Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾರ್ವಜನಿಕ ಶಿಕ್ಷಣ ಬಲಪಡಿಸಲು ಖಾಸಗಿ...

ಸಾರ್ವಜನಿಕ ಶಿಕ್ಷಣ ಬಲಪಡಿಸಲು ಖಾಸಗಿ ಸಹಭಾಗಿತ್ವ ಅಗತ್ಯ: ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ17 Jan 2020 11:25 PM IST
share
ಸಾರ್ವಜನಿಕ ಶಿಕ್ಷಣ ಬಲಪಡಿಸಲು ಖಾಸಗಿ ಸಹಭಾಗಿತ್ವ ಅಗತ್ಯ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಜ. 17: ಶಿಕ್ಷಣ ಇಲಾಖೆ ಅತಿದೊಡ್ಡ ಇಲಾಖೆಯಾಗಿದ್ದು, ನಮ್ಮ ನಾಡಿನ ಮಕ್ಕಳ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ಸಮುದಾಯದ ಸಹಭಾಗಿತ್ವ ತೀರಾ ಅತ್ಯಗತ್ಯ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್ ಹೇಳಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿ ಇಲಾಖೆಯಿಂದ ಏರ್ಪಡಿಸಿದ್ದ ಸಾರ್ವಜನಿಕ ಶಿಕ್ಷಣ ಬಲಪಡಿಸುವಲ್ಲಿ ಖಾಸಗಿ ಸಹಭಾಗಿತ್ವ ಕುರಿತ ಸಂವಾದದಲ್ಲಿ ಮಾತನಾಡಿದ ಅವರು, ವಿಸ್ತಾರ ಹೊಂದಿರುವ ಶಿಕ್ಷಣ ಇಲಾಖೆಯ ಇಂದಿನ ಅಗತ್ಯಗಳನ್ನು ಪೂರೈಸಲು ಖಾಸಗಿ ಸಹಭಾಗಿತ್ವ ಅಗತ್ಯ ಈಗ ಅನಿವಾರ್ಯವೂ ಆಗಿದೆ ಎಂದರು.

ನೆರೆ ಹಾವಳಿ ವೇಳೆ ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಾನು, ಮಕ್ಕಳ ಪುಸ್ತಕ, ಲೇಖನಿಗಳ ಸಮೇತ ಮನೆಗಳು ಮತ್ತು ಶಾಲೆಗಳು ಮುಳುಗಿ ಹೋದ ಘಟನೆಗಳನ್ನು ಕಣ್ಣಾರೆ ಕಂಡಿದ್ದೇನೆ. ಆ ಮಕ್ಕಳ ಶಿಕ್ಷಣಕ್ಕಾಗಿ ಸಮುದಾಯ ಬೆಂಬಲಕ್ಕೆ ನಿಲ್ಲಬೇಕಾದ ಅನಿವಾರ್ಯ ಕರ್ತವ್ಯ. ಆ ವೇಳೆ ಮಕ್ಕಳನ್ನು ಸರಕಾರಿ, ಅನುದಾನಿತ, ಅನುದಾನರಹಿತ ಎಂಬ ಭೇದವಿಲ್ಲದೆ ಎಲ್ಲರಿಗೂ ಇನ್ನೊಂದು ಸೆಟ್ ಪಠ್ಯ-ಪುಸ್ತಕಗಳನ್ನು ಕೇವಲ 3 ವಾರದಲ್ಲಿ ಪೂರೈಸಲು ಕ್ರಮಕೈಗೊಳ್ಳಲಾಯಿತು ಎಂದು ತಿಳಿಸಿದರು.

ನೆರೆ ಇಳಿದ ನಂತರ ಮಕ್ಕಳು ಶೆಡ್‌ಗಳು, ತೆಂಗಿನ ಗರಿ ಚಪ್ಪರ, ತಗಡಿನ ನೆರಳಲ್ಲಿ ಪಾಠ ಆಲಿಸುತ್ತಿರುವಂತಹ ಅನುಭವಗಳನ್ನು ಕಂಡಿದ್ದೇನೆ. ಈ ಎಲ್ಲ ಲೋಪಗಳ ಹೊರತಾಗಿ ನಾವು ನಮ್ಮ ಮಕ್ಕಳ ಆತ್ಮವಿಶ್ವಾಸ ಕುಗ್ಗದಂತೆ ಕೆಲಸ ಮಾಡಬೇಕಾಗಿದ್ದು, ಎಲ್ಲ ರೀತಿಯಲ್ಲೂ ಇದಕ್ಕೆ ಸರ್ವರ ಸಹಕಾರದ ಅಗತ್ಯವಿದೆ ಎಂದರು.

