ ಬಾಷಾ ತಂಙಳ್, ಹಾಜಿ ಇಮ್ತಿಯಾಝ್ ಕಾರ್ಕಳ, ಕೋಶಾಧಿಕಾರಿ ಹಾಜಿ ಮೂಸಾ ಮೊಯ್ದಿನ್, ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್, ಕಾರ್ಯಕಾರಿ ಸಮಿತಿ ಸದಸ್ಯರಾದ ಹಾಜಿ ಎಸ್.ಎಂ.ರಶೀದ್, ಹಾಜಿ ಕಾಸಿಂ ಎಚ್.ಕೆ., ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಜಿ ಸದಕತುಲ್ಲಾ ಫೈಝಿ, ಯುನಿವೆಫ್ ಅಧ್ಯಕ್ಷ ರಫೀವುದ್ದೀನ್ ಕುದ್ರೋಳಿ, ಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ಯಾಕೂಬ್ ಸಅದಿ, ಸಮಸ್ತ ಮದ್ರಸ ಮ್ಯಾನೇಜ್‌ಮೆಂಟ್ ಜಿಲ್ಲಾ ಅಧ್ಯಕ್ಷ ಹಾಜಿ ಐ.ಮೊಯ್ದಿನಬ್ಬ, ಮದನಿ ಜೆಪ್ಪು ಸುನ್ನಿ ಮದ್ರಸ ಅಸೋಸಿಯೇಶನ್‌ನ ಹಾಜಿ ಅಬ್ದುಲ್ ರಹ್ಮಾನ್, ಹಿದಾಯ ಫೌಂಡೇಶನ್ ಅಧ್ಯಕ್ಷ ಹಾಜಿ ಮನ್ಸೂರ್ ಅಹ್ಮದ್ ಅಝಾದ್, ಮಂಗಳೂರು ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಹಾಜಿ ಯೂಸುಫ್ ಖಾದರ್, ಜಮಾಅತ್ ಇಸ್ಲಾಂ ಹಿಂದ್ ಮಂಗಳೂರು ಇದರ ಹಾಜಿ ಶರೀಫ್ ಕೆ.ಎಂ., ಜಮೀಯ್ಯತುಲ್ ಫಲಾಹ್‌ನ ಅಧ್ಯಕ್ಷ ಹಾಜಿ ಶಾಹುಲ್ ಹಮೀದ್, ಪಿಎಫ್‌ಐನ ರಾಜ್ಯ ಸಮಿತಿಯ ಸದಸ್ಯ ಹಾಜಿ ಎ.ಕೆ. ಅಶ್ರಫ್, ಮುಸ್ಲಿಂ ಜಸ್ಟೀಸ್ ಫೋರಂನ ಅಧ್ಯಕ್ಷ ಆಮೀರ್ ತುಂಬೆ, ಹೋಪ್ ಫೌಂಡೇಶನ್ ಅಧ್ಯಕ್ಷ ಸೈಫ್ ಸುಲ್ತಾನ್, ಹೈಲ್ಯಾಂಡ್ ಇಸ್ಲಾಮಿಕ್ ಸೆಂಟರ್‌ನ ಅಧ್ಯಕ್ಷ ಹಾಜಿ ನಾಝಿಮ್, ಅಲ್ ಹರಮೈನ್ ಮಂಗಳೂರು ಅಧ್ಯಕ್ಷ ಮೊಯ್ದಿನ್ ಮೋನು, ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಹಾಜಿ ಬಿ.ಎ. ಮುಹಮ್ಮದ ಹನೀಫ್, ಅಲ್‌ಹಕ್ ಫೌಂಡೇಶನ್ ಅಧ್ಯಕ್ಷ ಬಿ.ಎಸ್.ಇಮ್ತಿಯಾಝ್, ಟುಡೇ ಫೌಂಡೇಶನ್ ಮಂಗಳೂರು ಅಧ್ಯಕ್ಷ ಉಮರ್ ಫಾರೂಕ್, ಎಸ್.ಕೆ.ಎಸ್.ಎಂ.ನ ಉಪಾಧ್ಯಕ್ಷ ಎಸ್.ಎಂ.ಬಾಷಾ, ಮೀನು ಮಾರಾಟ ಮತ್ತು ಕಮಿಷನ್ ಏಜೆಂಟ್‌ರ ಸಂಘದ ಅಧ್ಯಕ್ಷ ಹಾಜಿ ಸಿ.ಎಂ. ಮುಸ್ತಫಾ, ಹೆಲ್ತ್ ಇಂಡಿಯಾ ಅಧ್ಯಕ್ಷ ರಾಝಿಕ್, ತಬ್‌ಲಿಗ್ ಜಮಾಅತ್ ಮಂಗಳೂರು ಅಧ್ಯಕ್ಷ ಹಾಜಿ ಮಕ್ಬೂಲ್, ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಸಂಘದ ಉಪಾಧ್ಯಕ್ಷ ಹಾಜಿ ಅಹ್ಮದ್ ಬಾವ ಬಜಾಲ್, ಮದ್ರಸ ಮ್ಯಾನೇಜ್‌ಮೆಂಟ್ ಮಂಗಳೂರು ಅಧ್ಯಕ್ಷ ಹಾಜಿ ರಿಯಾಝುದ್ದೀನ್, ನಾಗರಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ, ಸೆಂಟ್ರಲ್ ಮಾರ್ಕೆಟ್‌ನ ತರಕಾರಿ ಮತ್ತು ಹಣ್ಣು-ಹಂಪಲು ವ್ಯಾಪಾರಸ್ಥರ ಸಂಘದ ಅದ್ದು ಹಾಜಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X