ಮಹಿಳಾ ಅಭಿವೃದ್ಧಿ ನಿಗಮದ ಗುರಿ ಹೆಚ್ಚಳಕ್ಕೆ ಕ್ರಮ: ಶಶಿಕಲಾ ಜೊಲ್ಲೆ

ಉಡುಪಿ, ಜ.9: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನದಲ್ಲಿ ರುವ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಮಹಿಳೆಯರ ಅಭಿವೃದ್ದಿಗೆ ರೂಪಿಸಿರುವ ವಿವಿಧ ಯೋಜನೆಗಳ ಗುರಿಯನ್ನು ಹೆಚ್ಚಿಸಲು ಕ್ರಮ ತೆಗೆದು ಕೊಳ್ಳಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವೆ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.
ಗುರುವಾರ ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಪ್ರಗತಿ ಪರಿಶೀಲನಾ ಸೆಯಲ್ಲಿ ಅವರು ಮಾತನಾಡುತಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಕುರಿತು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ತೆರಳಿ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದು, ಈ ಸಭೆಗಳಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಪ್ರತಿ ಜಿಲ್ಲೆಗೆ ನೀಡಲಾಗಿರುವ ಗುರಿಯ ಪ್ರಮಾಣ ಕಡಿಮೆ ಇದ್ದು, ಇದನ್ನು ಹೆಚ್ಚಿಸುವಂತೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಯೋಜನೆಗಳ ಗುರಿ ಯನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.
ರಾಜ್ಯದಲ್ಲಿ 2013ರಿಂದ 2017ರ ಅವಧಿಯಲ್ಲಿ ವಿವಿಧ ಕಾರಣದಿಂದ ಭಾಗ್ಯಲಕ್ಷ್ಮಿ ಯೋಜನೆಯಿಂದ ವಂಚಿತರಾದವರಿಗೆ ಯೋಜ ನೆಯ ಸೌಲ್ಯವನ್ನು ಒದಗಿಸಲು ಮತ್ತು ಮಹಿಳಾ ಸಾಂತ್ವನ ಕೇಂದ್ರಗಳಿಗೆ ಸ್ವಂತ ಕಟ್ಟಡ ಒದಗಿಸುವ ಕುರಿತಂತೆ ಅಧಿಕಾರಿ ಗಳೊಂದಿಗೆ ಚರ್ಚಿಸುವುದಾಗಿ ಸಚಿವರು ಹೆಳಿದರು.
ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ಜಿಲ್ಲೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು, ಪ್ರತಿನಿಧಿ ಗಳೊಂದಿಗೆ ಶಾಸಕರು ಹಾಗೂ ಸಾರ್ವಜನಿಕರು ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
98 ಅಪೌಷ್ಠಿಕ ಮಕ್ಕಳು: ಜಿಲ್ಲೆಯಲ್ಲಿ 98 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಇವರಲ್ಲಿ ವಲಸೆ ಕಾರ್ಮಿಕರ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ಗಮನ ಹರಿಸಬೇಕು. ಭಾಗ್ಯಲಕ್ಷ್ಮಿ ಯೋಜನೆ ಹಾಗೂ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಮರಣ ಪರಿಹಾರ ಅನುದಾನ ಬಿಡುಗಡೆಯಾಗಿದೆ. ಸ್ವಾಧಾರ್ ಯೋಜನೆ ಹಾಗೂ ಸಖಿ ಒನ್‌ಸ್ಟಾಪ್ ಸೆಂಟರ್ ಯೋಜನೆಗೆ ಅನುದಾನ ಬಿಡುಗಡೆಗಾಗಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಚಿವೆ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದ ಎಲ್ಲಾ ಅಂಗನವಾಡಿಗಳಿಗೆ ಹೈಟೆಕ್ ಸ್ಪರ್ಶ ನೀಡಿ, ಮಕ್ಕಳಿಗೆ ಡಿಜಿಟಲ್ ಪುಸ್ತಕಗಳನ್ನು ಒದಗಿಸಿ ಅವರಲ್ಲಿ ಕಲಿಕೆಯ ಆಸಕ್ತಿಯನ್ನು ಹೆಚ್ಚಿಸುವ ಕಾರ್ಯವಾಗಬೇಕು. ಇಲಾಖೆಯ ವತಿಯಿಂದಲೆ ಅಂಗನವಾಡಿ ಶಿಕ್ಷಕಿಯರಿಗೆ ತರಬೇತಿ ಕೊಡಲಾಗು ವುದು. ಪ್ರಥಮ ಆದ್ಯತೆಯಲ್ಲಿ ಹೊಸ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾರ್ಯಕೈಗೊಳ್ಳಲಾಗುತ್ತಿದ್ದು, ಎರಡನೇ ಹಂತದಲ್ಲಿ ಶಿಥಿಲವಾಗಿರುವ ಕಟ್ಟಡಗಳನ್ನೂ ದುರಸ್ತಿಗೊಳಿಸಲಾಗುವುದು ಎಂದರು.
