Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷಿ ಆಧಾರಿತ ಉದ್ಯಮ ಸ್ಥಾಪನೆ-ಗ್ರಾಮೀಣ...

ಕೃಷಿ ಆಧಾರಿತ ಉದ್ಯಮ ಸ್ಥಾಪನೆ-ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಒತ್ತು: ಹೂಡಿಕೆದಾರರಿಗೆ ಬಿಎಸ್‌ವೈ ಮನವಿ

ದಾವೋಸ್‌ನಲ್ಲಿ ವರ್ಲ್ಡ್ ಎಕನಾಮಿಕ್ ಫೋರಂ

ವಾರ್ತಾಭಾರತಿವಾರ್ತಾಭಾರತಿ21 Jan 2020 9:23 PM IST
share
ಕೃಷಿ ಆಧಾರಿತ ಉದ್ಯಮ ಸ್ಥಾಪನೆ-ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಒತ್ತು: ಹೂಡಿಕೆದಾರರಿಗೆ ಬಿಎಸ್‌ವೈ ಮನವಿ

ದಾವೋಸ್, ಜ.21: ಸ್ವಿಟ್ಜರ್ಲೆಂಡಿನ ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೊದಲನೆ ದಿನವಾದ ಇಂದು ವಿವಿಧ ಹೂಡಿಕೆದಾರರು ಹಾಗೂ ಉದ್ಯಮಿಗಳೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಕೃಷಿ ಕೇಂದ್ರಿತ ಉದ್ಯಮ ಸ್ಥಾಪನೆ ಮಾಡುವಂತೆ ಹಾಗೂ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಒತ್ತು ನೀಡುವಂತೆ ಮನವಿ ಮಾಡಿದರು.

ಇಂದು ಬೆಳಗ್ಗೆ ಸ್ವಿಸ್ ಮೂಲದ 2000 ವ್ಯಾಟ್ ಕಂಪೆನಿಯ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸುವ ಸಂದರ್ಭದಲ್ಲಿ ಮುಖ್ಯಮಂತ್ರಿ, ರೈತರ ಆತ್ಮಹತ್ಯೆಯ ಪ್ರವೃತ್ತಿಯನ್ನು ತಡೆಯುವ ನಿಟ್ಟಿನಲ್ಲಿ ಕೃಷಿ ಆಧಾರಿತ ಆರ್ಥಿಕತೆಯನ್ನು ಸುಧಾರಿಸುವ ಯೋಜನೆಗಳ ಕುರಿತು ಆಸಕ್ತಿ ವ್ಯಕ್ತಪಡಿಸಿದರು.

ರಾಜ್ಯಕ್ಕೆ ಹೊಸ ಯೋಜನೆಗಳು, ಬಂಡವಾಳ ಹೂಡಿಕೆ ಖಂಡಿತ ಬರಬೇಕು. ರಾಜ್ಯದ ಆರ್ಥಿಕತೆಗೆ ಉತ್ತೇಜನ ನೀಡುವ ಜೊತೆಗೆ ಯುವಕರನ್ನು ಸ್ವಾವಲಂಬಿಗಳನ್ನಾಗಿಸಲು ಉದ್ಯೋಗಾವಕಾಶ ಸೃಷ್ಟಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

ಈ ಸಭೆಯಲ್ಲಿ 2000 ವ್ಯಾಟ್ ಕಂಪೆನಿಯ ಫುಡ್ ಕ್ಲಸ್ಟರ್‌ಗಳ ಅಭಿವೃದ್ಧಿ ಯೋಜನೆಯ ಕುರಿತು ವಿಶೇಷ ಆಸಕ್ತಿ ವಹಿಸಿದ ಮುಖ್ಯಮಂತ್ರಿ, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡುವ ಇಂತಹ ಯೋಜನೆಗಳಿಂದ ಕೃಷಿ ಆರ್ಥಿಕತೆ ಉತ್ತಮಗೊಳ್ಳಲಿದೆ ಎಂದು ಅಭಿಪ್ರಾಯಪಟ್ಟರು.

ಈ ಕುರಿತು ಪ್ರಾತ್ಯಕ್ಷಿಕೆ ನೀಡಿದ ಕಂಪೆನಿಯ ಪ್ರತಿನಿಧಿಗಳು, ತಮ್ಮ ಬಳಿ ತಂತ್ರಜ್ಞಾನ ಇರುವುದಾಗಿ ಹಾಗೂ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಲು ಪೂರಕವಾದ ಫುಡ್ ಕ್ಲಸ್ಟರುಗಳ ಅಭಿವೃದ್ಧಿಯಲ್ಲಿ ಹೂಡಿಕೆ ಮಾಡಲು ಆಸಕ್ತಿ ಹೊಂದಿರುವುದಾಗಿ ವಿವರಿಸಿದರು. ಸತ್ವಪೂರ್ಣ ಆಹಾರ ಬೆಳೆಯಲು ಅಗತ್ಯವಿರುವ ಎಲ್ಲ ನೆರವು ಮತ್ತು ವೈಜ್ಞಾನಿಕ ಕೃಷಿ ತಂತ್ರಜ್ಞಾನಗಳನ್ನು ನಾವು ಒದಗಿಸಲಿದ್ದು, ಈ ಉತ್ಪನ್ನಗಳ ಮೌಲ್ಯವರ್ಧನೆಯ ಮೂಲಕ ಮಾರುಕಟ್ಟೆ ಒದಗಿಸಲಾಗುವುದು ಎಂದು ಸಂಸ್ಥೆಯ ವಿಜ್ಞಾನಿ ಆಂಡ್ರಿಯಾಸ್ ಬಿಂಕರ್ಟ್ ತಿಳಿಸಿದರು.

