ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ
ಹುಬ್ಬಳ್ಳಿ, ಜ.19: ರಾಷ್ಟ್ರದಾದ್ಯಂತ ಇಂದಿನಿಂದ ಪ್ರಾರಂಭವಾಗಿರುವ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಹುಬ್ಬಳ್ಳಿಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ನಿವಾಸದ ಬಳಿ ಮಗುವಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಈ ಅಭಿಯಾನಕ್ಕೆ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಡಾ.ಎಸ್.ಎಂ.ಹೊನಕೇರಿ ಮತ್ತಿತರರು ಉಪಸ್ಥಿತರಿದ್ದರು.