Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ: ರಸ್ತೆ ಸ್ವಚ್ಛತೆಗಾಗಿ 17 ಕಸ...

ಬಿಬಿಎಂಪಿ: ರಸ್ತೆ ಸ್ವಚ್ಛತೆಗಾಗಿ 17 ಕಸ ಗುಡಿಸುವ ಯಂತ್ರಗಳ ಖರೀದಿ

ಕಸ ಗುಡಿಸುವ ಯಂತ್ರ, ಹೈಡೆನ್ಸಿಟಿ ಕಾರಿಡಾರ್ ರಸ್ತೆ ಕಾಮಗಾರಿ ತಪಾಸಣೆ

ವಾರ್ತಾಭಾರತಿವಾರ್ತಾಭಾರತಿ10 Jan 2020 11:51 PM IST
share
ಬಿಬಿಎಂಪಿ: ರಸ್ತೆ ಸ್ವಚ್ಛತೆಗಾಗಿ 17 ಕಸ ಗುಡಿಸುವ ಯಂತ್ರಗಳ ಖರೀದಿ

ಬೆಂಗಳೂರು, ಜ.10: ಬಿಬಿಎಂಪಿ ವ್ಯಾಪ್ತಿಯ ಎಲ್ಲ ರಸ್ತೆಗಳನ್ನು ಸ್ವಚ್ಛವಾಗಿಡಲು ಹೊಸದಾಗಿ ಖರೀದಿಸಿರುವ ಕಸ ಗುಡಿಸುವ ಯಂತ್ರಗಳು ಹಾಗೂ ಅಗರ ರಸ್ತೆಯಲ್ಲಿ ಕೈಗೆತ್ತಿಕೊಂಡಿರುವ ಹೈಡೆನ್ಸಿಟಿ ಕಾರಿಡಾರ್ ಯೋಜನೆ ಪ್ರಗತಿ ಕಾಮಗಾರಿಯನ್ನು ಶುಕ್ರವಾರ ಮೇಯರ್ ಗೌತಮ್ ಕುಮಾರ್ ತಪಾಸಣೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ಹಾಗೂ ಪ್ರಮುಖ ರಸ್ತೆಗಳಲ್ಲಿ ಸ್ವಚ್ಛತೆ ಕಾಪಾಡಲು ಹೊಸದಾಗಿ 17 ಯಂತ್ರಗಳನ್ನು ಖರೀದಿಸಲಾಗಿದ್ದು, ಈಗಾಗಲೇ 15 ಯಂತ್ರಗಳು ನಗರಕ್ಕೆ ಬಂದಿವೆ. ಅದರಲ್ಲಿ 9 ಯಂತ್ರಗಳ ಮೂಲಕ ಮುಖ್ಯ ರಸ್ತೆಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ಇನ್ನು 2 ಯಂತ್ರಗಳು ಶೀಘ್ರ ಬರಲಿವೆ ಎಂದು ತಿಳಿಸಿದರು.

ಬಿಬಿಎಂಪಿಯ ಎಲ್ಲ ಎಂಟು ವಲಯಗಳಿಗೂ ಅಗತ್ಯಕ್ಕೆ ತಕ್ಕಂತೆ ಈ ಯಂತ್ರಗಳನ್ನು ಹಂಚಿಕೆ ಮಾಡಿ ಪ್ರತಿನಿತ್ಯವೂ ಯಂತ್ರಗಳ ಮೂಲಕ ರಸ್ತೆಗಳನ್ನು ಸ್ವಚ್ಛಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶೀಘ್ರವೇ ಕಸ ಗುಡಿಸುವ ಯಂತ್ರಗಳಿಗೆ ಅಧಿಕೃತವಾಗಿ ಚಾಲನೆ ನೀಡಲಾಗವುದು ಎಂದು ತಿಳಿಸಿದರು.

ಮುಖ್ಯ ಅಭಿಯಂತರ ವಿಶ್ವನಾಥ್ ಮಾತನಾಡಿ, ಒಂದು ಕಸ ಗುಡಿಸುವ ಯಂತ್ರಕ್ಕೆ 1.36 ಕೋಟಿ ರೂ.ನಂತೆ ಒಟ್ಟು 23.28 ಕೋಟಿ ರೂ. ವೆಚ್ಚದಲ್ಲಿ 17 ಯಂತ್ರಗಳನ್ನು ಖರೀದಿಸಲಾಗಿದೆ. ಈಗಾಗಲೇ ನಗರಕ್ಕೆ 15 ಯಂತ್ರಗಳು ಬಂದಿದ್ದು, ಉಳಿದೆರಡು ಯಂತ್ರಗಳು ಶೀಘ್ರ ಬರಲಿವೆ. ಯಾವ್ಯಾವ ರಸ್ತೆಗಳಲ್ಲಿ ಯಂತ್ರಗಳ ಮೂಲಕ ಸ್ವಚ್ಛಗೊಳಿಸಬೇಕು ಎಂಬ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಹೈ ಡೆನ್ಸಿಟಿ ಕಾರಿಡಾರ್ ಯೋಜನೆ ಪ್ರಗತಿ ಕಾಮಗಾರಿ ತಪಾಸಣೆ: ಅಗರ ಜಂಕ್ಷನ್‌ನಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ ಹೈ ಡೆನ್ಸಿಟಿ ಕಾರಿಡಾರ್(ಅತೀ ಹೆಚ್ಚು ವಾಹನಗಳು ಓಡಾಡುವ ಮಾರ್ಗ ಅಥವಾ ಸುಗಮ ಸಂಚಾರಕ್ಕೆ ತೊಡಕಾಗುವ ಮಾರ್ಗ) ಪ್ರಗತಿ ಕಾಮಗಾರಿ ತಪಾಸಣೆಯನ್ನು ಮೇಯರ್ ನಡೆಸಿದರು.

