Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ನೀವು ಮೀನುಪ್ರಿಯರೇ? ಹಾಗಿದ್ದರೆ ಇದನ್ನು...

ನೀವು ಮೀನುಪ್ರಿಯರೇ? ಹಾಗಿದ್ದರೆ ಇದನ್ನು ಓದಲೇಬೇಕು

ವಾರ್ತಾಭಾರತಿವಾರ್ತಾಭಾರತಿ11 Jan 2020 11:50 PM IST
share
ನೀವು ಮೀನುಪ್ರಿಯರೇ? ಹಾಗಿದ್ದರೆ ಇದನ್ನು ಓದಲೇಬೇಕು

ನೀವು ಮೀನು ತಿನ್ನುವುದನ್ನು ಇಷ್ಟ ಪಡುತ್ತೀರಾ? ಹಾಗಿದ್ದರೆ ಮೀನು ಎಷ್ಟೊಂದು ಪೌಷ್ಟಿಕ ಆಹಾರ ಎನ್ನುವುದು ನಿಮಗೆ ಗೊತ್ತಿರಲೇಬೇಕು. ಸಾಮಾನ್ಯವಾಗಿ ಹೆಚ್ಚಿನವರು ಮೀನಿನ ದೇಹದ ಭಾಗವನ್ನು ತಿಂದು ತಲೆಯನ್ನು ಎಸೆಯುತ್ತಾರೆ. ವಾಸ್ತವದಲ್ಲಿ ಮೀನಿನ ದೇಹಕ್ಕಿಂತ ತಲೆಯು ಹೆಚ್ಚು ಪೌಷ್ಟಿಕವಾಗಿದೆ. ಮೀನಿನ ತಲೆಯು ಹಲವಾರು ವಿಟಾಮಿನ್‌ಗಳು,ಖನಿಜಗಳು ಮತ್ತು ಆರೋಗ್ಯಕರ ಕೊಬ್ಬನ್ನು ಒಳಗೊಂಡಿರುವುದರಿಂದ ಆರೋಗ್ಯಕ್ಕೆ ಅತ್ಯಂತ ಒಳ್ಳೆಯ ಆಹಾರಗಳಲ್ಲೊಂದಾಗಿದೆ. ಮೀನಿನ ತಲೆಯ ಸೇವನೆಯು ಹಲವಾರು ಮಾರಣಾಂತಿಕ ರೋಗಗಳ ವಿರುದ್ಧ ರಕ್ಷಣೆ ನೀಡುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ. ಮೀನಿನ ತಲೆಯು ನೀಡುವ ಕೆಲವು ಆರೋಗ್ಯಲಾಭಗಳ ಕುರಿತು ಮಾಹಿತಿಯಿಲ್ಲಿದೆ......

► ಆರೋಗ್ಯಕರ ಪ್ರೋಟಿನ್‌ಗಳು

ಮೀನಿನ ತಲೆಯು ಆರೋಗ್ಯಕರ ಪ್ರೋಟಿನ್‌ಗಳ ಅತ್ಯುತ್ತಮ ಮೂಲವಾಗಿದೆ. ಮೀನಿನ ತಲೆಯಲ್ಲಿ ಸ್ಯಾಚ್ಯುರೇಟೆಡ್ ಫ್ಯಾಟ್ ಅಥವಾ ಪರಿಷ್ಕೃತ ಕೊಬ್ಬು ಇತರ ಎಲ್ಲ ಮಾಂಸ ಉತ್ಪನ್ನಗಳಿಗಿಂತ ಕಡಿಮೆ ಪ್ರಮಾಣದಲ್ಲಿರುತ್ತದೆ. ಹೀಗಾಗಿ ಅದನ್ನು ತಿನ್ನುವುದರಿಂದ ಕೊಲೆಸ್ಟ್ರಾಲ ಮಟ್ಟ ಹೆಚ್ಚುವುದಿಲ್ಲ. ನೀವು ಕೆಂಪು ಮಾಂಸದ ಬದಲಾಗಿ ಮೀನನ್ನು ಸೇವಿಸುತ್ತಿದ್ದರೆ ಹೃದಯಾಘಾತ ಅಥವಾ ಪಾರ್ಶ್ವವಾಯುಗಳಂತಹ ಹೃದಯನಾಳೀಯ ರೋಗಗಳಿಗೆ ತುತ್ತಾಗುವ ಅಪಾಯ ತೀರ ಕಡಿಮೆಯಾಗುತ್ತದೆ.