ಜ.20ಕ್ಕೆ ಪ್ರಧಾನಿ ಮೋದಿ ಶಾಲಾ ಮಕ್ಕಳಿಗಾಗಿ ದಿಲ್ಲಿಯಲ್ಲಿ ಏರ್ಪಡಿಸಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಜ್ಯದ 42 ಮಕ್ಕಳು ಆಯ್ಕೆಯಾಗಿದ್ದು, ಅದರಲ್ಲಿ 27 ಮಕ್ಕಳು ಸರಕಾರಿ ಶಾಲೆ ಮಕ್ಕಳು ಎನ್ನುವುದು ನಿಜಕ್ಕೂ ಸಂತೋಷದ ಸಂಗತಿ. ಸರಕಾರಿ ಶಾಲೆಗಳ ಹಾಗೂ ಸರಕಾರಿ ಶಿಕ್ಷಕರ ಕಾರ್ಯಕ್ಷಮತೆ ಖಾಸಗಿ ಶಾಲೆಗಳಿಗೂ ಯಾವುದೇ ರೀತಿಯಲ್ಲೂ ಕಡಿಮೆ ಇಲ್ಲ ಎಂಬುದನ್ನು ಸಾದರಪಡಿಸಿವೆ.

ಇದಕ್ಕೆ ಸಮುದಾಯದ ಬೆಂಬಲವೂ ದೊರೆತರೆ ನಮ್ಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಲು ಸಾಧ್ಯವಾಗುತ್ತದೆ ಎಂದ ಅವರು, ಎಷ್ಟೋ ಶಾಲೆಗಳಲ್ಲಿ ಕನಿಷ್ಟ ಶೌಚಾಲಯಗಳೂ ಇಲ್ಲ. ಇಂತಹ ಕೊರತೆಗಳ ಮಧ್ಯೆಯೂ ಮಕ್ಕಳು ಆತ್ಮವಿಶ್ವಾಸದಿಂದಲೇ ಅಭ್ಯಸಿಸುತ್ತಿದ್ದಾರೆನ್ನುವುದು ಸಂತಸದ ಸಂಗತಿ ಎಂದರು.

ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸಬೇಕಾದ ಅಗತ್ಯವಿದ್ದು, ಅದಕ್ಕಾಗಿ ಏರ್ಪಡಿಸಿರುವ ಈ ಸಂವಾದಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಬೆಂಬಲ ವ್ಯಕ್ತವಾಗಿರುವುದನ್ನು ಕಂಡು ಮನಸ್ಸುತುಂಬಿ ಬಂದಿದೆ. ಇದು ಈ ನಿಟ್ಟಿನಲ್ಲಿ ಆರಂಭದ ಕಾರ್ಯಕ್ರಮ. ಇನ್ನು ನಾವು-ನೀವೆಲ್ಲ ಸೇರಿ ಕಾರ್ಯಗಳನ್ನು ಆರಂಭಿಸಿ ನಮ್ಮ ಮಕ್ಕಳ ನೆರವಿಗೆ ಧಾವಿಸಬೇಕಿದೆ.

