Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂವಿಧಾನ ಅರ್ಥೈಸಿಕೊಂಡರೆ ತಾಯಿಯನ್ನು...

ಸಂವಿಧಾನ ಅರ್ಥೈಸಿಕೊಂಡರೆ ತಾಯಿಯನ್ನು ಅರಿತುಕೊಂಡಂತೆ: ನ್ಯಾ.ನಾಗಮೋಹನ್ ದಾಸ್

ವಾರ್ತಾಭಾರತಿವಾರ್ತಾಭಾರತಿ9 Jan 2020 11:45 PM IST
share

ಬೆಳಗಾವಿ, ಜ.9: ಸಂವಿಧಾನವನ್ನು ಅರ್ಥ ಮಾಡಿಕೊಂಡರೆ ತಾಯಿಯನ್ನು ಅರ್ಥ ಮಾಡಿಕೊಂಡಂತೆ. ಆ ತಾಯಿ ಹಾಕಿ ಕೊಟ್ಟ ಮಾರ್ಗದಲ್ಲಿ ನಾವು ಮುಂದೆ ಸಾಗಬೇಕು. ರಾಷ್ಟ್ರಗೀತೆ, ಲಾಂಛನ ನೀಡಿ ನಿಜವಾದ ಭಾರತದ ನಿರ್ಮಾಣ ಮಾಡಿದ್ದು ನಮ್ಮ ಸಂವಿಧಾನ ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಹೇಳಿದರು.

ಗುರುವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ವಕೀಲರ ಸಂಘ, ಸಮುದಾಯ ಕರ್ನಾಟಕ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗದ ವತಿಯಿಂದ ಆಯೋಜಿಸಲಾಗಿದ್ದ ‘ಸಂವಿಧಾನ ಓದು’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕಳೆದ 70 ವರ್ಷಗಳಿಂದ ನಾವು ಹೊಸ ಶಿಕ್ಷಣವನ್ನು ಪಡೆಯಲು ಸಾಧ್ಯವಾಗಿಲ್ಲ. ಹೊಸ ಚಿಂತನೆಗಳು ಬಂದರೆ ನಮ್ಮ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬಹುದು. ರಾಜಕೀಯ ಅಧಿಕಾರ ಎಂದರೆ ಕಾನೂನುಗಳನ್ನು ರಚನೆ ಮಾಡುವುದು, ಕಾನೂನುಗಳನ್ನು ಜಾರಿ ಮಾಡುವ ಅಧಿಕಾರ ಎಂದು ಅವರು ಹೇಳಿದರು.

ಒಂದು ಕಾಲದಲ್ಲಿ ರಾಜಕೀಯ ಅಧಿಕಾರ ರಾಜರ ಕೈಯಲ್ಲಿ ಇತ್ತು. ಬಳಿಕ ಆ ಅಧಿಕಾರ ಪ್ರಜಾಪ್ರಭುತ್ವ ವ್ಯವಸ್ಥೆಯ ಅಧೀನ ಬಂದಿದೆ. ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ವ್ಯವಸ್ಥೆ ಜಾರಿ ಆದವು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ನಿಯಮಗಳನ್ನು ಪಾಲನೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿ ಅದನ್ನು ನಾವು ಅರಿಯಬೇಕಿದೆ ಎಂದು ನಾಗಮೋಹನ್ ದಾಸ್ ಹೇಳಿದರು. ನಮಗೊಂದು ಸಂವಿಧಾನ ಬೇಕು, ಆ ಸಂವಿಧಾನದ ಮೂಲಕ ಅಧಿಕಾರ ಮುನ್ನಡೆಯಬೇಕು ಹಾಗಾಗಿ ಸಂವಿಧಾನ ಅರಿಯುವುದು ಮುಖ್ಯ. ರಾಷ್ಟ್ರಗೀತೆ, ರಾಷ್ಟ್ರ ಲಾಂಛನ ನೀಡಿ ನಿಜವಾದ ಭಾರತದ ನಿರ್ಮಾಣ ಆಗಿದ್ದು ಭಾರತದ ಸಂವಿಧಾನ ಜಾರಿ ಆದ ನಂತರ ಎಂದು ನಾಗಮೋಹನ್ ದಾಸ್ ತಿಳಿಸಿದರು.