ರಾಜ್ಯದ ಎಲ್ಲಾ ಅಂಗನವಾಡಿಗಳಿಗೆ ಹೈಟೆಕ್ ಸ್ಪರ್ಶ ನೀಡಿ, ಮಕ್ಕಳಿಗೆ ಡಿಜಿಟಲ್ ಪುಸ್ತಕಗಳನ್ನು ಒದಗಿಸಿ ಅವರಲ್ಲಿ ಕಲಿಕೆಯ ಆಸಕ್ತಿಯನ್ನು ಹೆಚ್ಚಿಸುವ ಕಾರ್ಯವಾಗಬೇಕು. ಇಲಾಖೆಯ ವತಿಯಿಂದಲೆ ಅಂಗನವಾಡಿ ಶಿಕ್ಷಕಿಯರಿಗೆ ತರಬೇತಿ ಕೊಡಲಾಗು ವುದು. ಪ್ರಥಮ ಆದ್ಯತೆಯಲ್ಲಿ ಹೊಸ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾರ್ಯಕೈಗೊಳ್ಳಲಾಗುತ್ತಿದ್ದು, ಎರಡನೇ ಹಂತದಲ್ಲಿ ಶಿಥಿಲವಾಗಿರುವ ಕಟ್ಟಡಗಳನ್ನೂ ದುರಸ್ತಿಗೊಳಿಸಲಾಗುವುದು ಎಂದರು. ಜಿಲ್ಲಾ ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಣಾ ಕಾರ್ಯ ನಡೆಯುತ್ತಿದೆ. ಹಿರಿಯ ನಾಗರಿಕರಿಗೆ ಅವಶ್ಯಕವಿರುವ ಶ್ರವಣ ಸಾಧನ, ಹಲ್ಲು ಸೆಟ್, ಊರುಗೋಲು, ಕನ್ನಡಕ, ಪಿಂಚಣಿ ಮತ್ತು ಬಸ್‌ಪಾಸ್ ಇತ್ಯಾದಿಗಳನ್ನು ನೀಡುವ ಯೋಜನೆ ಇದ್ದು, ವಿಶೇಷಚೇತನ ಮಕ್ಕಳಿಗೂ ಇಲಾಖೆ ವತಿಯಿಂದ ಸೂಕ್ತ ಸೌಲ್ಯಗಳನ್ನು ನೀಡಲಾಗುವುದು ಎಂದವರು ವಿವರಿಸಿದರು.
ಉಡುಪಿಯಲ್ಲಿ 2019-20ನೇ ಸಾಲಿನಲ್ಲಿ ಕಳೆದ ಡಿಸೆಂಬರ್ ಅಂತ್ಯಕ್ಕೆ ಶಿಶು ಅಭಿವೃದ್ಧಿ ಯೋಜನೆಯಡಿ ಒಟ್ಟು 1191 ಅಂಗನವಾಡಿ ಕೇಂದ್ರಗಳು ಮಂಜೂರಾಗಿದ್ದು, ಇದರಲ್ಲಿ 1030 ಸ್ವಂತ ಕಟ್ಟಡ, 14 ಪಂಚಾಯತ್, 22 ಸಮುದಾಯ, ಯುವಕ ಮಂಡಲ ಹಾಗೂ ಮಹಿಳಾ ಮಂಡಲದಿಂದ 5 ಮತ್ತು 4 ಕಟ್ಟಡಗಳು, 81 ಶಾಲೆ, 10 ಪರ್ಯಾಯ ವ್ಯವಸ್ಥೆ, 25 ಬಾಡಿಗೆ ಕಟ್ಟಡಗಳು ಸೇರಿದ್ದು, ಎಲ್ಲಾ ಕೇಂದ್ರಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ. ಅಂಗನವಾಡಿಯಲ್ಲಿ 66,446 ಫಲಾನುವಿಗಳ ಗುರಿ ನಿಶ್ಚಿತವಾಗಿದ್ದು, 52,105 ಸಾಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಪಂ ಅಧ್ಯಕ್ಷ ದಿನಕರಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಶಾಸಕ ಕೆ.ರಘುಪತಿ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ಶೇಷಪ್ಪ ಮತ್ತಿತರರು ಉಪಸ್ಥಿತರಿದ್ದರು.








