Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿವೇಕಾನಂದರ ಚಿಂತನೆ, ಆದರ್ಶಗಳು...

ವಿವೇಕಾನಂದರ ಚಿಂತನೆ, ಆದರ್ಶಗಳು ಯುವಜನತೆಗೆ ಸ್ಪೂರ್ತಿಯಾಗಬೇಕು : ವೇದವ್ಯಾಸ ಕಾಮತ್

ವಾರ್ತಾಭಾರತಿವಾರ್ತಾಭಾರತಿ15 Jan 2020 11:51 AM IST
share
ವಿವೇಕಾನಂದರ ಚಿಂತನೆ, ಆದರ್ಶಗಳು ಯುವಜನತೆಗೆ ಸ್ಪೂರ್ತಿಯಾಗಬೇಕು : ವೇದವ್ಯಾಸ ಕಾಮತ್

ಮಂಗಳೂರು : ವಿವೇಕಾನಂದರ ಚಿಂತನೆ, ಆದರ್ಶಗಳು ಯುವಜನತೆಗೆ ಸ್ಪೂರ್ತಿಯಾಗಬೇಕು. ಜೊತೆಗೆ ಅದರಿಂದ ಪ್ರೇರಣೆಗೊಂಡು ಸಾಧಿಸಬೇಕು ಎಂದು ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದರು.

ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ, ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್ ಜಿಲ್ಲಾ ಸಂಸ್ಥೆ, ಜಿಲ್ಲಾ ಯುವ ಜನ ಒಕ್ಕೂಟ ಇದರ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಆಯೋಜಿಸಿದ ದಿವ್ಯ ಚೇತನ ಸ್ವಾಮಿ ವಿವೇಕಾನಂದರ 157ನೇ ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಯುವ ಸಮಾವೇಶ, ಜಿಲ್ಲಾ ಯುವ ಮಂಡಲ ಪ್ರಶಸ್ತಿ ಪ್ರದಾನ ಹಾಗೂ ಕ್ರೀಡಾ ಸಾಮಗ್ರಿಗಳ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ದೇಶ ಕಂಡ ಮಹಾನ್ ಸಂತ ಸ್ವಾಮಿ ವಿವೇಕಾನಂದ. ಇವರು ಬೇರೆ ಬೇರೆ ದೇಶಕ್ಕೆ ತೆರಳಿ ಭಾರತದ ಗರಿಮೆಯನ್ನು ವಿಶ್ವಕ್ಕೆ ಸಾರಿದ್ದಾರೆ. ಈ ದೇಶದ ಸಂಸ್ಕೃತಿ, ಆಚಾರ ವಿಚಾರ, ಈ ಮಣ್ಣಿನ ಗುಣವನ್ನು ವಿಶ್ವಕ್ಕೆ ಪಸರಿಸುವ ಮೂಲಕ ಭಾರತದ ಕೀರ್ತಿಯನ್ನು ದೇಶದ ಉದ್ದಗಲಕ್ಕೂ ಪರಿಚಯಿಸಿದ್ದಾರೆ. ಹಾಗಾಗಿ ಅವರ ಆದರ್ಶಗಳನ್ನು, ಸ್ಫೂರ್ತಿಯ ಮಾತುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಯಶಸ್ಸು ಕಾಣಬೇಕು. ಯುವಜನಾಂಗವು ದೇಶದ ಬಹುದೊಡ್ಡ ಶಕ್ತಿಯಾಗಿದ್ದು, ಅವರ ಆದರ್ಶಗಳನ್ನು ಪಾಲಿಸಿ ಮುನ್ನಡೆಯಬೇಕು. ರಾಷ್ಟ್ರ ನಿರ್ಮಾಣಕ್ಕೆ ಪಣತೊಡಬೇಕು ಎಂದು ಕಿವಿಮಾತು ಹೇಳಿದರು.

