ಅಗಲಿದ ಯಕ್ಷಗಾನ ಕಲಾವಿದರಿಗೆ ಶ್ರದ್ಧಾಂಜಲಿ

ಉಡುಪಿ, ಜ.12: ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಇತ್ತೀಚೆಗೆ ಅಗಲಿದ ಯಕ್ಷಗಾನ ಗುರು, ಪ್ರಸಂಗಕರ್ತ, ಲೇಖಕ ಹೊಸ್ತೋಟ ಮಂಜುನಾಥ ಭಾಗವತ, ಹಿರಿಯ ಕಲಾವಿದ ಕೊಪ್ಪಾಟೆ ಮುತ್ತ ಗೌಡ ಮತ್ತು ಭಾಗವತ ನಗರ ಸುಬ್ರಹ್ಮಣ್ಯ ಆಚಾರ್ ಅವರಿಗೆ ಶ್ರದ್ಧಾಂಜಲಿ ಕಾರ್ಯ ಕ್ರಮವನ್ನು ಶನಿವಾರ ಸಂ್ಥೆಯ ಕಛೇರಿಯಲ್ಲಿ ಆಯೋಜಿಸಲಾಗಿತ್ತು.
ಗುರು ಬನ್ನಂಜೆ ಸಂಜೀವ ಸುವರ್ಣ, ಎಸ್.ವಿ.ಉದಯಕುಮಾರ್ ಶೆಟ್ಟಿ, ಕೆ.ಜಿ.ಮಂಜುನಾಥ್, ಬಳ್ಕೂರು ಕೃಷ್ಣಯಾಜಿ, ಪ್ರೊ.ಎಂ.ಎಲ್ ಸಾಮಗ, ಎಸ್.ವಿ.ಭಟ್, ಕಲಾರಂಗದ ಕಾರ್ಯದರ್ಶಿ ಮುರಲಿ ಡೆಕಾರ್ ನುಡಿನಮನ ಸಲ್ಲಿಸಿದರು.
ಸಂಸ್ಥೆಯ ಅಧ್ಯಕ್ಷ ಕೆ.ಗಣೇಶ್ ರಾವ್, ಉಪಾಧ್ಯಕ್ಷ ಎಂ.ಗಂಗಾಧರ್ ರಾವ್ ಉಪಸ್ಥಿತರಿದ್ದರು. ಜತೆಕಾರ್ಯದರ್ಶಿ ನಾರಾಯಣ ಎಂ.ಹೆಗಡೆ ಕಾರ್ಯಕ್ರಮ ನಿರೂಪಿಸಿದರು.
Next Story





