ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ
ಉಡುಪಿ, ಜ.14: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬ್ರಹ್ಮಾವರ ಇವರ ಸಹಯೋಗದಲ್ಲಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ ಹಾಗೂ ಉಪನ್ಯಾಸ, ಡಾ.ಅಂಬೇಡ್ಕರ್ ಕುರಿತು ಗಾಯನ, ಪ್ರಬಂಧ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ ಜ.16ರಂದು ಅಪರಾಹ್ನ 3 ಗಂಟೆಗೆ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿನ ಪಾಂಶುಪಾಲ ರವೀಂದ್ರ ಉಪಾಧ್ಯ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿಯ ಪ್ರಾಧ್ಯಾಪಕ ಹಾಗೂ ದಲಿತ ಚಿಂತಕ ನಾರಾಯಣ ಮಣೂರು ವಿಶೇಷ ಉಪನ್ಯಾಸ ನಿೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story