Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಮಿಕರ ಮುಷ್ಕರ ಭಾಗಶಃ ಯಶಸ್ವಿ: ಹಲವು...

ಕಾರ್ಮಿಕರ ಮುಷ್ಕರ ಭಾಗಶಃ ಯಶಸ್ವಿ: ಹಲವು ಸಂಘಟನೆಗಳಿಂದ ರಾಜಧಾನಿ ಸೇರಿ ಹಲವು ಕಡೆ ಜಾಥಾ

ವಾರ್ತಾಭಾರತಿವಾರ್ತಾಭಾರತಿ8 Jan 2020 9:21 PM IST
share
ಕಾರ್ಮಿಕರ ಮುಷ್ಕರ ಭಾಗಶಃ ಯಶಸ್ವಿ: ಹಲವು ಸಂಘಟನೆಗಳಿಂದ ರಾಜಧಾನಿ ಸೇರಿ ಹಲವು ಕಡೆ ಜಾಥಾ

ಬೆಂಗಳೂರು, ಜ.8: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಹತ್ತಾರು ಕಾರ್ಮಿಕರ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮುಷ್ಕರ ರಾಜಧಾನಿ ಬೆಂಗಳೂರು, ಮೈಸೂರು, ಕಲಬುರ್ಗಿ ಸೇರಿದಂತೆ ರಾಜ್ಯದಲ್ಲಿ ಭಾಗಶಃ ಯಶಸ್ವಿಯಾಗಿದೆ.

ಉತ್ತರ ಕರ್ನಾಟಕದ ಧಾರವಾಡ, ಬೆಳಗಾವಿ, ಹಾವೇರಿ, ಬಾಗಲಕೋಟ, ಗದಗ ಸೇರಿದಂತೆ ರಾಜ್ಯದ ಮೂವತ್ತು ಜಿಲ್ಲೆಗಳಲ್ಲೂ ಬ್ಯಾಂಕ್ ನೌಕರರು ಮತ್ತು ಎಐಟಿಯುಸಿ, ಸಿಐಟಿಯು, ಐಎನ್‌ಟಿಯುಸಿ, ಎಲ್‌ಪಿಎಫ್ ಸೇರಿದಂತೆ 10 ಟ್ರೇಡ್ ಯೂನಿಯನ್‌ಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗಳನ್ನು ನಡೆಸಲಾಯಿತು.

ಕೆಲ ಪಟ್ಟಣ ಪ್ರದೇಶಗಳಲ್ಲಿ ಸ್ವಯಂ ಪ್ರೇರಿತ ಅಂಗಡಿ, ಮುಗ್ಗಟ್ಟುಗಳನ್ನು ಬಂದ್ ಮಾಡಿ, ಮುಷ್ಕರಕ್ಕೆ ಬೆಂಬಲಿಸಿದರೆ, ಸರಕಾರಿ ಹಾಗೂ ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿತು. ಕೆಲ ಅಂಗಡಿ ಮುಂಗಟ್ಟುಗಳು, ಹೊಟೇಲ್‌ಗಳು, ಚಿತ್ರಮಂದಿರ, ಪೆಟ್ರೊಲ್ ಬಂಕ್, ಅಂಚೆ ಕಚೇರಿ, ಸರಕಾರಿ ಕಚೇರಿಗಳು ಎಂದಿನಂತೆ ತೆರೆದಿದ್ದವು. ಆದರೆ, ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ ಸಂಚಾರ ಸಂಖ್ಯೆಯಲ್ಲಿ ಅಲ್ಪ ಇಳಿಮುಖ ಕಂಡುಬಂದಿತು. ಬಂದ್ ಹಾಗೂ ಮುಷ್ಕರದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಪ್ರತಿ ಜಿಲ್ಲೆಯಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಯಾಕೆ ಮುಷ್ಕರ?: ಕಾರ್ಮಿಕ ವರ್ಗದ ಬೇಡಿಕೆಗಳ ಕುರಿತು ಚರ್ಚಿಸಲು ಕೇಂದ್ರದ ಕಾರ್ಮಿಕ ಇಲಾಖೆಯು ಜ.2ರಂದು ದೇಶದ ವಿವಿಧ ಟ್ರೇಡ್ ಯೂನಿಯನ್‌ಗಳ ಸಭೆ ನಡೆಸಿತ್ತು. ಆದರೆ, ಯಾವೊಂದು ಬೇಡಿಕೆ ಈಡೇರಿಸಲೂ ಕೇಂದ್ರ ಸಮ್ಮತಿಸಿಲ್ಲ. ಇದು ಕಾರ್ಮಿಕರಿಗೆ ಅಪಮಾನ ಎಂದಿರುವ ಟ್ರೇಡ್ ಯೂನಿಯನ್‌ಗಳು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿತ್ತು.

