ಜೆಎನ್‌ಯು ಹಿಂಸಾಚಾರ: ಸಂತ ಸ್ಟೀಫನ್ಸ್ ಕಾಲೇಜ್ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ

ಹೊಸದಿಲ್ಲಿ, ಜ. 8: ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಮೇಲೆ ಮುಸುಕುಧಾರಿ ದುಷ್ಕರ್ಮಿಗಳು ನಡೆಸಿದ ದಾಳಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ದಿಲ್ಲಿಯ ಸಂತ ಸ್ಟೀಫನ್ಸ್ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ತರಗತಿ ಬಹಿಷ್ಕರಿಸಿದ್ದಾರೆ.
ಸಂತ ಸ್ಟೀಫನ್ಸ್ ಕಾಲೇಜಿನಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಶಾಲೆಯ ಎದುರು ಸಭೆ ಸೇರಿ ಸಂವಿಧಾನ ಪ್ರಸ್ತಾವನೆಯನ್ನು ಓದಿದರು.
ದಿಲ್ಲಿ ವಿಶ್ವವಿದ್ಯಾನಿಲಯದ ಉತ್ತರ ಕ್ಯಾಂಪಸ್‌ನಲ್ಲಿರುವ ಈ ಪ್ರತಿಷ್ಠಿತ ಕಾಲೇಜಿನ ಹಳೇ ವಿದ್ಯಾರ್ಥಿಗಳ ಗುಂಪಿನ ಟ್ವಿಟ್ಟರ್‌ನಲ್ಲಿ ಕಾಲೇಜಿನ ಹೊರಗೆ 100ಕ್ಕೂ ಅಧಿಕ ವಿದ್ಯಾರ್ಥಿಗಳು ನಿಂತಿರುವುದು ಹಾಗೂ ಘೋಷಣಾ ಫಲಕಗಳನ್ನು ಪ್ರದರ್ಶಿಸಿ ಘೋಷಣೆ ಕೂಗುತ್ತಿರುವ ವೀಡಿಯೊ ಕಾಣಿಸಿಕೊಂಡಿದೆ. ‘‘ಇಂದು ಸಂತ ಸ್ಟೀಫನ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ್ದಾರೆ (ತುಂಬಾ ಅಪರೂಪ). ಸಂವಿಧಾನ ಪ್ರಸ್ತಾವನೆ ಓದಿದ್ದಾರೆ ಹಾಗೂ ಜೆಎನ್‌ಯು ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲಿಸಿದ್ದಾರೆ ಎಂದು ಹಳೇ ವಿದ್ಯಾರ್ಥಿಯೊಬ್ಬರು ಟ್ವೀಟ್ ಮಾಡಿದ್ದಾರೆ ಹಾಗೂ ವಿಸ್ಟಾಂಡ್ ವಿತ್ ಜೆಎನ್‌ಯು ಹಾಗೂ ನೋ ಸಿಎಎ ನೋ ಎನ್‌ಆರ್‌ಸಿ ಎಂದು ಹೇಳಿದ್ದಾರೆ.





