Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯಲ್ಲಿ ಮಾಡಿದ್ದು ಸಾಕು...

ದ.ಕ. ಜಿಲ್ಲೆಯಲ್ಲಿ ಮಾಡಿದ್ದು ಸಾಕು ಕನಕಪುರ ಜನರ ಶಾಂತಿ ಕೆಡಿಸಬೇಡಿ: ಯು.ಟಿ. ಖಾದರ್

ವಾರ್ತಾಭಾರತಿವಾರ್ತಾಭಾರತಿ13 Jan 2020 10:55 PM IST
share
ದ.ಕ. ಜಿಲ್ಲೆಯಲ್ಲಿ ಮಾಡಿದ್ದು ಸಾಕು ಕನಕಪುರ ಜನರ ಶಾಂತಿ ಕೆಡಿಸಬೇಡಿ: ಯು.ಟಿ. ಖಾದರ್

ಮಂಗಳೂರು, ಜ.13: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾಡಿದ್ದು ಸಾಕು ಕನಕಪುರ ಜನರ ಶಾಂತಿ ಕೆಡಿಸಬೇಡಿ’ ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಪರೋಕ್ಷವಾಗಿ ಶಾಸಕ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ.

ಕನಕಪುರದಲ್ಲಿ ಏಸು ಪ್ರತಿಮೆ ಸ್ಥಾಪನೆಯ ವಿರುದ್ಧ ಪಾದಯಾತ್ರೆ ನಡೆಸಿರುವ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ಪಾದಯಾತ್ರೆ ಅವರ ಸಣ್ಣ ಮನಸ್ಸನ್ನು ತೋರಿಸುತ್ತದೆ. ದೇವರ ಪ್ರತಿಮೆಯನ್ನು ಮಾಡಲು ಅಡ್ಡಿ ಪಡಿಸುತ್ತಾರೆ ಎನ್ನುವುದು ಅವರ ಮನೋಭಾವವನ್ನು ತೋರಿಸುತ್ತದೆ ಎಂದರು.

ಯೇಸು ಪ್ರತಿಮೆಗೆ ಜಾಗವನ್ನು ಅಂದಿನ ಸರಕಾರ ಕಾನೂನು ಬದ್ಧವಾಗಿಯೇ ಕೊಟ್ಟಿದೆ. ಬಿಜೆಪಿ ಮತ್ತು ಆರೆಸ್ಸೆಸ್‌ನವರಿಗೆ ಪ್ರತಿಭಟಿಸುವುದಾದರೆ ಸರಕಾರದ ವಿರುದ್ಧ ಪ್ರತಿಭಟನೆ ಮಾಡಲಿ. ಅದನ್ನು ಬಿಟ್ಟು ಒಂದು ಸಮುದಾಯದ ವಿರುದ್ಧ ಇವರು ಪ್ರತಿಭಟನೆಗೆ ಹೊರಟಿದ್ದಾರೆ. ಜಾಗ ನೀಡಿಕೆ ಯಲ್ಲಿ ಕಾನೂನು ಉಲ್ಲಂಘನೆ ಆಗಿದ್ದಾದಲ್ಲಿ ಅದನ್ನು ಕಾನೂನಾತ್ಮಕವಾಗಿ ಪ್ರಶ್ನೆ ಮಾಡಲಿ. ಧರ್ಮವನ್ನು ವಿರೋಧಿಸಿ ಪಾದಯಾತ್ರೆ ಮಾಡುವ ಅವಶ್ಯಕತೆ ಇಲ್ಲ. ಆ ಸಮುದಾಯ ಮಾಡಿದ ತಪ್ಪಾದರೂ ಏನು ಎಂದು ಪ್ರಶ್ನಿಸಿದರು.

ಹಿಂದೆ ಕುಷ್ಟ ರೋಗಿಗಳನ್ನು ನೋಡಲು ಜನ ಇಲ್ಲದೇ ಇದ್ದಾಗ ಅವರಿಗಾಗಿ ಆಸ್ಪತ್ರೆಯನ್ನು ಕಟ್ಟಿದ್ದು ಇದೇ ಸಮುದಾಯ. ಸರಿಯಾದ ಆರೋಗ್ಯ ವ್ಯವಸ್ಥೆ ಇಲ್ಲದಾಗ ಎಲ್ಲ ವರ್ಗಗಳಿಗೆ ಆರೋಗ್ಯ ಸೇವೆಯನ್ನು ಕೊಟ್ಟಿದ್ದಾರೆ. 40-50 ವರ್ಷಗಳ ಹಿಂದೆ ಮಹಿಳೆಯರಿಗೆ ಶಿಕ್ಷಣ ನೀಡಿ ಅವರನ್ನು ಸಬಲರನ್ನಾಗಿ ಮಾಡಿದ ಕ್ರಾಂತಿಕಾರಿ ಸೇವೆಯನ್ನು ಒದಗಿಸಿದ್ದಾರೆ. ಅದನ್ನು ನೆನಪಿನಲ್ಲಿಡಬೇಕು ಎಂದು ಸಲಹೆ ನೀಡಿದರು.

ಕನಕಪುರದಲ್ಲಿ ಏಸು ಪ್ರತಿಮೆ ನಿರ್ಮಿಸುವುದು ತಪ್ಪಾದರೆ, ಅದೆಷ್ಟೋ ಮಂದಿ ಅರಣ್ಯ ಪ್ರದೇಶವನ್ನು ಅತಿಕ್ರಮಣ ಮಾಡಿಕೊಂಡಿದ್ದಾರೆ. ಅಲ್ಲಿ ಏಕೆ ಇವರು ಪ್ರತಿಭಟನೆ ನಡೆಸುವುದಿಲ್ಲ ಎಂದು ಖಾದರ್ ಪ್ರಶ್ನಿಸಿದರು.