ಇದಲ್ಲದೆ ರೈಲ್ವೆ ಇಲಾಖೆ, ರಕ್ಷಣಾ ಇಲಾಖೆಯಲ್ಲಿನ ಖಾಸಗೀಕರಣವನ್ನು ಸಂಘಟನೆಗಳು ವಿರೋಧಿಸಿವೆ. ಬ್ಯಾಂಕ್‌ಗಳ ವಿಲೀನವನ್ನೂ ಖಂಡಿಸಿವೆ.ಈ ಮುಷ್ಕರ ಪ್ರಯುಕ್ತ ನಡೆಯುತ್ತಿರುವ ಹೋರಾಟದಲ್ಲಿ ದೇಶಾದ್ಯಂತ 25 ಕೋಟಿಗೂ ಹೆಚ್ಚು ಕಾರ್ಮಿಕರು, ನೌಕರ ವರ್ಗದವರು ಭಾಗವಹಿಸಿದ್ದರು.ಇನ್ನು ಕರ್ನಾಟಕದಲ್ಲಿ ಲಕ್ಷಾಂತರ ಕಾರ್ಮಿಕರು ಬೀದಿಗಿಳಿದು ಪ್ರತಿಭಟಿಸಿದರು.

ಕೈಗಾರಿಕಾ ಪ್ರದೇಶಗಳು ಸ್ತಬ್ದ: ಪೀಣ್ಯ, ವೈಟ್‌ಫೀಲ್ಡ್, ದೊಡ್ಡಬಳ್ಳಾಪುರ, ಆನೇಕಲ್, ಜಿಗಣಿ ಸೇರಿದಂತೆ ಬೆಂಗಳೂರು ನಗರದ ಬಹುತೇಕ ಕೈಗಾರಿಕಾ ಪ್ರದೇಶಗಳ ಕಾರ್ಖಾನೆಗಳ ಕಾರ್ಮಿಕರ ಮುಷ್ಕರ ಹಿನ್ನೆಲೆಯಲ್ಲಿ ಅಕ್ಷರಶಃ ಸ್ತಬ್ಧವೆ ಆಗಿದ್ದವು.

ಬೇಡಿಕೆಗಳೇನು?

