Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ ವಿದ್ಯುತ್ ನಿಗಮದಲ್ಲಿ ಆರ್ಥಿಕ...

ಕರ್ನಾಟಕ ವಿದ್ಯುತ್ ನಿಗಮದಲ್ಲಿ ಆರ್ಥಿಕ ಮುಗ್ಗಟ್ಟು: ನೌಕರರ ಸಂಬಳಕ್ಕೆ ಸಾಲ ಮಾಡಬೇಕಾದ ಸ್ಥಿತಿ

ವಾರ್ತಾಭಾರತಿವಾರ್ತಾಭಾರತಿ13 Jan 2020 10:13 PM IST
share

ಬೆಂಗಳೂರು, ಜ.13: ಬಾಕಿ ಹೊರೆ ಹೊತ್ತಿರುವ ಕರ್ನಾಟಕ ವಿದ್ಯುತ್ ನಿಗಮ(ಕೆಪಿಸಿ)ಗೆ ಚೈತನ್ಯ ತುಂಬಲು ಮುಂದಾಗಿರುವ ಆರ್ಥಿಕ ಇಲಾಖೆ, ಬಾಕಿಯಲ್ಲಿ 8 ಸಾವಿರ ಕೋಟಿ ಪಾವತಿಸುವಂತೆ ಕೆಪಿಟಿಸಿಎಲ್ ಹಾಗೂ ಎಸ್ಕಾಂಗಳಿಗೆ ಸೂಚನೆ ನೀಡಿದೆ.

ನಿಗಮ ನೌಕರರಿಗೆ ಸಂಬಳ ಕೊಡಲು ಸಾಲ ಮಾಡಬೇಕಾದ ಸ್ಥಿತಿಗೆ ಸಿಲುಕಿದೆ. ಉತ್ಪಾದಿತ ವಿದ್ಯುತ್‌ಗೆ ಕೆಪಿಟಿಸಿಎಲ್ ಮತ್ತು ಎಸ್ಕಾಂಗಳು ಮುಖ್ಯ ಖರೀದಿದಾರರಾಗಿದ್ದು, ಕೊಡಬೇಕಾದ ಬಾಕಿ ಮೊತ್ತ 18 ಸಾವಿರ ಕೋಟಿ ದಾಟಿದೆ. ವಿವಿಧ ಯೋಜನೆಗೆ ಪಡೆದ ಸಾಲಕ್ಕೆ ಅಸಲು ಮತ್ತು ಬಡ್ಡಿ ಸಹಿತ ಕಂತು ಪಾವತಿ ಹಾಗೂ ಕಾರ್ಯ ಮತ್ತು ಪಾಲನೆ ವೆಚ್ಚ ಸರಿದೂಗಿಸುವುದು ಕಷ್ಟವಾಗುತ್ತದೆ. ಹಂತ ಹಂತವಾಗಿಯಾದರೂ ಬಾಕಿ ಪಾವತಿಗೆ ವ್ಯವಸ್ಥೆ ಮಾಡಲು ಸರಕಾರಕ್ಕೆ ಕೆಪಿಸಿ ಮನವಿ ಮಾಡಿದೆ.

ಉತ್ಪಾದಿಸಿದ ವಿದ್ಯುತ್‌ನಲ್ಲಿ ಅಲ್ಪಭಾಗ ಮಾರಾಟಕ್ಕೆ ಅವಕಾಶ ನೀಡಬೇಕು ಎಂಬುದು ಹಳೆಯ ಪ್ರಸ್ತಾಪ. ನಿಗಮದ ಉನ್ನತಾಧಿಕಾರಿಗಳು ಸಂದರ್ಭೋಚಿತವಾಗಿ ರವಾನಿಸಿದ ಸಂದೇಶಕ್ಕೆ ಸರಕಾರ ಸ್ಪಂದಿಸದಿದ್ದರೆ, ಬೇಡಿಕೆಯಿಲ್ಲವೆಂದು ಶಾಖೋತ್ಪನ್ನ ಮೂಲದ ವಿದ್ಯುತ್ ಸ್ಥಾವರಗಳ ಪೂರ್ಣ ಪ್ರಮಾಣದ ಉತ್ಪಾದನೆಯನ್ನು ತಿಂಗಳುಗಟ್ಟಲೇ ಕಡಿತಗೊಳಿಸುವ ಪ್ರಮೇಯ ಇರುತ್ತಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ದಿನದ ವಿದ್ಯುತ್ ಬೇಡಿಕೆ ಪ್ರಮಾಣ ಜ.11 ಕ್ಕೆ ದಾಖಲಾದ ಪ್ರಕಾರ 11,780 ಮೆಗಾವಾಟ್‌ಗೆ ತಲುಪಿದೆ. ಸೌರ ಮತ್ತು ಪವನ ಮೂಲದ ವಿದ್ಯುತ್ ಸಮೃದ್ಧ, ಅದೂ ಅಗ್ಗದ ದರದಲ್ಲಿ ಸಿಗುತ್ತಿರುವ ಕಾರಣ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಅರ್ಧದಷ್ಟು ತಗ್ಗಿಸಿದ್ದು, ಕೆಪಿಸಿಎಲ್ ಲೋಡ್ ಡಿಸ್ಪಾಚಿಂಗ್ ಸೂಚನೆಯಂತೆ ಉತ್ಪಾದನೆ ಏರಿಕೆಯಾಗುತ್ತಿದೆ.

