Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಳೆ ಭಾರತ-ಕಿವೀಸ್ ಮೊದಲ ಟ್ವೆಂಟಿ-20 ...

ನಾಳೆ ಭಾರತ-ಕಿವೀಸ್ ಮೊದಲ ಟ್ವೆಂಟಿ-20 ಪಂದ್ಯ

► ನ್ಯೂಝಿಲ್ಯಾಂಡ್ ತಂಡಕ್ಕೆ ಗಾಯಾಳುಗಳ ಸಮಸ್ಯೆ ► ಮೊದಲ ಬಾರಿಗೆ ಐದು ಪಂದ್ಯಗಳ ಸರಣಿ

ವಾರ್ತಾಭಾರತಿವಾರ್ತಾಭಾರತಿ23 Jan 2020 10:58 PM IST
share
ನಾಳೆ ಭಾರತ-ಕಿವೀಸ್ ಮೊದಲ ಟ್ವೆಂಟಿ-20  ಪಂದ್ಯ

ಆಕ್ಲೆಂಡ್,ಜ.23: ಮುಂಬರುವ ಟ್ವೆಂಟಿ-20 ವಿಶ್ವಕಪ್‌ಗೆ ತಯಾರಿ ನಡೆಸುತ್ತಿರುವ ಟೀಮ್ ಇಂಡಿಯಾ ಶುಕ್ರವಾರ ಇಲ್ಲಿ ನಡೆಯಲಿರುವ ಐದು ಟ್ವೆಂಟಿ-20 ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ನ್ಯೂಝಿಲ್ಯಾಂಡ್‌ನ್ನು ಎದುರಿಸಲಿದೆ.

ನ್ಯೂಝಿಲ್ಯಾಂಡ್ ತಂಡಕ್ಕೆ ಗಾಯದ ಸಮಸ್ಯೆ ಎದುರಾಗಿದ್ದು, ಅಪರೂಪದ ಐದು ಪಂದ್ಯಗಳ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಸರಣಿಯಲ್ಲಿ ಭಾರತದ ವಿರುದ್ಧ ಸವಾಲು ಎದುರಿಸುವಂತಾಗಿದೆ.

  ಇದೇ ವೇಳೆ ವೇಗದ ಬೌಲರ್‌ಗಳಿಗೆ ಸ್ನೇಹಿಯಾಗಿರುವ ಪಿಚ್‌ನಲ್ಲಿ ಪ್ರವಾಸಿ ಭಾರತ ತಂಡಕ್ಕೆ ಕಿವೀಸ್‌ನ್ನು ಎದುರಿಸುವುದು ದೊಡ್ಡ ಸವಾಲಾಗಿ ಪರಿಣಮಿಸಲಿದೆ.

ಆಸ್ಟ್ರೇಲಿಯ ವಿರುದ್ಧದ ಕೊನೆಯ ಏಕದಿನ ಪಂದ್ಯ ಮುಗಿದ ಐದು ದಿನಗಳ ನಂತರ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಭಾರತವು ಕಿವೀಸ್‌ನ್ನು ಎದುರಿಸುತ್ತಿದೆ. ಭಾರತ ತಂಡವು ಮಂಗಳವಾರ ಆಕ್ಲೆಂಡ್‌ಗೆ ಆಗಮಿಸಿ ಬುಧವಾರ ವಿಶ್ರಾಂತಿ ಪಡೆಯಲು ನಿರ್ಧರಿಸಿತು. ಇಂದು ನೆಟ್ ಅಭ್ಯಾಸ ನಡೆಸಿದರು.

 ವಿಶ್ವಕಪ್ ವರ್ಷದಲ್ಲಿ ಬಲಿಷ್ಠ ತಂಡವನ್ನು ಕಟ್ಟಲು ಪ್ರಯೋಗವನ್ನು ಮುಂದುವರಿಸುವುದರಿಂದ ತಂಡದ ನಿರ್ವಹಣೆಯು ತಂಡದ ಆಯ್ಕೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ನೆರವಾಗಲಿದೆ. ಟ್ವೆಂಟಿ-20 ವಿಶ್ವಕಪ್ ಈ ವರ್ಷದ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯದಲ್ಲಿ ನಡೆಯಲಿದೆ.

ಶಿಖರ್ ಧವನ್, ಹಾರ್ದಿಕ್ ಪಾಂಡ್ಯ, ದೀಪಕ್ ಚಹರ್ ಮತ್ತು ಭುವನೇಶ್ವರ್ ಕುಮಾರ್ ಅವರಂತಹ ಪ್ರಮುಖ ಏಕದಿನ ತಂಡದ ಆಟಗಾರರಿಗೆ ಕಳೆದ ವರ್ಷ ತವರಿನಲ್ಲಿ ಗಾಯದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ತಂಡದಲ್ಲಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ಸಿಕ್ಕಿದೆ. ಇದರಿಂದ ಹೊಸ ಪ್ರತಿಭೆಗಳ ಸಾಮರ್ಥ್ಯ ಪರೀಕ್ಷೆಗೆ ಅವಕಾಶ ಸಿಕ್ಕಿದೆ.

