ಕ್ವೆಟ್ಟಾ ಮಸೀದಿಯಲ್ಲಿ ಸ್ಫೊಟ; ಕನಿಷ್ಠ 13 ಸಾವು
ಕರಾಚಿ, ಜ. 11: ಪಾಕಿಸ್ತಾನದ ಬಲೂಚಿಸ್ತಾನ ರಾಜ್ಯದ ರಾಜಧಾನಿ ಕ್ವೆಟ್ಟಾದಲ್ಲಿನ ಮಸೀದಿಯೊಂದರಲ್ಲಿ ಶುಕ್ರವಾರ ಸಂಭವಿಸಿದ ಪ್ರಬಲ ಬಾಂಬ್ ಸ್ಫೋಟದಲ್ಲಿ ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ.
ಕ್ವೆಟ್ಟಾದ ಸೆಟಲೈಟ್ ಪಟ್ಟಣದ ಮಸೀದಿಯಲ್ಲಿ ನಡೆದ ಸ್ಫೋಟದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ‘ಎಕ್ಸ್‌ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ.
ಈ ಪ್ರದೇಶದ ಎಲ್ಲ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.
ಕ್ವೆಟ್ಟಾದಲ್ಲಿ ಮೂರು ದಿನಗಳ ಹಿಂದೆ ನಡೆದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದರು ಹಾಗೂ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
Next Story