ರಾಜ್ಯದಲ್ಲಿ ಪ್ರಕೃತಿ ವಿಕೋಪ ನಡೆದು ಸಂತ್ರಸ್ತರಿಗೆ ಸರಿಯಾದ ಪರಿಹಾರ ಇನ್ನೂ ಕೊಟ್ಟಿಲ್ಲ. ವಸತಿ ಯೋಜನೆಗಳು ಮಂಜೂರಾಗಿದ್ದರೂ ಅನುದಾನ ಸಿಕ್ಕಿಲ್ಲ. ನರೇಗಾ ಅಡಿಯಲ್ಲಿ ಕೆಲಸ ಮಾಡಿದವರಿಗೆ ವೇತನವಿಲ್ಲ. ಆಶಾ ಕಾರ್ಯಕರ್ತರಿಗೆ ಇನ್ನೂ ವೇತನ ಸಿಕ್ಕಿಲ್ಲ. ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರಕಾರವು ಅನುವು ಮಾಡಿಕೊಡಬೇಕಿತ್ತು ಎಂದರು.

ರಾಜ್ಯ ಸರಕಾರ ಪಕ್ಷದೊಳಗಿನ ಗೊಂದಲಕ್ಕೆ ಜನರನ್ನು ಬಲಿಕೊಟ್ಟು ಅಧಿವೇಶನವನ್ನೇ ಕರೆಯುತ್ತಿಲ್ಲ. ವರ್ಷದ ಮೊದಲ ಎರಡು ವಾರಗಳಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಗಳನ್ನೊಳಗೊಂಡ ಜಂಟಿ ಅಧಿವೇಶನ ಕರೆಯಬೇಕಿತ್ತು. ಅದನ್ನು ಕರೆದಿಲ್ಲ. ಈ ಎಲ್ಲ ಗೊಂದಲಗಳನ್ನು ಸೃಷ್ಟಿ ಮಾಡಿದ ರಾಜ್ಯ ಸರಕಾರವು ಜನರನ್ನು ಬಲಿಕೊಡಲು ಹೊರಟಿದೆ. ಕೂಡಲೇ ಚಳಿಗಾಲದ ಜಂಟಿ ಅಧಿವೇಶನವನ್ನು ಕರೆಯಬೇಕು ಎಂದು ಆಗ್ರಹಿಸಿದರು.

ಗೂಡಿನಬಳಿ ನಿರಾಶ್ರಿತರಿಗೆಂದು ನಿರ್ಮಿಸಿದ್ದ ಮುಂದಾಗಿದ್ದ ಕಟ್ಟಡವನ್ನು ನೆಲಸಮ ಮಾಡಿ, ಪಿಪಿಪಿ ಮಾದರಿಯಲ್ಲಿ 1,300 ಜನ ವಾಸಿಸುವ ಬೃಹತ್ ಫ್ಲಾಟ್ ನಿರ್ಮಿಸಲು ಯೋಜಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಸರಕಾರದಿಂದಲೂ ಅನುಮೋದನೆ ದೊರೆತಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಈಶ್ವರ್ ಉಳ್ಳಾಲ, ಆಲ್ವೀನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

‘ಸಿಎಎ, ಎನ್‌ಆರ್‌ಸಿ ಬಗ್ಗೆ ಡಿಸಿ ಸ್ಪಷ್ಟತೆ ನೀಡಲಿ’

ದಕ್ಷಿಣ ಕನ್ನಡದಲ್ಲಿ ಎನ್‌ಆರ್‌ಸಿ ಮತ್ತು ಸಿಎಂ ಬಗ್ಗೆ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಇಲಾಖೆ ಮಾಹಿತಿಗಾಗಿ ಮನೆಮನೆಗೆ ಭೇಟಿನೀಡಲು ಬರುವಾಗ ಜನರು ಮಾಹಿತಿ ನೀಡಲು ಹಿಂಜರಿಯುತ್ತಿದ್ದಾರೆ ಎಂದು ಹೇಳಿದ ಯು.ಟಿ. ಖಾದರ್, ಎನ್‌ಆರ್‌ಸಿ, ಸಿಸಿಇ ಕುರಿತು ಸರಕಾರ ಯಾವುದೇ ಅಧಿಕಾರಿಗಳನ್ನು ಅಧಿಕೃತವಾಗಿ ನೇಮಿಸಿಲ್ಲ ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದರು.

ಮನೆಗಳಿಗೆ ವಿವಿಧ ಇಲಾಖೆಯವರು ಮಾಹಿತಿಗಾಗಿ ಬಂದರೆ ಜನರು ಗೊಂದಲಕ್ಕೆ ಒಳಗಾಗಬಾರದು. ಈ ಎಲ್ಲ ಗೊಂದಲವನ್ನು ನಿವಾರಣೆ ಮಾಡಲು ಜಿಲ್ಲಾಧಿಕಾರಿ ಕೂಡಲೇ ಕಷ್ಟವಾದ ಸ್ಪಷ್ಟತೆ ನೀಡಬೇಕು. ಎನ್‌ಆರ್‌ಸಿ ಬರಲು ಅಷ್ಟು ಸುಲಭವಾಗಿ ನಾವು ಯಾರೂ ಬಿಡುವುದಿಲ್ಲ ಎಂದೂ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X