ಅಗರ ಜಂಕ್ಷನ್‌ನಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ ಈಗಾಗಲೇ ಡಾಂಬರೀಕರಣ ಮಾಡಲಾಗಿದ್ದು, ಸರ್ವೀಸ್ ರಸ್ತೆ, ಪಾದಚಾರಿ ಮಾರ್ಗ ಹಾಗೂ ಚರಂಡಿ ದುರಸ್ತಿ ಕಾಮಗಾರಿಗೆ ವೇಗ ನೀಡಿ ನಿಗದಿತ ಸಮಯದಲ್ಲಿ ಮುಗಿಸಬೇಕು. ವಾಹನ ಸವಾರರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಮೇಯರ್ ಸೂಚನೆ ನೀಡಿದರು.

ಹೈಡೆನ್ಸಿಟಿ ಕಾರಿಡಾರ್‌ಗಳು:

1. ಬಳ್ಳಾರಿ ರಸ್ತೆ (ಚಾಲುಕ್ಯ ವೃತ್ತದಿಂದ ಹೆಬ್ಟಾಳ), 2. ಹಳೇ ಮದ್ರಾಸ್ ರಸ್ತೆ (ಟ್ರಿನಿಟಿ ವೃತ್ತದಿಂದ ಕೆ.ಆರ್.ಪುರಂ), 3. ಹಳೇ ಏರ್‌ಪೋರ್ಟ್ ರಸ್ತೆ (ಎಎಸ್‌ಸಿ ಸೆಂಟರ್‌ನಿಂದ ಕಾಡುಗೋಡಿ), 4. ಸರ್ಜಾಪುರ ರಸ್ತೆ (ಹೊಸೂರು ರಸ್ತೆಯ ಸೆಂಟ್ ಜಾನ್ಸ್ ಆಸ್ಪತ್ರೆಯಿಂದ ಕಾರ್ಮೆಲಾರಾಂ ಸೇತುವೆ), 5. ಹೊಸೂರು ರಸ್ತೆ (ವೆಲ್ಲಾರ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್), 6. ಬನ್ನೇರುಘಟ್ಟ ರಸ್ತೆ (ಡೈರಿ ವೃತ್ತದಿಂದ ನೈಸ್ ರಸ್ತೆ), 7. ಕನಕಪುರ ರಸ್ತೆ (ಕೆ.ಆರ್. ರಸ್ತೆಯಿಂದ ನೈಸ್ ರಸ್ತೆ), 8. ಮೈಸೂರು ರಸ್ತೆ (ಹಡ್ಸನ್ ವೃತ್ತದಿಂದ ಜ್ಞಾನಭಾರತಿ ಜಂಕ್ಷನ್). 9. ಮಾಗಡಿ ರಸ್ತೆ (ಹಳೇ ಬಿನ್ನಿ ಮಿಲ್‌ನಿಂದ ಅಚಿಜನಾ ನಗರ-ನೈಸ್ ರಸ್ತೆ), 10. ತುಮಕೂರು ರಸ್ತೆ (ಓಕಳಿಪುರಂನಿಂದ ಗೊರಗುಂಟೆ ಪಾಳ್ಯ), 11. ವೆಸ್ಟ್ ಆಫ್ ಕಾರ್ಡ್ ರಸ್ತೆ (ಸೋಫ್ ಫ್ಯಾಕ್ಟರಿಯಿಂದ ಮೈಸೂರು ರಸ್ತೆ), 12. ಹೊರ ವರ್ತುಲ ರಿಂಗ್ ರಸ್ತೆ(ಗೊರಗುಂಟೆ ಪಾಳ್ಯ-ತುಮಕೂರು ರಸ್ತೆ-ಹೆಬ್ಬಾಳ-ಕೆ.ಆರ್. ಪುರಂ-ಮಾರತಹಳ್ಳಿ-ಜೆ.ಡಿ.ಮರ ಜಂಕ್ಷನ್-ನೈಸ್ ರಸ್ತೆ ಜಂಕ್ಷನ್ -ನಾಯಂಡಹಳ್ಳಿ ಜಂಕ್ಷನ್-ಕೊಟ್ಟಿಗೆಪಾಳ್ಯ ಜಂಕ್ಷನ್-ಗೊರಗುಂಟೆಪಾಳ್ಯ ರಸ್ತೆಯವರೆಗೆ)ಯನ್ನು ಹೈ ಡೆನ್ಸಿಟಿ ಕಾರಿಡಾರ್ ಎಂದು ಗುರುತಿಸಲಾಗಿದೆ.

ಈ ವೇಳೆ ಶಾಸಕ ಸತೀಶ್ ರೆಡ್ಡಿ, ಉಪಮೇಯರ್ ರಾಮಮೋಹನ್ ರಾಜು, ವಲಯ ಜಂಟಿ ಆಯುಕ್ತ ರಾಮಕೃಷ್ಣ, ವಲಯ ಮುಖ್ಯ ಅಭಿಯಂತರ ಸಿದ್ದೇಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X