Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಮಿಕ ಸಂಘಟನೆಗಳಿಂದ ಕೊಡಗು...

ಕಾರ್ಮಿಕ ಸಂಘಟನೆಗಳಿಂದ ಕೊಡಗು ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 Jan 2020 8:45 PM IST
share
ಕಾರ್ಮಿಕ ಸಂಘಟನೆಗಳಿಂದ ಕೊಡಗು ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ

ಮಡಿಕೇರಿ, ಜ.8: ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿದವು. ಮಡಿಕೇರಿ, ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲೂಕಿನಲ್ಲಿ ಪ್ರತಿಭಟನಾಕಾರರು ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು.   

ಮಡಿಕೇರಿ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾವೇಶಗೊಂಡು ಬೇಡಿಕೆಯನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು. 

ರಾಷ್ಟ್ರೀಯ ಸಮಾನ ಕನಿಷ್ಟ ವೇತನ 21 ಸಾವಿರ ರೂ. ನಿಗದಿಪಡಿಸಬೇಕು, ಗುತ್ತಿಗೆ ಪದ್ಧತಿ ನಿಯಂತ್ರಿಸಿ, ಸಮಾನ ವೇತನ ನೀಡಬೇಕು, ರಕ್ಷಣಾ ವಲಯದ ಉದ್ದಿಮೆಗಳು, ರೈಲ್ವೆ ಇಲಾಖೆ ಖಾಸಗೀಕರಣ ಕೈಬಿಡಬೇಕು, ರಕ್ಷಣೆ, ಕಲ್ಲಿದ್ದಲು, ಬ್ಯಾಂಕಿಂಗ್, ವಿಮೆ ಕ್ಷೇತ್ರಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಮಾಡಬಾರದು, ದುಡಿಯುವ ಕೈಗಳಿಗೆ ದೇಶವ್ಯಾಪಿ ಸಮಾನ ವೇತನ ಪದ್ಧತಿ ಜಾರಿಗೆ ತರಬೇಕು, ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು, ಎಲ್ಲಾ ಜಿಲ್ಲೆಗಳಲ್ಲಿ ಕಾರ್ಮಿಕ ಕೋರ್ಟುಗಳನ್ನು ಸ್ಥಾಪಿಸಬೇಕು, ಎಲ್ಲರಿಗೂ ಸರ್ಕಾರದ ಮೂಲಕವೇ ತಲಾ ಹತ್ತು ಸಾವಿರ ರೂ. ಪಿಂಚಣಿ ಖಾತ್ರಿ ಪಡಿಸಬೇಕು, ಆರ್ಥಿಕ ಹಿಂಜರಿತಕ್ಕೆ ಕಾರಣವಾದ ಅಂಶಗಳನ್ನು ಕೈಬಿಡಬೇಕು, ಬೆಲೆ ಏರಿಕೆ ನಿಯಂತ್ರಿಸಬೇಕು, ಎಲ್ಲಾ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ  ನಿಗದಿಪಡಿಸಬೇಕು, ರೈತರ ಹಾಗೂ ಕೂಲಿ ಕಾರ್ಮಿಕರ ಸಾಲಮನ್ನಾ ಮಾಡಬೇಕು, ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ನೌಕರರನ್ನುಖಾಯಂಗೊಳಿಸಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಜಿಲ್ಲೆಯಲ್ಲಿರುವ ಮರಳಿನ ಸಮಸ್ಯೆಯನ್ನು ತಕ್ಷಣದಲ್ಲಿ ಪರಿಹರಿಸಬೇಕು, ಪಡಿತರ ವ್ಯವಸ್ಥೆಯನ್ನು ಸಮರ್ಪಕವಾಗಿ ಜಾರಿಗೊಳಸಿಬೇಕು,  ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸಂಚಾಲಕ ಹೆಚ್.ಬಿ.ರಮೇಶ್, ಅಖಿಲ ಭಾರತ ಮಟ್ಟದಲ್ಲಿ ಕಾರ್ಮಿಕರ ನೇತೃತ್ವದಲ್ಲಿ ನಡೆಯುತ್ತಿರುವ ಮುಷ್ಕರಕ್ಕೆ ಕೊಡಗು ಜಿಲ್ಲೆಯ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಹತ್ತು ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ತಮ್ಮ ಬೇಡಿಕೆ ಈಡೇರಿಕೆ ಒತ್ತಾಯಿಸಿವೆ ಎಂದರು. 

ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಮಾರಕ ನೀತಿಗಳ ವಿರುದ್ಧ ವಿವಿಧ ಕ್ಷೇತ್ರಗಳ ಕಾರ್ಮಿಕರು ಹಲವು ಬಾರಿ ಮುಷ್ಕರಗಳನ್ನು ನಡೆಸಿದರು ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿರ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷೆ ಕೆ.ಎಸ್.ಮುತ್ತಮ್ಮ ಮಾತನಾಡಿ, ಸರ್ಕಾರ ಜಾರಿಗೆ ತರುವ ಹತ್ತು ಹಲವು ಯೋಜನೆಗಳನ್ನು ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು ಸಮರ್ಪಕವಾಗಿ ಅನುಷ್ಠಾನಗೊಳಿಸಿದರೂ ದುಡಿಯುವ ಕೈಗಳಿಗೆ ಸೂಕ್ತ ಸೌಲಭ್ಯವನ್ನು ಸರ್ಕಾರ ನೀಡುತ್ತಿಲ್ಲ. ತಮ್ಮ ಬೇಡಿಕೆಗಳು ಈಡೇರುವವರೆಗೂ ನಿರಂತರ ಹೋರಾಟ ನಡೆಯಲಿದೆ ಎಂದರು. 

ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ತೆಕ್ಕಡ ಪೂರ್ಣಿಮಾ ಮಾತನಾಡಿ, ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿರಂತರ ಪತ್ರಿಭಟನೆಗಳು ನಡೆಸುತ್ತ ಬಂದರೂ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆತ್ತಿಲ್ಲ, ಈ ಕಾರಣದಿಂದ ಎಲ್ಲಾ ಆಶಾ ಕಾರ್ಯಕರ್ತೆರು ಕೆಲಸವನ್ನು ಸ್ಥಗಿತಗೊಳಿಸಿ ಮುಷ್ಕರಕ್ಕೆ ಬೆಂಬಲ ಸೂಚಿಸಿರುವುದಾಗಿ ಹೇಳಿದರು. ಬಾಕಿ ಇರುವ ವೇತನ ಕಾರ್ಯಕರ್ತೆಯರ ಖಾತೆಗೆ ಬರುವವರೆಗೂ ಕೆಲಸವನ್ನು ಸ್ಥಗಿತಗೊಳಿಸಿ ಪ್ರತಿಭಟಿಸಲಾಗುವುದು ಎಂದರು. 

ಸಿಐಟಿಯು ಜಿಲ್ಲಾಧ್ಯಕ್ಷ ಎ.ಮಹಾದೇವ, ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು, ಎನ್.ಡಿ.ಕುಟ್ಟಪ್ಪ, ಉಪಕಾರ್ಯದರ್ಶಿ ರಾಚಾಪ್ಪಜಿ, ಎಐಯುಟಿಯುಸಿ ಸಂಚಾಲಕ ಬಿ.ರವಿ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘದ ಮಡಿಕೇರಿ ತಾಲೂಕು ಕಾರ್ಯದರ್ಶಿ ಅಕ್ಕಮ್ಮ, ಎಲ್‍ಐಸಿ ಪ್ರತಿನಿಧಿ ಶಶಿಕಿರಣ್, ಜಿಲ್ಲಾ ಸರಕಾರಿ ಆಸ್ಪತ್ರೆ ಸ್ವಚ್ಛತಾ ಸಿಬ್ಬಂದಿ ಜಾನಕಿ, ಪದಾಧಿಕಾರಿ ಟಿ.ಜೆ. ಶೀಲಾ, ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಅಶ್ರಫ್, ಅಕ್ಷರ ದಾಸೋಹ ಮತ್ತು ಬಿಸಿಯೂಟ ನೌರರ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷೆ ಪಿ.ಡಿ. ತುಳಸಿ, ಎಆರ್‍ಬಿಇಎ ಮುಖಂಡರು, ಗ್ರಾಮ ಪಂಚಾಯತ್ ನೌಕರರ ಸಂಘದ ಮುಖಂಡರು ಹಾಗೂ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕಲ್ಲು ತೂರಿದ ಕಿಡಿಗೇಡಿಗಳು
ಕಾರ್ಮಿಕ ಸಂಘಟನೆಗಳ ಪ್ರತಿಭಟನೆಯ ದಿನವಾದ ಬುಧವಾರ ಬೆಳಗ್ಗೆ ನಗರದ ಚೈನ್ ಗೇಟ್ ಬಳಿ ಅಪರಿಚಿತ ಕಿಡಿಗೇಡಿಗಳು ಕೆಎಸ್‍ಆರ್‍ಟಿಸಿ ಬಸ್‍ಗೆ ಕಲ್ಲು ತೂರಿದ ಘಟನೆ ನಡೆದಿದೆ. ಬಸ್‍ನ ಮುಂಭಾಗದ ಗಾಜು ಒಡೆದಿದ್ದು, ಚಾಲಕ ಹಾಗೂ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X