Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.25-26ರಂದು ಬೊಂದೇಲ್ ಫಿಯೆಸ್ಟಾ

ಜ.25-26ರಂದು ಬೊಂದೇಲ್ ಫಿಯೆಸ್ಟಾ

ವಾರ್ತಾಭಾರತಿವಾರ್ತಾಭಾರತಿ22 Jan 2020 12:57 PM IST
share
ಜ.25-26ರಂದು ಬೊಂದೇಲ್ ಫಿಯೆಸ್ಟಾ

ಮಂಗಳೂರು, ಜ.22: ನಗರದ ಬೊಂದೆಲ್ ಚರ್ಚ್ ವಠಾರದಲ್ಲಿ ಜ.25 ಮತ್ತು 26ರಂದು ಬೊಂದೆಲ್ ಫಿಯೆಸ್ಟಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಚರ್ಚ್‌ನ ಪ್ರಧಾನ ಧರ್ಮಗುರು ವಂ. ಆ್ಯಂಡ್ರು ಲಿಯೋ ಡಿಸೋಜ, ಜ.25ರಂದು ಸಂಜೆ 5:30ಕ್ಕೆ ಸ್ಟಾರ್ ಚೆಫ್ ಆಫ್ ಫಿಯೆಸ್ಟಾ ಹಾಗೂ ಜ.26ರಂದು ಸಂಜೆ 6:30ಕ್ಕೆ ಟ್ಯಾಲೆಂಟೆಡ್ ಸಿಬ್ಲಿಂಗ್ಸ್ ಸ್ಪರ್ಧೆ ನಡೆಯಲಿದೆ. ಸ್ಟಾರ್ ಚೆಫ್ ಫಿಯೆಸ್ಟಾ ವಿಜೇತರಿಗೆ 5,555 ರೂ. ಮತ್ತು 3,333 ರೂ. ನಗದು ಹಾಗೂ ಟ್ರೋಫಿ ನೀಡಲಾಗುವುದು. ಟ್ಯಾಲೆಂಟೆಡ್ ಸಿಬ್ಲಿಂಗ್ಸ್ ಸ್ಪರ್ಧೆಯ ವಿಜೇತರಿಗೆ 7,777 ರೂ. ಹಾಗೂ 4,444 ರೂ. ನಗದು ಹಾಗೂ ಟ್ರೋಫಿ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವವರು 200 ರೂ. ಪ್ರವೇಶ ಶುಲ್ಕವನ್ನು ಪಾವತಿಸಬೇಕು. ಈ ಉತ್ಸವದಲ್ಲಿ ಸಸ್ಯಾಹಾರಿ ಹಾಗೂ ಮಾಂಸಾಹಾರಿ ವಿವಿಧ ಖಾದ್ಯಗಳ ಮಳಿಗೆಗಳು, ಆಟದ ಮಳಿಗೆಗಳು, ಪ್ರಮೋಶನಲ್ ಮಳಿಗೆಗಳು, ಚಾರಿಟಿ ಸೇಲ್ ಮಳಿಗೆ, ಸ್ಪಾಟ್ ಗೇಮ್ಸ್, ಲಕ್ಕಿ ಡ್ರಾ, ನೃತ್ಯ, ಹಾಡುಗಳು ಸೇರಿದಂತೆ ಮೋಜಿನ ಸ್ಪರ್ಧೆಗಳು ಎರಡು ದಿನಗಳ ಕಾಲ ನಡೆಯಲಿದೆ. ಸುಮಾರು 40ರಷ್ಟು ಆಹಾರ ಹಾಗೂ ಆಟದ ಮಳಿಗೆಗಳಿರುತ್ತವೆ. ಈ ವರ್ಷದ ವಿಶೇಷ ಆಕರ್ಷಣೆಯಾಗಿ ಗುವಾಹಟಿಯ ನಿವಾಸಿ ಖ್ಯಾತ ಕಲಾವಿದ ನಿರುಪಮ್ ಕೋನ್ವಾರ್ ಮತ್ತು ಲೈವ್ ಸ್ಕೆಚ್ಚಿಂಗ್ ಮತ್ತು ಪೈಂಟಿಂಗ್ ಮಾಡಲಿದ್ದಾರೆ ಮತ್ತು ಅದನ್ನು ಕಾರ್ಯಕ್ರಮದಲ್ಲಿ ಹರಾಜು ಹಾಕಲಾಗುವುದು ಎಂದು ಅವರು ಹೇಳಿದರು.

ಜ.20ರಂದು ಸಂಜೆ 6 ಗಂಟೆಗೆ ಬಿಷಪ್ ಅ.ವಂ. ಡಾ.ಪೀಟರ್ ಪಾವ್ಲ್ ಸಲ್ಡಾನಾರವರು ವಿನ್ಸೆಂಟ್ ಫೆರ್ನಾಂಡಿಸ್ ಕಾಸ್ಸಿಯಾರವರ ‘ಮೊಗಾಚಿ ಲಾರಾಂ’ ಧ್ವನಿ ಸುರುಳಿ ಬಿಡುಗಡೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂತ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ವಂ. ಕ್ಲಿಫರ್ಡ್ ಪಿಂಟೋ, ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ಸ್ಟೀವನ್ ನೊರೊನ್ಹ, ಉಪಾಧ್ಯಕ್ಷ ರೆಜಿನಾಲ್ಡ್ ಡಿಸೋಜ, ಸಾಂಸ್ಕೃತಿಕ ಸಮಿತಿಯ ಸಂಚಾಲಕ ಮನೋಜ್ ಲೂಯಿಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X