ಪ್ರತಿ ತಿಂಗಳೂ ನಡೆಸಿಕೊಡುವ ಸಂವೇದನಾ-ಸಂವಾದ ಕಾರ್ಯಕ್ರಮದಲ್ಲಿ ನಮ್ಮ ಶಾಲಾ ಮಕ್ಕಳು ನನ್ನೊಂದಿಗೆ ಮಾತನಾಡುವಾಗ ನಮಗೆ ಕಂಪ್ಯೂಟರ್ ಅಗತ್ಯವಿದೆ ಎಂದು ಕೇಳುತ್ತಾರೆ. ನಿಜಕ್ಕೂ ಅವರಿಗೆ ಅದು ಬೇಕಾಗಿದೆ. ಮಕ್ಕಳು ಬಡತನದ ಹಿನ್ನೆಲೆಯಿಂದ ಬಂದಿರುವುದರಿಂದ ಅವುಗಳನ್ನು ಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಅವರ ಅಗತ್ಯತೆ ಪೂರೈಸಬೇಕಾದರೆ ಸಮುದಾಯದ ಸಹಭಾಗಿತ್ವ ಅತ್ಯಂತ ಪ್ರಮುಖ ಎಂದರು.

ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಆಕರ್ಷಕ ವೇತನದ ಹುದ್ದೆಗಳನ್ನು ತೊರೆದು ಸ್ವಯಂ ಸೇವಾ ಸಂಸ್ಥೆ ರಚಿಸಿಕೊಂಡು ಶಾಲೆಗಳ ಅಭಿವೃದ್ಧಿಗೆ ತೊಡಗಿಸಿಕೊಂಡ ಕೆಲವರ ಸೇವೆಯನ್ನು ಶ್ಲಾಘನೀಯ ಎಂದು ಸುರೇಶ್‌ ಕುಮಾರ್ ಇದೇ ವೇಳೆ ಮೆಚ್ಚುಗೆ ವ್ಯಕ್ತಪಡಿಸಿದರು.

ನೆರವು: ಶಾಲಾ ಕಟ್ಟಡ, ಕೊಠಡಿಗಳನ್ನು ನಿರ್ಮಿಸಲು ಮುಂದಾಗುತ್ತಿದ್ದ ಭಾರತೀಯ ಯುವ ತೇರಾಪಂತ್ ಸಮಿತಿ ವಿಮಲ್ ಕಠಾರಿಯಾ, ಶಾಲೆಗಳಿಗೆ ಎಲೆಕ್ಟ್ರಾನಿಕ್ ವಸ್ತುಗಳಾದ ಕಂಪ್ಯೂಟರ್, ಲ್ಯಾಪ್‌ಟಾಪ್ ಸೆಟ್‌ಗಳನ್ನು ಶಿಕ್ಷಣ ಇಲಾಖೆ ಆಯುಕ್ತರಿಗೆ ಸಚಿವರ ಮೂಲಕ ಹಸ್ತಾಂತರಿಸಿದರು.

100 ಶಾಲಾ ಕೊಠಡಿಗಳ ನಿರ್ಮಾಣ ಪ್ರಗತಿಯಲ್ಲಿವೆ, ಇನ್ನು ನಾವು ಶಾಲೆಗಳಲ್ಲಿ ಹಸಿರೀಕರಣ ಮತ್ತು ಡಿಜಿಟಲ್ ಶಿಕ್ಷಣಕ್ಕೆ ಆದ್ಯತೆ ನೀಡುವುದು ಎಂದು ತಿಳಿಸಿದರು. ಸ್ಯಾಮ್ಸಂಗ್ ಕಂಪೆನಿ ತುಮಕೂರು ಮತ್ತು ರಾಮನಗರ ಜಿಲ್ಲೆಯ 50 ಶಾಲೆಗಳಿಗೆ 1000 ಇ-ಕಂಟೆಂಟ್ಸ್ ಸಮೇತ ಟ್ಯಾಬ್ಗಳನ್ನು ನೀಡುತ್ತಿದ್ದು, ಇನ್ನು ಮುಂದೆ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ 50 ಶಾಲೆಗಳಿಗೆ 1000 ಟ್ಯಾಬ್ ಗಳನ್ನು ಒದಗಿಸುವುದಾಗಿ ತಿಳಿಸಿದರು.

ಸಂವಾದದಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಆಯುಕ್ತ ಡಾ.ಕೆ.ಜಿ.ಜಗದೀಶ್, ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕ ಡಾ.ಎಂ.ಟಿ.ರೇಜು, ಹಿರಿಯ ಸಹಾಯಕ ನಿರ್ದೇಶಕಿ ಬಿ.ಮಂಗಳಾ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X