Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಾರು ಎಷ್ಟೇ ಚೀರಾಡಿದರೂ ಪೌರತ್ವ ಕಾಯ್ದೆ...

ಯಾರು ಎಷ್ಟೇ ಚೀರಾಡಿದರೂ ಪೌರತ್ವ ಕಾಯ್ದೆ ಅನುಷ್ಠಾನ ಖಚಿತ: ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ

"ಕಾಯ್ದೆಯನ್ನು ವಿರೋಧಿಸುವವರಿಗೆ ಪರಕೀಯರ ಬಗ್ಗೆ ವ್ಯಾಮೋಹ ಯಾಕೆ ?"

ವಾರ್ತಾಭಾರತಿವಾರ್ತಾಭಾರತಿ17 Jan 2020 7:02 PM IST
share
ಯಾರು ಎಷ್ಟೇ ಚೀರಾಡಿದರೂ ಪೌರತ್ವ ಕಾಯ್ದೆ ಅನುಷ್ಠಾನ ಖಚಿತ: ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ

ಮಡಿಕೇರಿ, ಜ.17: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆ ವಿರುದ್ಧ ಯಾರು ಎಷ್ಟೇ ಚೀರಾಡಿದರೂ, ಯಾವುದೇ ಹೋರಾಟಗಳನ್ನು ನಡೆಸಿದರೂ ಕಾಯ್ದೆ ಅನುಷ್ಠಾನಗೊಳ್ಳುವುದು ಮಾತ್ರ ಖಚಿತವೆಂದು ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ, ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ರಾಜ್ಯ ಉಪಾಧ್ಯಕ್ಷ  ರಹೀಂ ಉಚ್ಚಿಲ ಹೇಳಿದ್ದಾರೆ.

ಜಿಲ್ಲಾ ಬಿಜೆಪಿ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ನಡೆದ ಪೌರತ್ವ ಕಾಯ್ದೆ ಜನಜಾಗೃತಿ ಸಭೆಯಲ್ಲಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನಕಲಿ ಜಾತ್ಯತೀತವಾದಿಗಳು ವಿನಾಕಾರಣ ಕಾಯ್ದೆ ಕುರಿತು ಮುಸ್ಲಿಮರಲ್ಲಿ ಭಯ ಮೂಡಿಸುತ್ತಿದ್ದಾರೆ. ಭಾರತ ದೇಶದ ಮುಸ್ಲಿಮರಿಗೆ ಕಾಯ್ದೆಯಿಂದ ಯಾವುದೇ ತೊಂದರೆ ಇಲ್ಲವೆಂದು ಪ್ರಧಾನ ಮಂತ್ರಿ, ಗೃಹ ಸಚಿವ ಹಾಗೂ ರಾಜ್ಯದ ಮುಖ್ಯಮಂತ್ರಿ ಅಭಯ ನೀಡಿದ್ದರೂ ಪ್ರತಿಭಟನೆಗಳು ಯಾಕೆ ನಡೆಯುತ್ತಿವೆ ಎನ್ನುವ ಬಗ್ಗೆ ಪ್ರಜ್ಞಾವಂತರು ಚಿಂತಿಸಬೇಕಾಗಿದೆ. ನನ್ನ ಬಳಿ ಬಂದ ಎಲ್ಲಾ ಮುಸ್ಲಿಮರಿಗೂ ಕಾಯ್ದೆ ಕುರಿತು ಮನವರಿಕೆ ಮಾಡಿದ್ದು, ತೊಂದರೆಯಾಗುವುದಿಲ್ಲವೆಂದು ಮನವೊಲಿಸುವ ಪ್ರಯತ್ನ ಮಾಡಿದ್ದೇನೆ. ನನಗೆ ನನ್ನ ಸಮುದಾಯ ಮತ್ತು ನನ್ನ ಧರ್ಮ ಮುಖ್ಯ, ಹಾಗೊಂದು ವೇಳೆ ಕಾಯ್ದೆಯಿಂದ ತೊಂದರೆಯಾಗುವುದೇ ಆದಲ್ಲಿ ನಾನು ರಾಜೀನಾಮೆ ನೀಡುವುದಾಗಿ ಸ್ಪಷ್ಟಪಡಿಸಿದ್ದೇನೆ. ಆದರೆ ಖುದ್ದು ದೇಶದ ಜವಾಬ್ದಾರಿಯುತ ಪ್ರಧಾನಿ  ಸ್ಥಾನದಲ್ಲಿರುವವರೇ ಭರವಸೆ ನೀಡಿದರೂ ಹೋರಾಟಗಳು ಮುಂದುವರೆದಿರುವುದು ಬೇಸರದ ವಿಚಾರ ಎಂದು ಅವರು ಹೇಳಿದರು. 

