ಉಪ್ಪಿನಂಗಡಿ: ಮನೆಗೆ ನುಗ್ಗಿ ಚಿನ್ನಾಭರಣ ಕಳವು
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ 34 ನೆಕ್ಕಿಲಾಡಿ ಗ್ರಾಮದ ಅಂಬೆಲ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿ ನಗ- ನಗದನ್ನು ದೋಚಿದ ಘಟನೆ ಗುರುವಾರ ಸಂಜೆ ಬೆಳಕಿಗೆ ಬಂದಿದೆ.
ಇಲ್ಲಿನ ನಿವಾಸಿ ಗೋಪಾಲ ಎಂಬವರ ಮನೆಯ ಶೌಚಾಲಯದ ಕಿಟಕಿಯ ಸರಳನ್ನು ಕಿತ್ತು ಒಳನುಗ್ಗಿದ ಕಳ್ಳರು ಮನೆಯೊಳಗಿದ್ದ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಹಾಗೂ ನಗದನ್ನು ಕಳವುಗೈದಿದ್ದಾರೆ. ಮನೆ ಮಂದಿ ಕಾರ್ಯನಿಮಿತ್ತ ಬೆಂಗಳೂರಿಗೆ ಹೋಗಿದ್ದು, ಗುರುವಾರ ಸಂಜೆ ಮನೆಗೆ ಬಂದಾಗ ಕಳ್ಳತನದ ಕೃತ್ಯ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಆಗಮಿಸಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆ ಉಪನಿರೀಕ್ಷಕ ಈರಯ್ಯ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಕಳವಾದ ಸೊತ್ತುಗಳ ನಿಖರ ಮೌಲ್ಯ ಇನ್ನಷ್ಟೇ ಲಭ್ಯವಾಗಬೇಕಿದೆ.
Next Story





