Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ರಾಜ್ಯದಲ್ಲಿ ಬಂಡವಾಳ ಹೂಡಲು...

‘ರಾಜ್ಯದಲ್ಲಿ ಬಂಡವಾಳ ಹೂಡಲು ಡೆನ್ಸೊ-ಲಾಕ್ಹೀಡ್ ಮಾರ್ಟಿನ್ ಸಂಸ್ಥೆ ಉತ್ಸುಕ’

ವಾರ್ತಾಭಾರತಿವಾರ್ತಾಭಾರತಿ22 Jan 2020 11:33 PM IST
share

ದಾವೋಸ್, ಜ.22: ಜಾಗತಿಕ ಭದ್ರತೆ ಮತ್ತು ಏರೋಸ್ಪೇಸ್ ಸಂಸ್ಥೆಯಾದ ಲಾಕ್ಹೀಡ್ ಮಾರ್ಟಿನ್ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ರಿಚರ್ಡ್ ಅಂಬ್ರೋಸ್, ಕರ್ನಾಟಕ ಪೆವಿಲಿಯನ್‌ಗೆ ಭೇಟಿ ನೀಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದರು. ಶೀಘ್ರದಲ್ಲಿಯೆ ಬೆಂಗಳೂರಿಗೆ ಭೇಟಿ ನೀಡಿ ಕರ್ನಾಟಕದಲ್ಲಿ ಹೂಡಿಕೆಯ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ಸಾಧ್ಯತೆಗಳನ್ನು ಪರಿಶೀಲಿಸುವುದಾಗಿ ಅವರು ತಿಳಿಸಿದರು.

ಕರ್ನಾಟಕದಲ್ಲಿ ಏರೋಸ್ಪೇಸ್ ಮತ್ತು ಜಾಗತಿಕ ಭದ್ರತಾ ವ್ಯವಸ್ಥೆಯ ಕುರಿತು ವಿವರಿಸಿದ ಮುಖ್ಯಮಂತ್ರಿ, ಫಾರ್ಚೂನ್ 500 ಕಂಪನಿಗಳ ಪೈಕಿ 400 ಕಂಪನಿಗಳು ಕರ್ನಾಟಕದಲ್ಲಿ ಈಗಾಗಲೇ ಅಸ್ತಿತ್ವದಲ್ಲಿದ್ದು, ಕರ್ನಾಟಕದಲ್ಲಿ ಲಾಕ್ಹೀಡ್ ಮಾರ್ಟಿನ್ ಕಂಪನಿ ಹೂಡಿಕೆ ಮಾಡಲು ಸೂಕ್ತ ವಾತಾವರಣ ಇರುವುದಾಗಿ ತಿಳಿಸಿದರು.

ಏರೋಸ್ಪೇಸ್ ಕೈಗಾರಿಕೆಗಳು ಮತ್ತು ಮಲ್ಟಿಕೋರ್ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಅತ್ಯುತ್ತಮ ಪರಿಸರವನ್ನು ಕರ್ನಾಟಕ ಹೊಂದಿದೆ. ರಾಜ್ಯದಲ್ಲಿ ಹೂಡಿಕೆ ಮಾಡುವ ಮೂಲಕ ಲಾಕ್ಹೀಡ್ ಮಾರ್ಟಿನ್ ಕಂಪನಿ ರಾಜ್ಯದಲ್ಲಿನ ಕೈಗಾರಿಕಾ ಸಾಮರ್ಥ್ಯವನ್ನು ಬಳಸಿಕೊಳ್ಳಬಹುದಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ತಿಳಿಸಿದರು.

