ಜ.16ರಿಂದ ಮಹಿಳಾ ಉದ್ಯಮಿಗಳ ಉತ್ಪನ್ನಗಳ ಪ್ರದರ್ಶನ
ಉಡುಪಿ, ಜ.15: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಜ.16ರಿಂದ 18ರವರೆಗೆ ನಡೆಯಲಿರುವ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರು ಮತ್ತು ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನಾ ಸಮಾರಂಭ ಜ.16 ರಂದು ಬೆಳಗ್ಗೆ 10:30ಕ್ಕೆ ಉಡುಪಿ ರಥಬೀದಿಯಲ್ಲಿರುವ ಭಂಡಾರಕೇರಿ ಮಠದ ಆವರಣದಲ್ಲಿ ನಡೆಯಲಿದೆ.
ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಗೃಹ ಮತ್ತು ಸಹಕಾರ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story