ದೇಶದ ಎಲ್ಲ ಸಮುದಾಯದ ಜನರ ಜೀವನವನ್ನು ಉತ್ತಮ ಪಡಿಸಿದ್ದು ಭಾರತದ ಸಂವಿಧಾನ. ಜಾತಿ, ಭೇದ, ಲಿಂಗ ತಾರತಮ್ಯ ಮಾಡದೇ ಎಲ್ಲರಿಗೂ ಸಮಾನವಾದ ಹಕ್ಕು ನೀಡಿದ್ದು ಭಾರತದ ಸಂವಿಧಾನ. ಅಂತಹ ಸಂವಿಧಾನವನ್ನು ನಾವು ಯಾವಗಾದರೂ ಓದಿಕೊಂಡಿದ್ದಿವಾ ಎಂದು ಅವರು ಪ್ರಶ್ನಿಸಿದರು.

ಮಹಾತ್ಮ ಗಾಂಧಿ ಅವರ ಅಹಿಂಸಾ ಮಾರ್ಗ, ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯ, ಬುದ್ಧನ ಶಾಂತಿ ಮಾರ್ಗ ಹಾಗೂ ಬಸವಣ್ಣನವರ ಸಮಾನತೆಯ ಮಾರ್ಗದಿಂದ ಭಾರತದ ಸಂವಿಧಾನ ನಿರ್ಮಾಣ ಮಾಡಲು ಸಾಧ್ಯವಾಗಿದೆ ಎಂದು ನಾಗಮೋಹನ್ ದಾಸ್ ಹೇಳಿದರು.

ಜಿಲ್ಲಾ ನ್ಯಾಯಾಧೀಶ ಆರ್.ಜೆ.ಸತೀಶ್ ಮಾತನಾಡಿ, ದೇಶದಲ್ಲಿ ಪ್ರತಿಭಟನೆ ಆದರೆ ಸಾಕು ಸಾರ್ವಜನಿಕ ಆಸ್ತಿ ಹಾನಿ ಮಾಡಲು ನಮ್ಮ ಜನ ಮುಂದಾಗುತ್ತಾರೆ. ನಮ್ಮ ಮಕ್ಕಳಿಗೆ ನಾವು ಮನೆಯಿಂದಲೆ ಸಂಸ್ಕೃತಿಯನ್ನು ಕಲಿಸಬೇಕು. ನಮ್ಮ ಮನೆಯನ್ನು ಮೊದಲು ನಾವು ಸರಿಪಡಿಸಿಕೊಳ್ಳಬೇಕು. ಸಂವಿಧಾನವನ್ನು ಪ್ರತಿಯೊಬ್ಬರು ಓದವುದು ನಮ್ಮ ಆದ್ಯ ಕರ್ತವ್ಯ ಎಂದರು.

ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಮಾತನಾಡಿ, ನಮಗೆ ಸಂವಿಧಾನ ಅರಿವು ಇಲ್ಲದೆ ಸಾಕಷ್ಟು ತಪ್ಪುಮಾಡುತ್ತೇವೆ. ಮೂಲ ಸಂವಿಧಾನವನ್ನು ಬಹಳ ಜನರು ಇನ್ನುವರೆಗೆ ಓದಿಕೊಂಡಿಲ್ಲ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ದೇಶದ ಭವಿಷ್ಯಕ್ಕಾಗಿ ಸಂವಿಧಾನದ ರಚನೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ವಿ.ರಾಜೇಂದ್ರ, ಬೆಳಗಾವಿಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಎ.ಬಿ.ಪುಂಡಲೀಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜ ವರವಟ್ಟಿ, ಸಂವಿಧಾನ ಓದು ಅಭಿಯಾನ ಸಮಿತಿಯ ಸದಸ್ಯ ಕೆ.ಎಚ್.ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ಉಮಾ ಸಾಲಿಗೌಡರ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X