ಮಂಗಳೂರು : ಜ.15ರಂದು ಸಿಎಎ ವಿರುದ್ಧ ಅಡ್ಯಾರ್ ಕಣ್ಣೂರಿನಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು : ಎನ್‌ಆರ್‌ಸಿ, ಸಿಎಎ ವಿರುದ್ಧ ಜ.15ರಂದು ಅಡ್ಯಾರ್ ಕಣ್ಣೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಮುಹಮ್ಮದ್ ಮಸೂದ್ ನಗರದ ಖಾಸಗಿ ಹೊಟೇಲ್ ನಲ್ಲಿ ಕರೆದ ಸುದ್ದಿಗೋಷ್ಢಿಯಲ್ಲಿ ಸೋಮವಾರ ತಿಳಿಸಿದ್ದಾರೆ.
ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ಮೈದಾನದಲ್ಲಿ ಅಪರಾಹ್ನ 2:30ಕ್ಕೆ ನಡೆಯುವ ಪ್ರತಿಭಟನೆಯಲ್ಲಿ ದ.ಕ.ಮತ್ತು ಉಡುಪಿ ಜಿಲ್ಲೆಯ ಸುಮಾರು1 ಲಕ್ಷ ಮಂದಿ ಭಾಗವಹಿಸಲಿದ್ದಾರೆ ಎಂದರು.
ಉಭಯ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ಸಮಾವೇಶದಲ್ಲಿ 'ನಾವು ಭಾರತೀಯರು ತಂಡ'ದ ನಿವೃತ್ತ ಐಎಎಸ್ ಅಧಿಕಾರಿ ಹರ್ಷ ಮಂದರ್, ಕಣ್ಣನ್ ಗೋಪಿನಾಥನ್, ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ, ಮಾನವ ಹಕ್ಕುಗಳ ಹೋರಾಟಗಾರ ಶಿವಸುಂದರ್, ನ್ಯಾಯವಾದಿ ಸುಧೀರ್ ಕುಮಾರ್ ಮುರೊಳಿ ಮುಖ್ಯ ಭಾಷಣ ಮಾಡಲಿದ್ದಾರೆ ಎಂದರು.
ಖಾಝಿಗಳಾದ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್, ಅಲ್‌ಹಾಜ್ ಬೇಕಲ ಇಬ್ರಾಹಿಂ ಮುಸ್ಲಿಯಾರ್, ಸೈಯದ್ ಫಝಲ್ ಕೋಯಮ್ಮ ತಂಙಳ್, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕಣಚೂರು ಮೋನು, ಮೈಸೂರಿನ ಜ್ಞಾನಪ್ರಕಾಶ ಸ್ವಾಮೀಜಿ, ಮಂಗಳೂರು ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ದಾನಾ, ಕೆಥೋಲಿಕ್ ಸಭಾದ ಅಧ್ಯಕ್ಷ ಪಾವ್ಲ್ ರೂಫಿ ಡಿ ಕಾಸ್ತಾ, ಶಾಸಕ ಯುಟಿ ಖಾದರ್, ಮಾಜಿ ಶಾಸಕ ಮೊಯ್ದಿನ್ ಬಾವಾ, ಬಿಎಂ ಫಾರೂಕ್, ಎಸ್‌ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ರಶೀದ್ ಝೈನಿ, ಸಮಸ್ತ ಮುಶಾವರ ರಾಜ್ಯ ಕಾರ್ಯದರ್ಶಿ ಯುಕೆ ಅಬ್ದುಲ್ ಅಝೀಝ್ ದಾರಿಮಿ, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ, ಪಿಎಫ್‌ಐ ರಾಜ್ಯಾಧ್ಯಕ್ಷ ಮುಹಮ್ಮದ್ ಶಾಕಿಬ್, ಎಸ್‌ಕೆಎಸ್‌ಎಂ ದಾವಾ ಕಾರ್ಯದರ್ಶಿ ಎಂಜಿ ಮುಹಮ್ಮದ್, ಯುನಿವೆಫ್ ರಾಜ್ಯಾಧ್ಯಕ್ಷ ರಫೀಉದ್ದೀನ್ ಕುದ್ರೋಳಿ, ಡಿವೈಎಫ್‌ಐ ದ.ಕ.ಜಿಲ್ಲಾಧ್ಯಕ್ಷ ಬಿಕೆ ಇಮ್ತಿಯಾಝ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಢಿಯಲ್ಲಿ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷರಾದ ಇಬ್ರಾಹಿಂ ಕೋಡಿಜಾಲ್, ಬಿಎಂ ಮುಮ್ತಾಝ್ ಅಲಿ, ಸೈಯದ್ ಅಹ್ಮದ್ ಬಾಷಾ ತಂಙಳ್, ಪ್ರಧಾಯ ಕಾರ್ಯದರ್ಶಿ ಹನೀಫ್ ಹಾಜಿ, ಸಮಾವೇಶದ ಸಂಯೋಜಕ ಮನ್ಸೂರ್ ಅಹ್ಮದ್ ಅಝಾದ್ ಉಪಸ್ಥಿತರಿದ್ದರು.