ಜಾಗತಿಕ ಆಟೋಮೇಟಿವ್ ಭಾಗಗಳ ತಯಾರಕ ಕಂಪನಿ ಡೆನ್ಸೊ, ಕರ್ನಾಟಕದ ನಿಯೋಗದೊಂದಿಗೆ ಚರ್ಚಿಸಿತು. ಡೆನ್ಸೊ ಸಂಸ್ಥೆಯು ಕಿರ್ಲೋಸ್ಕರ್ ಸಹಯೋಗದೊಂದಿಗೆ ನೆಲಮಂಗಲದಲ್ಲಿ 429 ನೌಕರರುಳ್ಳ ಘಟಕವನ್ನು ಹೊಂದಿದೆ. ದಿಲ್ಲಿಯಲ್ಲಿ ತಮ್ಮ ಕಂಪನಿಯು ಶ್ರೇಷ್ಠತಾ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿದ್ದು, ಶೀಘ್ರದಲ್ಲಿಯೇ ಬೆಂಗಳೂರಿಗೆ ಭೇಟಿ ನೀಡಿ ದಕ್ಷಿಣ ಭಾರತದಲ್ಲಿ ತಮ್ಮ ಸಂಸ್ಥೆಯನ್ನು ವಿಸ್ತರಿಸುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸಂಸ್ಥೆಯ ಉಪಾಧ್ಯಕ್ಷ ಹಿರೋಯುಕಿ ವಕಬಾಸ್ಯಿ ತಿಳಿಸಿದರು.

ಮಧುಮೇಹಿಗಳಿಗೆ ಸಿಹಿ ಸುದ್ದಿ: ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಸುಲಭ ದರದಲ್ಲಿ ಆರೋಗ್ಯ ಇಲಾಖೆಯ ಮುಖಾಂತರ ಔಷಧಿಯನ್ನು ಸರಬರಾಜು ಮಾಡಲು ಡ್ಯಾನಿಷ್‌ನ ಪ್ರಸಿದ್ಧ ಔಷಧ ತಯಾರಿಕಾ ಕಂಪನಿ ನೋವೋ ನಾರ್ಡಿಸ್ಕ್ ಮುಂದಾಗಿದೆ. ಕರ್ನಾಟಕ ಸರಕಾರದೊಂದಿಗೆ ಕೈಜೋಡಿಸುವ ಆಸಕ್ತಿ ವ್ಯಕ್ತಪಡಿಸಿದ ನೋವೋ ನಾರ್ಡಿಸ್ಕ್ ಅಧ್ಯಕ್ಷ ಮತ್ತು ಸಿಇಒ ಫ್ರುಯರ್ ಗಾರ್ಡ್ ಜಾರ್ಜೆನ್ಸನ್, ಮಧುಮೇಹದ ವಿವಿಧ ಹಂತಗಳಲ್ಲಿರುವ ರೋಗಿಗಳಿಗೆ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿರುವುದಾಗಿ ತಿಳಿಸಿದರು.

ಸುಲಭ ದರದಲ್ಲಿ ಔಷಧಗಳನ್ನು ಸರಬರಾಜು ಮಾಡುವುದಲ್ಲದೆ, ಕಾಯಿಲೆಯನ್ನು ನಿಭಾಯಿಸಲು ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಸರಕಾರದೊಂದಿಗೆ ಹಮ್ಮಿಕೊಳ್ಳುವುದಾಗಿ ಅವರು ತಿಳಿಸಿದರು. ಮಧುಮೇಹ ಕಾಯಿಲೆಯನ್ನು ನಿಯಂತ್ರಿಸಲು ಕಂಪನಿಯ ಸಹಕಾರವನ್ನು ಪಡೆಯಲು ಸಿದ್ಧವಿರುವುದಾಗಿ ಫ್ರುಯರ್ ಗಾರ್ಡ್ ಜಾರ್ಜೆನ್ಸನ್‌ಗೆ ಮುಖ್ಯಮಂತ್ರಿ ತಿಳಿಸಿದರು.

ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಮಾತನಾಡಿ, ಔಷಧಗಳನ್ನು ಕೊಳ್ಳಲು ಅಶಕ್ತರಾಗಿರುವ ಬಡ ಮಧುಮೇಹಿ ರೋಗಿಗಳಿಗೆ ಸಹಾಯ ಮಾಡಲು ಸಂಸ್ಥೆಯ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದೆಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X