Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಎಗೆ ಒತ್ತಾಯಿಸಿದ್ದ ಪ್ರತಿಪಕ್ಷಗಳು ಈಗ...

ಸಿಎಎಗೆ ಒತ್ತಾಯಿಸಿದ್ದ ಪ್ರತಿಪಕ್ಷಗಳು ಈಗ ರಿವರ್ಸ್ ಗೇರ್ ಹಾಕಿವೆ: ಅಶ್ವಥ್ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ9 Jan 2020 11:10 PM IST
share
ಸಿಎಎಗೆ ಒತ್ತಾಯಿಸಿದ್ದ ಪ್ರತಿಪಕ್ಷಗಳು ಈಗ ರಿವರ್ಸ್ ಗೇರ್ ಹಾಕಿವೆ: ಅಶ್ವಥ್ ನಾರಾಯಣ

ಬೆಂಗಳೂರು, ಜ.9: ಬೇರೆ ದೇಶಗಳಲ್ಲಿ ಕಿರುಕುಳ ಸಹಿಸಲಾಗದೆ ದೇಶಕ್ಕೆ ವಲಸೆ ಬಂದ ಭಾರತೀಯ ಮೂಲದವರಿಗೆ ಕಾನೂನಿನ ರಕ್ಷಣೆ ನೀಡಬೇಕು ಎಂಬುದು ಎಲ್ಲ ಪಕ್ಷಗಳ ಒತ್ತಾಯವಾಗಿತ್ತು. ಈ ನಿಟ್ಟಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ತರಲಾಯಿತು. ಆದರೆ, ಈಗ ಪ್ರತಿಪಕ್ಷಗಳೆ ರಿವರ್ಸ್ ಗೇರ್ ಹಾಕಿವೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಜನ ಜಾಗೃತಿ ಅಭಿಯಾನದ ವೇಳೆ ನಡೆಯುತ್ತಿರುವ ಘರ್ಷಣೆ ಹಾಗೂ ಗೊಂದಲದ ಬಗ್ಗೆ ಗುರುವಾರ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಖಂಡ ಭಾರತದ ಭಾಗವಾಗಿದ್ದ ದೇಶಗಳಲ್ಲಿ ವಾಸ ಮಾಡುತ್ತಿದ್ದವರು ದೇಶದ ವಿಭಜನೆ ನಂತರ ಅಲ್ಲೇ ಉಳಿಯುವ ನಿರ್ಧಾರ ಮಾಡಿದ್ದರು. ಆದರೆ, ಧಾರ್ಮಿಕ ಅಲ್ಪಸಂಖ್ಯಾತರು ಎಂಬ ಕಾರಣಕ್ಕೆ ಆ ದೇಶಗಳಲ್ಲಿ ಅವರು ಕಿರುಕುಳ ಅನುಭವಿಸುವಂತಾಯಿತು ಎಂದು ಅವರು ಹೇಳಿದರು.

ಹಿಂಸೆ ತಡೆಯಲಾಗದೆ ಸಾವಿರಾರು ಜನರು ದೇಶಕ್ಕೆ ವಲಸೆ ಬಂದಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ ಅತಂತ್ರರಾಗಿದ್ದವರಿಗೆ ರಕ್ಷಣೆ ಕೊಡಬೇಕು ಎಂಬ ಕೂಗು ದೇಶದಲ್ಲಿತ್ತು. ಆದರೆ, ಈ ಸಂಬಂಧ ತಿದ್ದುಪಡಿ ಕಾಯ್ದೆ ತಂದ ಬಳಿಕ ಪ್ರತಿಪಕ್ಷಗಳು ವರಸೆ ಬದಲಿಸಿ, ವಿರೋಧ ವ್ಯಕ್ತಪಡಿಸುತ್ತಿರುವುದೇಕೆ ಎಂದು ಅಶ್ವಥ್ ನಾರಾಯಣ ಪ್ರಶ್ನಿಸಿದರು.

