ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅಫ್ಲಾಹ್ ಅಮನ್ ಗೆ ಚಿನ್ನದ ಪದಕ

ಮಂಗಳೂರು, ಜ.10: ಮೂಡಬಿದಿರೆಯಲ್ಲಿ ಇತ್ತೀಚೆಗೆ ನಡೆದ 5ನೇ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಅಲ್ - ಫುರ್ಖಾನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅಫ್ಲಾಹ್ ಅಮನ್ 30-35 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗಳಿಸಿದ್ದಾರೆ.
ಅಫ್ಲಾಹ್ ಕಳೆದ ವರ್ಷ ಅಗಸ್ಟ್ ನಲ್ಲಿ ನಡೆದಿದ್ದ ರಾಜ್ಯಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನ ಗಳಿಸಿದ್ದರು. ಅಫ್ಲಾಹ್ ಅಮನ್ ಅವರು ಕೈಕಂಬ ಗಂಜಿಮಠದ ಅಲ್ ಅಮೀನ್ ಮತ್ತು ರೆಹನಾ ದಂಪತಿಯ ಪುತ್ರರಾಗಿದ್ದಾರೆ.
Next Story