ಯರಮರಸ್ ಶಾಖೋತ್ಪನ್ನ ವಿದ್ಯುತ್(ವೈಟಿಪಿಎಸ್) ಕೇಂದ್ರದ ವಿದ್ಯುತ್ ಉತ್ಪಾದನೆ ನಿಲ್ಲಿಸಲಾಗಿದೆ. ಸಾಲ ಮಾಡಿ 10 ಸಾವಿರ ಕೋಟಿ ರೂ. ಹೂಡಿ ನಿರ್ಮಿಸಿದ ಈ ಸ್ಥಾವರ ಒಂದು ವರ್ಷದಿಂದ ಸ್ತಬ್ಧವಾಗಿದ್ದು, ವೆಚ್ಚದ ಹೊರೆ ಇಳಿಸಿಕೊಳ್ಳಲೆಂದು ಕಾರ್ಯ ಮತ್ತು ಪಾಲನೆ ಖಾಸಗಿಗೆ ಒಪ್ಪಿಸಲು ಕೆಪಿಸಿ ಯೋಚಿಸಿತ್ತು. ಆದರೆ, ಕಾರ್ಮಿಕರು ಹಾಗೂ ಭೂಮಿ ಕಳೆದುಕೊಂಡ ರೈತರು ತೀವ್ರ ವಿರೋಧ ಕೈಕಟ್ಟಿ ಹಾಕಿದೆ.

ಸಿಎಂ ಸೂಚನೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ನಡೆದ ಕೆಪಿಸಿ ಆಡಳಿತ ಮಂಡಳಿ ನಿರ್ದೇಶಕರ ಸಭೆಯಲ್ಲಿ ಹೆಚ್ಚಿದ ಆರ್ಥಿಕ ಮುಗ್ಗಟ್ಟಿನ ಬಗ್ಗೆ ಪರಾಮರ್ಶೆಯಾಗಿದೆ. ಈ ಸಂದರ್ಭದಲ್ಲಿ ಆರ್ಥಿಕ ಇಲಾಖೆ ಹೆಚ್ಚುವರು ಮುಖ್ಯ ಕಾರ್ಯದರ್ಶಿ ಐಎಸ್‌ಎನ್ ಪ್ರಸಾದ್ ಗರಂ ಆಗಿಯೇ ಎಸ್ಕಾಂ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ. ಅವರು(ಕೆಪಿಸಿ) ಕಷ್ಟದಲ್ಲಿದ್ದಾರೆ, ನೀವು(ಎಸ್ಕಾಂ) ಎಂಜಾಯ್ ಮಾಡ್ತಿದೀರಾ ಹೇಗೆ? ನಿಗಮ ವಿದ್ಯುತ್ ಉತ್ಪಾದನೆ ನಿಲ್ಲಿಸಿ ಬಾಗಿಲು ಮುಚ್ಚಿದರೆ ಗ್ರಾಹಕರಿಗೆ ವಿದ್ಯುತ್ ಸರಬರಾಜು ಹೇಗೆ ಮಾಡುವಿರಿ? ಯಾವುದೇ ನೆಪ ಹೇಳದೆ ಬಾಕಿಯಲ್ಲಿ 8 ಸಾವಿರ ಕೋಟಿ ಮಾಸಾಂತ್ಯದೊಳಗೆ ಪಾವತಿಸಿ ಎಂದು ಖಡಕ್ ಸೂಚನೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X