ತ್ರಿವಳಿ ತಲಾಖ್ ಹಾಗೂ ರಾಮಮಂದಿರ ತೀರ್ಪಿನ ಸಂದರ್ಭ ಒಗ್ಗಟ್ಟಿನಿಂದ ದೇಶದ ಜನ ಸ್ವಾಗತಿಸಿದನ್ನು ಸಹಿಸದ ಅತೃಪ್ತ ಆತ್ಮಗಳು ಇದೀಗ ಪೌರತ್ವ ಕಾಯ್ದೆಯನ್ನು ಅಸ್ತ್ರವನ್ನಾಗಿ ಬಳಸಿಕೊಂಡು ಗೊಂದಲ ಸೃಷ್ಟಿಸಿ, ಅಶಾಂತಿ ಮೂಡಿಸುತ್ತಿವೆ ಎಂದು ಆರೋಪಿಸಿದರು. 

ಬಂದವರೆಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸುತ್ತಲೇ ಇದ್ದ ಪರಿಣಾಮ ಇಂದು ದೇಶ ಹಾಳಾಗಿದೆ, ಭಾರತವನ್ನು ಉಳಿಸಿಕೊಳ್ಳುವ ಮಹತ್ತರ ಜವಬ್ದಾರಿ ಎಲ್ಲರ ಮೇಲೂ ಇದ್ದು, ಪೌರತ್ವ ಕಾಯ್ದೆ ಇದಕ್ಕೆ ಸಹಕಾರಿಯಾಗಿದೆ. ಬಾಂಬ್ ಸ್ಫೋಟಿಸಲು ಬರುವವರಿಗೆ ಇಲ್ಲಿರಲು ಯಾಕೆ ಅವಕಾಶ ನೀಡಬೇಕೆಂದು ಪ್ರಶ್ನಿಸಿದ ರಹೀಂ ಉಚ್ಚಿಲ, ಇಂದು ಕಾಯ್ದೆಯನ್ನು ವಿರೋಧಿಸುತ್ತಿರುವವರು ಮುಂದೊಂದು ದಿನ ಅದರ ಮಹತ್ವವನ್ನು ಅರಿತು ತಲೆ ತಗ್ಗಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಮುಸ್ಲಿಂ ರಾಷ್ಟ್ರಗಳಲ್ಲಿ ನೆಲೆ ನಿಂತಿರುವ ಭಾರತೀಯರಿಗೆ ಆ ದೇಶಗಳ ಪೌರತ್ವ ದೊರೆತಿದೆಯೇ ಎಂದು ಅವರು ಪ್ರಶ್ನಿಸಿದರು. ಕೊಡಗಿನಲ್ಲಿ ಹುಟ್ಟಿ ಬೆಳೆದ ಮುಸಲ್ಮಾನರು ಭಾರತೀಯರೇ ಆಗಿದ್ದಾರೆ, ಪೌರತ್ವ ಕಾಯ್ದೆಯಿಂದ ಇವರನ್ನು ಹೊರ ಹಾಕಲು ಸಾಧ್ಯವಿಲ್ಲ. ಆದರೆ ಕಾಫಿ ತೋಟಗಳಲ್ಲಿ ಕಾರ್ಮಿಕರಾಗಿ ಸೇರಿಕೊಂಡಿರುವ ಬಾಂಗ್ಲಾ ದೇಶಿಗರು ಮಾತ್ರ ಹೊರ ಹೋಗಲಿದ್ದಾರೆ ಎಂದು ಸ್ಪಷ್ಟಪಡಿಸಿದ ರಹೀಂ ಉಚ್ಚಿಲ, ಕಾಯ್ದೆಯನ್ನು ವಿರೋಧಿಸುವವರಿಗೆ ಪರಕೀಯರ ಬಗ್ಗೆ ವ್ಯಾಮೋಹ ಯಾಕೆ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X