ಕೆಲ ಸಂಘಟನೆಗಳು ಕಿರುಕುಳ ನೀಡಬೇಕು ಎನ್ನುವ ಕಾರಣದಿಂದಲೇ ಈ ರೀತಿ ಮಾಡುತ್ತಿವೆ. ಸಮಾಜದಲ್ಲಿ ಶಾಂತಿ, ಸಮಾಧಾನದಿಂದ ಇರಬಾರದು ಎಂಬುದೇ ಅಂಥವರ ಉದ್ದೇಶ. ಅದಕ್ಕಾಗಿ ಒಂದಲ್ಲ ಒಂದು ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತಾರೆ. ಇಂಥ ಪ್ರಯತ್ನಗಳು ಯಶಸ್ವಿ ಆಗದು. ಅವಕಾಶ ಸಿಕ್ಕ ಕೂಡಲೇ ಕಲ್ಲು ತೂರುವ ಚಾಳಿ ಕೆಲವರಿಗೆ ಇರುತ್ತದೆ. ಅಂಥವರ ಆಸೆ ಈಡೇರದು ಎಂದು ಅವರು ಹೇಳಿದರು.

ಮಾಹಿತಿ ನೀಡುವುದಕ್ಕೆ ವಿರೋಧ ಏಕೆ?: ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜ್ ಬಳಿ ನಡೆದ ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, ದೇಶದ ಕಾನೂನಿನ ಬಗ್ಗೆ ಜನರಿಗೆ ಮಾಹಿತಿ ನೀಡಬಾರದೇ? ಯಾವುದೇ ಕಾನೂನಿನ ಬಗ್ಗೆ ಸ್ಪಷ್ಟನೆ ನೀಡಬಾರದೇ? ಎಂದು ಪ್ರಶ್ನಿಸಿದರು.

ಪೌರತ್ವ ತಿದ್ದುಪಡಿ ಕಾಯಿದೆ ಜಾರಿಯಾದರೆ ಮುಸ್ಲಿಮರನ್ನು ದೇಶದಿಂದ ಹೊರ ಹಾಕಲಾಗುತ್ತದೆ ಎಂಬ ಅಪಪ್ರಚಾರ ವ್ಯಾಪಕವಾಗಿದೆ. ಈ ಬಗ್ಗೆ ಜನರಿಗೆ ಮಾಹಿತಿ ನೀಡಿ ತಪ್ಪುಅಭಿಪ್ರಾಯ ಹೋಗಲಾಡಿಸುವ ಕೆಲಸ ಮಾಡುತ್ತಿದ್ದೇವೆ. ಇದನ್ನೇ ತಪ್ಪು ಎಂದರೆ ಹೇಗೆ? ಜನರ ಮನಸ್ಸಿನಲ್ಲಿ ದ್ವೇಷ ಬಿತ್ತುವ ಕೆಲಸ ಆಗಬಾರದು, ಸೋದರತ್ವದಲ್ಲಿ ಬಾಳುತ್ತಿದ್ದೇವೆ. ಈ ವಿಚಾರದಲ್ಲಿ ರಾಜಕೀಯ ಬೇಡ ಎಂದು ಅವರು ಮನವಿ ಮಾಡಿದರು.

ದೇಶ ದ್ರೋಹದ ಕೆಲಸ ನಿಲ್ಲಿಸಿ, ಧರ್ಮ ಜಾತಿ ಮೀರಿ ಭಾರತವನ್ನು ಪ್ರೀತಿಸಿ. ಸಿಎಎ ವಿರುದ್ಧ ನಡೆಯುತ್ತಿರುವ ಘಟನೆಗಳು ನಿಜಕ್ಕೂ ಶೋಚನೀಯ. ದೇಶದ ಸಂಸ್ಕೃತಿಗೆ, ದೇಶಕ್ಕೆ ಅಗೌರವ ತೋರುವುದು ಸರಿ ಅಲ್ಲ ಅಶ್ವತ್ಥ ನಾರಾಯಣ ಹೇಳಿದರು.

ಪೌರತ್ವ ದಾಖಲೆ ನೀಡುವುದಿಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿರೋಧಿಸಲು ಎಲ್ಲರಿಗೂ ಅವಕಾಶ ಇದೆ. ಅವರವರ ಭಾವನೆಗಳನ್ನು ಜನ ವ್ಯಕ್ತಪಡಿಸುತ್ತಾರೆ. ಕಾನೂನು ತನ್ನ ಕೆಲಸ ಮಾಡುತ್ತದೆ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಅಂಥವರು ಇದ್ದರೆ ನಾನೂ ಅವರನ್ನು ನೋಡಬೇಕಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X