* ಗುತ್ತಿಗೆ ಪದ್ಧತಿ ನಿಯಂತ್ರಣ

* ಹಳೆ ಪಿಂಚಣಿ ವ್ಯವಸ್ಥೆ ಜಾರಿ

* ಬ್ಯಾಂಕಿಂಗ್, ವಿಮೆ, ರಕ್ಷಣೆಯಲ್ಲಿ ನೇರ ಬಂಡವಾಳಕ್ಕೆ ವಿರೋಧ

* 21 ಸಾವಿರ ರೂ.ಕನಿಷ್ಠ ವೇತನ ನಿಗದಿ

* ಆರ್ಥಿಕ ಹಿಂಜರಿತ ನೀತಿಗಳ ಕೈಬಿಡುವುದು

* ಎಲ್ಲ ಜಿಲ್ಲೆಗಳಲ್ಲಿ ಕಾರ್ಮಿಕ ನ್ಯಾಯಾಲಯ ಸ್ಥಾಪನೆ

* ಸ್ಕೀಂ ನೌಕರರನ್ನು ನೌಕರರೆಂದು ಪರಿಗಣನೆ

* ಅಸಂಘಟಿತ ಕಾರ್ಮಿಕರಿಗೆ ಪಿ.ಎಫ್, ಪಿಂಚಣಿ

* ಪಡಿತರ ಮೂಲಕ ಅಗತ್ಯ ವಸ್ತುಗಳ ವಿತರಣೆ

ಬಿಗಿ ಪೊಲೀಸ್ ಬಂದೋಬಸ್ತ್

ರಾಜಧಾನಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಇಲ್ಲಿನ ಸ್ವಾತಂತ್ರ ಉದ್ಯಾನವನ ಮೈದಾನದಲ್ಲಿ ಮಾತ್ರ ಪ್ರತಿಭಟನೆಗಳಿಗೆ ಅವಕಾಶ ಕಲ್ಪಿಸಲಾಗಿತ್ತು. 11ಡಿಸಿಪಿ, 23 ಎಸಿಪಿ, 111 ಇನ್ಸ್‌ಪೆಕ್ಟರ್, 316 ಪಿಎಸ್ಸೈ, 471 ಎಎಸ್ಸೈ, 4547 ಮುಖ್ಯ ಪೇದೆ ಹಾಗೂ ಪೊಲೀಸ್ ಸಿಬ್ಬಂದಿ, 82 ಕೆಎರ್ಸ್ಸಾಪಿ ತುಕಡಿಗಳನ್ನು ನಿಯೋಜನೆ ಮಾಡಲಾಗತ್ತು.

ಪ್ರತಿಭಟನಾಕಾರರ ಆಕ್ರೋಶ

ಕಾರ್ಮಿಕ ಸಂಘಟನೆಗಳ ಮೆರವಣಿಗೆ ಹಾಗೂ ಬೆಂಗಳೂರಿನ ಪುರಭವನ ಮುಂಭಾಗ ಪ್ರತಿಭಟನೆ ನಡೆಸಲು ಪೊಲೀಸರು ಅವಕಾಶ ನೀಡದ್ದಕ್ಕೆ ಭಾರೀ ಪ್ರತಿರೋಧ ವ್ಯಕ್ತವಾಯಿತು. ಮುಷ್ಕರಕ್ಕೆ ಸರಕಾರ ಮತ್ತು ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ಪ್ರತಿಭಟನಾನಿರತರ ಮೇಲೆ ಪ್ರಕರಣ ದಾಖಲಿಸುವುದು, ಬಂಧಿಸುವ ಮೂಲಕ ದೌರ್ಜನ್ಯ ಮಾಡಲಾಗುತ್ತಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷೆ ಲೀಲಾವತಿ ದೂರಿದರು.

ಸಿಎಎ-ಎನ್‌ಆರ್‌ಸಿ ವಿರುದ್ಧ ಕೂಗು

ಕಾರ್ಮಿಕರ ಮುಷ್ಕರದಲ್ಲೂ ಸಿಎಎ-ಎನ್‌ಆರ್‌ಸಿ ವಿರೋಧಿಸಿ, ಘೋಷಣೆ ಕೂಗಿ ಕೆಲವರು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿದ ಕಾರ್ಮಿಕರು ಸಿಎಎ ವಿರೋಧಿಸಿ ಘೋಷಣೆ ಕೂಗಿದರು. ಬಳಿಕ, ಆಯೋಜಕರು ಇದು ಕಾರ್ಮಿಕರಿಗಾಗಿ ನಡೆಯುತ್ತಿರುವ ಹೋರಾಟ ಎಂದು ಮನವೊಲಿಸಿದ ಘಟನೆ ಜರುಗಿತು.

ಮುಷ್ಕರ ಬೆಂಬಲಿಸಿ ಬಿಜೆಪಿ ಸಂಸದ

ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರವನ್ನು ಒಪ್ಪಬೇಕಾಗಿದೆ ಎಂದು ಬಿಜೆಪಿ ಸಂಸದ ಬಚ್ಚೇಗೌಡ ನುಡಿದರು. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಗಳು ಕಣ್ಣು ತೆರೆದು ಜನರನ್ನು ನೋಡಬೇಕಾಗಿದೆ. ದೇಶದಲ್ಲಿ ತೊಂದರೆಗೆ ಸಿಲುಕಿ ಕೊಂಡುವವರು ತಳ್ಳಮಟ್ಟದಲ್ಲಿರುವ ಕಾರ್ಮಿಕರು. ಇವರು ಪ್ರತಿಭಟನೆ ನಡೆಸುವುದರಲ್ಲಿ ನ್ಯಾಯ ಇದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X