Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬ್ಯಾಕ್‌ಲಾಗ್ ಹುದ್ದೆಗಳ ತ್ವರಿತ...

ಬ್ಯಾಕ್‌ಲಾಗ್ ಹುದ್ದೆಗಳ ತ್ವರಿತ ನೇಮಕಕ್ಕೆ ಡಿಸಿಎಂ ಕಾರಜೋಳ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 Jan 2020 11:41 PM IST
share
ಬ್ಯಾಕ್‌ಲಾಗ್ ಹುದ್ದೆಗಳ ತ್ವರಿತ ನೇಮಕಕ್ಕೆ ಡಿಸಿಎಂ ಕಾರಜೋಳ ಸೂಚನೆ

 ಬೆಂಗಳೂರು, ಜ. 17: ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು, ಸಹಕಾರ ಸಂಸ್ಥೆಗಳು, ವಿವಿಗಳಲ್ಲಿ ಖಾಲಿ ಇರುವ 2,508 ಬ್ಯಾಕ್‌ಲಾಗ್ ಹುದ್ದೆಗಳನ್ನು ಒಂದು ತಿಂಗಳೊಳಗೆ ನೇಮಕಾತಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮಿತಿ ಕೊಠಡಿಲ್ಲಿ ಬ್ಯಾಕ್‌ಲಾಗ್ ಹುದ್ದೆಗಳ ನೇಮಕ ಕುರಿತು ಸಂಪುಟ ಉಪಸಮಿತಿ ಸಭೆ ಬಳಿಕ ಮಾತನಾಡಿದ ಅವರು, ಉನ್ನತ ಶಿಕ್ಷಣ- 882 ಹುದ್ದೆ, ಪ್ರಾಥಮಿಕ ಶಿಕ್ಷಣ-432, ವಾಣಿಜ್ಯ ಮತ್ತು ಕೈಗಾರಿಕೆ-346, ಲೋಕೋಪಯೋಗಿ-184, ಸಾರಿಗೆ-178, ಸಹಕಾರ-132, ರೇಶ್ಮೆ- 120, ನಗರಾಭಿವೃದ್ಧಿ-34, ತೋಟಗಾರಿಕೆ-34, ಐಟಿ-ಬಿಟಿ-32, ಆರೋಗ್ಯ-27, ಇಂಧನ-25, ಅರಣ್ಯ-23, ಕೃಷಿ-20, ವೈದ್ಯಕೀಯ ಶಿಕ್ಷಣ-18, ಕನ್ನಡ ಮತ್ತು ಸಂಸ್ಕೃತಿ-7, ಗೃಹ-5 ಸೇರಿದಂತೆ ಎಲ್ಲ ಇಲಾಖೆಗಳಲ್ಲಿನ ಹುದ್ದೆಗಳನ್ನು ತಿಂಗಳೊಳಗೆ ಭರ್ತಿ ಮಾಡಬೇಕು.

ಅನುದಾನಿತ ಕಾಲೇಜುಗಳಲ್ಲಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು 2 ತಿಂಗಳೊಳಗೆ ಭರ್ತಿ ಮಾಡಬೇಕು. ಅನುದಾನಿತ ಶಿಕ್ಷಣ ಸಂಸ್ಥೆಗಳು ಮುಂದಾಗದಿದ್ದರೆ ಸಮಾಜ ಕಲ್ಯಾಣ ಇಲಾಖೆಯಿಂದ ಭರ್ತಿ ಮಾಡಲಾಗುವುದು. ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಗೆ 15 ದಿನಗಳೊಳಗೆ ಅನುಮತಿ ನೀಡಬೇಕು ಎಂದು ಸೂಚಿಸಿದರು.

ಲೋಕೋಪಯೋಗಿ ಇಲಾಖೆಯಲ್ಲಿರುವ ಬ್ಯಾಕ್‌ಲಾಗ್ ಹುದ್ದೆಗಳು ‘ಸಿ’ ಗುಂಪಿನ ತಾಂತ್ರಿಕೇತರ ಹುದ್ದೆಗಳಾಗಿರುವುದರಿಂದ ಇಲಾಖೆಯಿಂದಲೇ ಕೂಡಲೇ ಮೆರಿಟ್ ಆಧಾರದಡಿ ನೇಮಕ ಪ್ರಕ್ರಿಯೆಗೆ ಕ್ರಮಕೈಗೊಳ್ಳಬೇಕು. ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ವಿಶೇಷ ನಿಯಮಾವಳಿ ರೂಪಿಸಲಾಗಿದೆ. ವಿನಾಯಿತಿಯನ್ನು ನೀಡಲಾಗಿದೆ. ಹಣಕಾಸು ಇಲಾಖೆಯ ಅನುಮತಿಯ ಅಗತ್ಯವೂ ಇಲ್ಲ.

ಈ ಹುದ್ದೆಗಳ ನೇಮಕಾತಿಗೆ ಯಾವುದೇ ತಾಂತ್ರಿಕ ತೊಡಕು ಇರುವುದಿಲ್ಲ. ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸಲು ಕ್ರಮಕೈಗೊಳ್ಳಬೇಕು. ಬ್ಯಾಕ್‌ಲಾಗ್ ಹುದ್ದೆಗಳ ನೇಮಕಕ್ಕೆ ಯಾವುದೇ ತಾಂತ್ರಿಕ ಕಾರಣ ಹೇಳದೆ ಭರ್ತಿ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X