► ಒಮೇಗಾ 3 ಫ್ಯಾಟಿ ಆ್ಯಸಿಡ್‌ಗಳ ಉತ್ತಮ ಮೂಲ

ಮೀನಿನ ದೇಹಕ್ಕೆ ಹೋಲಿಸಿದರೆ ಅದರ ತಲೆಯಲ್ಲಿ ಒಮೇಗಾ 3 ಫ್ಯಾಟಿ ಆ್ಯಸಿಡ್‌ಗಳು ಅಥವಾ ಮೇದಾಮ್ಲಗಳು ಗಣನೀಯ ಪ್ರಮಾಣದಲ್ಲಿರುತ್ತವೆ. ಒಮೇಗಾ 3 ಮೇದಾಮ್ಲಗಳು ಹೃದ್ರೋಗಗಳ ವಿರುದ್ಧ ರಕ್ಷಣೆಯನ್ನು ನೀಡುತ್ತವೆ. ಒಮೇಗಾ 3 ಮೇದಾಮ್ಲಗಳನ್ನು ಒಳಗೊಂಡಿರುವ ಆಹಾರಗಳು ನಮ್ಮ ಶರೀರದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಮತ್ತು ಹೃದ್ರೋಗಗಳಿಗೆ ಗುರಿಯಾಗುವ ಅಪಾಯವನ್ನು ತಗ್ಗಿಸುತ್ತವೆ.

► ಕಣ್ಣು ಮತ್ತು ಮಿದುಳಿಗೆ ಒಳ್ಳೆಯದು

ಮೀನಿನ ತಲೆ ಮತ್ತು ಮಿದುಳಿನ ಭಾಗದಲ್ಲಿ ವಿಟಾಮಿನ್ ಎ ಗಣನೀಯ ಪ್ರಮಾಣದಲ್ಲಿರುತ್ತದೆ. ವಿಟಾಮಿನ್ ಎ ಸೇವನೆ ನಮ್ಮ ಕಣ್ಣುಗಳು ಮತ್ತು ಮಿದುಳಿನ ಆರೋಗ್ಯಕ್ಕೆ ಅತ್ಯುತ್ತಮವಾಗಿದೆ. ವಿಟಾಮಿನ್ ಎ ಕಣ್ಣಿನ ದೃಷ್ಟಿಯನ್ನು ಹೆಚ್ಚಿಸುತ್ತದೆ ಮತ್ತು ದೀರ್ಘಕಾಲದವರೆಗೆ ಕಣ್ಣುಗಳನ್ನು ಆರೋಗ್ಯಯುತವಾಗಿರಿಸುತ್ತದೆ. ಅದು ದೇಹದ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ. ನೈಸರ್ಗಿಕ ಉತ್ಕರ್ಷಣ ನಿರೋಧಕವಾಗಿರುವ ವಿಟಾಮಿನ್ ಎ ಫ್ರೀ ರ್ಯಾಡಿಕಲ್‌ಗಳ ವಿರುದ್ಧ ಹೋರಾಡುತ್ತದೆ ಮತ್ತು ಉತ್ಕರ್ಷಣ ಒತ್ತಡವನ್ನು ನಿವಾರಿಸುತ್ತದೆ.

► ಒತ್ತಡ ಮತ್ತು ಮಾನಸಿಕ ಆರೋಗ್ಯ

ಒಮೇಗಾ 3 ಮೇದಾಮ್ಲಗಳು ಮತ್ತು ಡೊಕೊಸಾಹೆಕ್ಸಾನೊಯಿಕ್ ಆ್ಯಸಿಡ್ (ಸಿಎಚ್‌ಎ)ಗಳನ್ನು ಒಳಗೊಂಡಿರುವ ಆಹಾರಗಳು ಮಿದುಳನ್ನು ಆರೋಗ್ಯಯುತವಾಗಿರಿಸುತ್ತವೆ ಮತ್ತು ಒತ್ತಡ,ಖಿನ್ನತೆಯಂತಹ ಮಾನಸಿಕ ಸಮಸ್ಯೆಗಳ ವಿರುದ್ಧ ರಕ್ಷಣೆಯನ್ನು ನೀಡುತ್ತವೆ ಎನ್ನುವುದನ್ನು ಸಂಶೋಧನೆಯು ತೋರಿಸಿದೆ. ಒಮೇಗಾ 3 ಮೇದಾಮ್ಲಗಳನ್ನು ನಮ್ಮ ಶರೀರವು ತಯಾರಿಸುವುದಿಲ್ಲ,ಹೀಗಾಗಿ ಅವುಗಳನ್ನು ಆಹಾರದ ಮೂಲಕವೇ ಪಡೆಯಬೇಕಾಗುತ್ತದೆ. ಮೀನಿನ ತಲೆಯು ಸಾಕಷ್ಟು ಒಮೇಗಾ ಆಮ್ಲಗಳನ್ನು ಒಳಗೊಂಡಿದೆ.

►ಮಧುಮೇಹ ಮತ್ತು ಸಂಧಿವಾತ

ಮೀನಿನ ತಲೆಯಲ್ಲಿ ಹಲವಾರು ಪೌಷ್ಟಿಕಾಂಶಗಳಿರುವುದರಿಂದ ಅದು ಮಧುಮೇಹ ಮತ್ತು ಸಂಧಿವಾತ ರೋಗಿಗಳಿಗೂ ಒಳ್ಳೆಯದು. ಅದರ ಸೇವನೆ ಶರೀರದ ಚಯಾಪಚಯವನ್ನು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮೀನಿನ ತಲೆಯನ್ನು ತಿನ್ನುವುದರಿಂದ ಸ್ವರಕ್ಷಿತ ರೋಗಗಳ ಅಪಾಯವೂ ಕಡಿಮೆಯಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X