ಕಂಪೆನಿಯ ಸಂಸ್ಥಾಪಕ ಪಾಲುದಾರ ಮಾಧವ್ ಭಾಗವತ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಸ್ಮಾರ್ಟ್ ಸಿಟಿಯ ವಿನೂತನ ಪರಿಕಲ್ಪನೆಯ ಕುರಿತು ಮಾಹಿತಿ ನೀಡಿದರು. ತಮ್ಮ ಕಂಪೆನಿಯು ಇಂಗಾಲ ತಟಸ್ಥ ಸ್ಮಾರ್ಟ್ ಉಪನಗರಗಳ ಅಭಿವೃದ್ಧಿಯಲ್ಲಿ ಪರಿಣತಿ ಹೊಂದಿದ್ದು, ಈಗಾಗಲೇ ಪುಣೆ ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದೊಂದಿಗೆ ಒಪ್ಪಂದ ಸಹಿ ಮಾಡಿರುವುದಾಗಿ ತಿಳಿಸಿದರು.

ಇದಕ್ಕೂ ಮುನ್ನ ರಿನ್ಯೂ ಪವರ್ ಪ್ರತಿನಿಧಿಗಳು ರಾಜ್ಯದ ಬರಡು ಭೂಮಿಯಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲು ಆಸಕ್ತಿ ತೋರಿದರು.

ಕಂಪೆನಿಯ ಸಿಇಓ ಸಮಂತ್ ಸಿನ್ಹಾ, ತಮ್ಮ ಕಂಪೆನಿಯು ರಾಜ್ಯದ ಬೇಡಿಕೆಗಿಂತ ಹೆಚ್ಚುವರಿಯಾಗಿ ಉತ್ಪಾದನೆಯಾದ ವಿದ್ಯುತ್ ಸಂಗ್ರಹಿಸುವ ಬ್ಯಾಟರಿಗಳು ಮತ್ತು ಇತರ ಉಪಕರಣಗಳನ್ನು ಅಳವಡಿಸಲು ಯೋಜಿಸಿರುವುದಾಗಿ ತಿಳಿಸಿದರು. ಆಡಳಿತಾತ್ಮಕ ಮತ್ತು ಕಾನೂನು ತೊಡಕುಗಳನ್ನು ನಿವಾರಿಸಲು ಸರಕಾರ ಕ್ರಮ ವಹಿಸುವಂತೆ ಅವರು ಸಲಹೆ ಮಾಡಿದರು.

ಇಂದು ಮುಖ್ಯಮಂತ್ರಿ ಹಾಗೂ ಸರಕಾರದ ಅಧಿಕಾರಿಗಳನ್ನು ಭೇಟಿ ಮಾಡಿದ ಕಂಪೆನಿಗಳ ಪ್ರತಿನಿಧಿಗಳಲ್ಲಿ ಬಹುತೇಕ ಮಂದಿ ರೈತರಿಂದ ಜಮೀನು ಖರೀದಿಸಲು ಸರಕಾರದ ಕೆಲವು ಅನಪೇಕ್ಷಿತ ನಿಯಮಗಳನ್ನು ತಿದ್ದುಪಡಿ ಅಥವಾ ರದ್ದುಪಡಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಯು ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಹೂಡಿಕೆದಾರರ ನಿಯೋಗಗಳೊಂದಿಗೆ ಚರ್ಚಿಸುವಾಗ ಗ್ರಾಮೀಣ ಆರ್ಥಿಕತೆಯನ್ನು ಸುಧಾರಿಸುವ, ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ವಿಷಯಕ್ಕೆ ಹೆಚ್ಚಿನ ಒತ್ತು ನೀಡಿದರು. ನಮ್ಮ ರೈತರು ಮತ್ತು ಗ್ರಾಮೀಣ ಯುವಕರ ಹಿತ ರಕ್ಷಣೆ ಮಾಡುವ ಹೂಡಿಕೆದಾರರು ಹಾಗೂ ಕೈಗಾರಿಕೆಗಳಿಗೆ ಸರಕಾರ ವಿಶೇಷ ಆದ್ಯತೆ ನೀಡಲಿದೆ ಎಂದು ಅವರು ನುಡಿದರು.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಐಟಿ, ಬಿಟಿ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಯ ಕಾರ್ಯದರ್ಶಿ ಸೆಲ್ವಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X