Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿದ್ಧಗಂಗಾ ಶ್ರೀ ವಿಶ್ವ ಸಂತ:...

ಸಿದ್ಧಗಂಗಾ ಶ್ರೀ ವಿಶ್ವ ಸಂತ: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್ ಪಠಾಣ್

ವಾರ್ತಾಭಾರತಿವಾರ್ತಾಭಾರತಿ19 Jan 2020 8:38 PM IST
share

ಬೆಳಗಾವಿ, ಜ.19: ತುಮಕೂರಿನ ಸಿದ್ದಗಂಗೆಯ ಡಾ.ಶಿವಕುಮಾರ ಸ್ವಾಮೀಜಿ ಎಲ್ಲ ಸಮುದಾಯದವರಿಗೆ ವಿದ್ಯೆ, ವಸತಿ ಹಾಗೂ ಅನ್ನದಾನ ಮಾಡುವ ಮೂಲಕ ವಿಶ್ವ ಸಂತರಾಗಿ ಹೊರ ಹೊಮ್ಮಿದವರು ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್ ಪಠಾಣ್ ತಿಳಿಸಿದರು.

ರವಿವಾರ ನಗರದ ಲಕ್ಷ್ಮಿ ಟೆಕಡಿಯ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯ ಪ್ರಥಮ ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದಾಗ ತುಮಕೂರಿನ ಮುಸ್ಲಿನರು ತಮ್ಮ ಮಸೀದಿಯಲ್ಲಿ ಶಿವಕುಮಾರ ಸ್ವಾಮೀಜಿಯವರ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸುವ ಮೂಲಕ ನಮನ ಸಲ್ಲಿಸಿದ್ದರು ಎಂದು ಅವರು ಹೇಳಿದರು. ಶಿವಕುಮಾರ ಸ್ವಾಮೀಜಿ ಯಾರ ಸಹಾಯವಿಲ್ಲದೆಯೇ ಲಕ್ಷಾಂತರ ವಿದ್ಯಾರ್ಥಿಗಳಿಗೆ ಆಶ್ರಯ ನೀಡುವುದರ ಮೂಲಕ ಶ್ರೀಮಠದಿಂದ ಸಹಾಯ ಮಾಡಿದ್ದನ್ನು ಅವರು ಸ್ಮರಿಸಿಕೊಂಡರು.

ಬೆಳಗಾವಿ ಗ್ರಾಮೀಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ್ ಪಾಟೀಲ್ ಮಾತನಾಡಿ, ಸಿದ್ಧಗಂಗಾ ಸ್ವಾಮೀಜಿ ನಮಗೆಲ್ಲರಿಗೂ ಸ್ಪೂರ್ತಿ. ಪ್ರಧಾನಿ ನರೇಂದ್ರ ಮೋದಿ, ಶ್ರೀಗಳ ಬಗ್ಗೆ ಅತೀವ ಅಭಿಮಾನದಿಂದ ಗುರುವಿನ ಗದ್ದುಗೆಯ ದರ್ಶನ ಪಡೆದಿದ್ದಾರೆ ಎಂದರು.

ಸಿದ್ದಗಂಗೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ನ, ಶಿಕ್ಷಣ, ವಸತಿ ನೀಡುವ ಮೂಲಕ ತ್ರಿವಿಧ ದಾಸೋಹಿಯಾಗಿ ನಡೆದಾಡುವ ದೇವರ ಮಾರ್ಗದರ್ಶನದಲ್ಲಿ ಎಲ್ಲರೂ ನಡೆಯಬೇಕು ಅಂದಾಗ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೂಳಪ್ಪ ಹೊಸಮನಿ ಮಾತನಾಡಿ, ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಎಲ್ಲ ಮಹಾತ್ಮರ ಸ್ಮರಣೆ ಮಾಡುತ್ತಾರೆ. ಈಗ ಸಿದ್ದಗಂಗೆಯ ಶಿವಕುಮಾರ ಸ್ವಾಮೀಜಿಯವರ ಸ್ಮರಣೆ ಮಾಡುವುದರ ಮೂಲಕ ಹುಕ್ಕೇರಿ ಶ್ರೀಗಳು ಶಿವಕುಮಾರ ಸ್ವಾಮೀಜಿಯ ಆದರ್ಶಗಳನ್ನು ಅಳವಡಿಸಿಕೊಳ್ಳಲು ಕರೆ ನೀಡಿದ್ದಾರೆ ಎಂದರು.

ಸಾನಿಧ್ಯ ವಹಿಸಿದ್ಧ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಿದ್ದಗಂಗೆಯ ಶಿವಕುಮಾರ ಸ್ವಾಮೀಜಿ ವಿಶ್ವಕಂಡ ಅಪರೂಪದ ಸಂತ. ತ್ರಿಕಾಲ ಶಿವ ಪೂಜೆಯ ಜತೆಗೆ, ತ್ರಿವಿಧ ದಾಸೋಹ ಮೂರ್ತಿಯಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ನ, ಶಿಕ್ಷಣದ ದಾನ ಮಾಡಿರುವ ಒಬ್ಬ ಅಪರೂಪದ ಗುರು ಎಂದರು.

ಎಲ್ಲ ಭಾಗದಲ್ಲಿಯೂ ಈ ಮಠದಿಂದ ಆಶ್ರಯ ಪಡೆದು ಅಧ್ಯಯನ ಮಾಡಿದ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಗೆ ಉತ್ತರ ಕರ್ನಾಟಕದ ಅನೇಕ ಮಕ್ಕಳು ಸಿದ್ದಗಂಗಾ ಮಠದಲ್ಲಿ ಅಧ್ಯಯನ ಮಾಡಿರುವುದನ್ನು ಸ್ಮರಿಸಲೇಬೇಕು. ಈ ಭಾಗದ ಜನರ ಪರವಾಗಿ ನಾವು ಗುರುವಿನ ಸ್ಮರಣೆ ಮಾಡಿ ಕೃತಜ್ಞತೆ ಅರ್ಪಿಸುವ ಸಮಾರಂಭ ಇದು ಎಂದರು.

ಕಾರ್ಯಕ್ರಮದಲ್ಲಿ ವಿಜಯ ಶಾಸ್ತ್ರಿ ಹಿರೇಮಠ, ಡಾ.ನಂದೀಶ್, ವೀರುಪಾಕ್ಷಯ್ಯ ಸಾಲಿಮಠ, ಚಂದ್ರಶೇಖರಯ್ಯ ಸವಡಿಸಾಲಿಮಠ, ಅಶೋಕ ತೆರೆಗೌಡರ, ಸುಮಂಗಲಾ ಸಿಂತ್ರಿ, ಉಮಾ, ಸುನೀತಾ, ಮಲ್ಲಿಕಾರ್ಜುನ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X