ಪ್ರಧಾನ ಭಾಷಣಕಾರ ಆದರ್ಶ ಗೋಖಲೆ ಮಾತನಾಡಿ, ಸ್ವಾಮಿ ವಿವೇಕಾನಂದರ ಆದರ್ಶದಲ್ಲಿ ಮುನ್ನಡೆಯಬೇಕು. ಸಾಧನೆ ಮಾಡುವ ಹುಚ್ಚು ಕೆಚ್ಚು ನಮ್ಮೆದೆಯೊಳಗೆ ಬಂದಾಗ ಮಾತ್ರ ಸಾಧನೆ ಸಾಧ್ಯ. ನಮ್ಮಿಂದಾಗದು ಎಂಬ ಕೀಳರಿಮೆಯನ್ನು ತೊರೆದು ನಮ್ಮಿಂದ ಸಾಧ್ಯ, ನಾನು ಮಾಡಬಲ್ಲೆ ಅನ್ನೋ ಮನೋಭಾವದಲ್ಲಿ ಸಾಗಿ ಸಾಧಿಸಬೇಕು. ಜಗತ್ತಿನಲ್ಲಿ ನಮ್ಮನ್ನು ಸೋಲಿಸಬಲ್ಲ ಶಕ್ತಿ ಇರುವುದು ನಮಗೆ ಮಾತ್ರ. ಹಾಗಾಗಿ ನಮ್ಮಲ್ಲಿ ಅಡಕವಾಗಿರುವ ಅಮೂಲ್ಯ ಶಕ್ತಿಯನ್ನು ಸದುಪಯೋಗಪಡಿಸಿಕೊಳ್ಳಬೇಕು. ದೇಶ ಕಟ್ಟುವೆಡೆಗೆ ಪಣತೊಡಬೇಕು ಎಂದರು.

ಕನಕಮಜಲು ಸುಳ್ಯ ಯುವಕ ಮಂಡಲಕ್ಕೆ ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪ್ರದಾನ ಮಾಡಲಾಯಿತು. ಷಣ್ಮುಖ ಯುವಕ ಮಂಡಲ, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಕ್ರಿಕೆಟ್ ಕ್ಲಬ್ ತೋಕೂರು, ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ಹಳೆಯಂಗಡಿ ಈ ತಂಡಗಳಿಗೆ ಸ್ವಚ್ಛ ಭಾರತ್ ಇನ್ಮೈನ್ ಶಿಪ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಷ್ಟ್ರೀಯ ಸೇವಾ ಯೋಜನೆಯ ನಿವೃತ್ತ ಸಂಯೋಜನಾಧಿಕಾರಿ ಪ್ರೋ. ವಿನಿತಾ ರೈ ಮತ್ತು ದೆಹಲಿ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ ಆದಿತ್ಯ ರಾಜ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಲಾಯಿತು. ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಕು.ಶಿವಾನಿ , ಜಾಯ್ಲಿಲಿನ್ ಲೆವಿಟಾ, ದಿಗ್ವಿಜಯ್ ಭಾರತ್‌ರಾಜ್ ಇವರಿಗೆ ಪ್ರಶಸ್ತಿ ನೀಡಲಾಯಿತು.

ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ. ನಾಗರತ್ನ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ವಿವೇಕ್ ಆಳ್ವಾ, ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಡಾ ಎನ್. ಜಿ. ಮೋಹನ್, ತಹಶೀಲ್ದಾರ್ ಅನಂತ ಶಂಕರ್, ಮುಖ್ಯ ಅರಣ್ಯಾಧಿಕಾರಿ ಪ್ರಕಾಶ್ ಎಸ್ ನೆಟಾಲ್ಕರ್, ಆಯುಷ್ ಅಧಿಕಾರಿ ಇಕ್ಬಾಲ್ ಮತ್ತಿತರರು ಉಪಸ್ಥಿತರಿದ್ದರು.

ನೆಹರು ಯುವ ಕೇಂದ್ರ ಮಂಗಳೂರು ಹಾಗೂ ಜಿಲ್ಲಾ ಯುವ ಸಮನ್ವಯಧಿಕಾರಿ ರಘುವೀರ್ ಸೂಟರ್‌ಪೇಟೆ ಪ್ರಸ್ತಾವಿಕ ನುಡಿಗಳನ್ನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X