ಎಸ್ಸಿ/ಎಸ್ಟಿ ಮೀಸಲಾತಿ ವಿಸ್ತರಣೆ: ಮಸೂದೆಗೆ ಮಹಾರಾಷ್ಟ್ರ ವಿಧಾನಸಭೆ ಅಂಗೀಕಾರ
ಮುಂಬೈ, ಜ.8: ಲೋಕಸಭೆ ಮತ್ತು ರಾಜ್ಯದ ವಿಧಾನಸಭೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿ ವ್ಯವಸ್ಥೆಯನ್ನು ಮತ್ತೆ 10 ವರ್ಷ ವಿಸ್ತರಿಸುವ ಉದ್ದೇಶದ ಮಸೂದೆಗೆ ಮಹಾರಾಷ್ಟ್ರ ವಿಧಾನಸಭೆ ಬುಧವಾರ ಅಂಗೀಕಾರ ನೀಡಿದೆ.
ಡಿಸೆಂಬರ್ 11ರಂದು ಸಂಸತ್ತಿನಲ್ಲಿ ಅಂಗೀಕೃತವಾಗಿರುವ ಸಂವಿಧಾನ ತಿದ್ದುಪಡಿ ಮಸೂದೆಗೆ ಬುಧವಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಡೆದ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಅಂಗೀಕಾರ ದೊರಕಿದೆ. ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವುದರೊಂದಿಗೆ ಜಂಟಿ ಅಧಿವೇಶನ ಆರಂಭವಾಯಿತು.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಡಿಸಿದ ನಿರ್ಣಯವನ್ನು ವಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಅನುಮೋದಿಸಿದರು. ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಎಸ್ಸಿ/ಎಸ್ಟಿ ಸದಸ್ಯರಿಗೆ ಕಳೆದ 70 ವರ್ಷಗಳಿಂದ ನೀಡಿರುವ ಮೀಸಲಾತಿ 2020ರ ಜನವರಿ 25ಕ್ಕೆ ಅಂತ್ಯವಾಗುವ ಹಿನ್ನೆಲೆಯಲ್ಲಿ, ಮೀಸಲಾತಿ ವ್ಯವಸ್ಥೆಯನ್ನು ಇನ್ನೂ 10 ವರ್ಷ ವಿಸ್ತರಿಸುವ ತಿದ್ದುಪಡಿ ಮಸೂದೆ ಇದಾಗಿದೆ.
Next Story