ಲೋಕೇಶ್ ರಾಹುಲ್‌ಗೆ ತಂಡದಲ್ಲಿ ಬೇರೆ ಬೇರೆ ಕ್ರಮಾಂಕದಲ್ಲಿ ಮತ್ತು ವಿಕೆಟ್ ಕೀಪರ್ ಆಗಿ ತನ್ನ ಸಾಮರ್ಥ್ಯವನ್ನು ತೋರಿಸಲು ಉತ್ತಮ ಅವಕಾಶ ಸಿಕ್ಕಿದೆ.

ವೆಸ್ಟ್ ಇಂಡೀಸ್ ವಿರುದ್ಧ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಚೆನ್ನಾಗಿ ಆಡಿದ್ದರು. ನಂತರ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಾಗ ಧವನ್ ಜೊತೆ ಇನಿಂಗ್ಸ್ ಆರಂಭಿಸಿ ಇದರಲ್ಲೂ ಯಶಸ್ವಿಯಾದರು. ಕಿವೀಸ್ ವಿರುದ್ಧ ಸರಣಿಗೆ ಧವನ್ ಇಲ್ಲ. ರಾಹುಲ್ ಅವರು ರೋಹಿತ್ ಶರ್ಮಾರೊಂದಿಗೆ ಟ್ವೆಂಟಿ-20ಯಲ್ಲಿ ಇನಿಂಗ್ಸ್ ಆರಂಭಿಸಲಿದ್ದಾರೆ.

ರಾಹುಲ್ ಇದೀಗ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿದ್ದಾರೆ. ಅವರ ದ್ವಿಮುಖ ಪಾತ್ರವು ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಹಲವರಿಗೆ ನಿರಾಸೆ ಉಂಟಾಗಿದೆ. ನಾಯಕ ಕೊಹ್ಲಿ ಹೇಳುವ ಪ್ರಕಾರ ರಾಹುಲ್ ಏಕದಿನ ಮತ್ತು ಟ್ವೆಂಟಿ-20 ಪಂದ್ಯಗಳಲ್ಲಿ ವಿಕೆಟ್ ಕೀಪರ್ ಪಾತ್ರವನ್ನು ಮುಂದುವರಿಸಲಿದ್ದಾರೆ. ಫೆಬ್ರವರಿ 5ರಂದು ಮೂರು ಪಂದ್ಯಗಳ ಏಕದಿನ ಸರಣಿ ಪ್ರಾರಂಭವಾಗಲಿದೆ. ಪೃಥ್ವಿ ಶಾ ಚೊಚ್ಚಲ ಏಕದಿನ ಪಂದ್ಯವನ್ನು ಆಡುವ ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ. ಅವರು ರೋಹಿತ್ ಅವರೊಂದಿಗೆ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

 ರಾಹುಲ್ ವಿಕೆಟ್ ಕೀಪಿಂಗ್ ಮಾಡುವುದರೊಂದಿಗೆ ಮತ್ತೊಮ್ಮೆ ರಿಷಭ್ ಪಂತ್ ಅಂತಿಮ ಹನ್ನೊಂದರಲ್ಲಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ. ಐದನೇ ಕ್ರಮಾಂಕದಲ್ಲಿ ತಜ್ಞ ಬ್ಯಾಟ್ಸ್‌ಮನ್ ಆಗಿ ಮನೀಶ್ ಪಾಂಡೆ ಆಡುವ ನಿರೀಕ್ಷೆಯಿದೆ ಮತ್ತು ಶ್ರೇಯಸ್ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಪಾಂಡೆ, ಅಯ್ಯರ್ ಮತ್ತು ಪಂತ್ ಅವರು ಗುರುವಾರ ನೆಟ್‌ನಲ್ಲಿ ಒಟ್ಟಿಗೆ ಬ್ಯಾಟಿಂಗ್ ಮಾಡಿದರು, ಆದರೆ ಕೇರಳದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್‌ಗೆ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಅವಕಾಶ ಸಿಗುವುದು ಕಷ್ಟ.

 ಐದು ಬೌಲರ್‌ಗಳನ್ನು ಕಣಕ್ಕಿಳಿಸಲು ಟೀಮ್ ಇಂಡಿಯಾ ನಿರ್ಧಾರ ಕೈಗೊಂಡರೆ 6ನೇ ಬೌಲರ್ ಶಿವಮ್ ದುಬೆಗೆ ಅವಕಾಶ ಸಿಗಲಾರದು. ಆಗ ಪಂತ್ ಮತ್ತು ಪಾಂಡೆ ಇಬ್ಬರೂ ಆಡುವ ಹನ್ನೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಾಶಿಂಗ್ಟನ್ ಸುಂದರ್ ಮತ್ತು ರವೀಂದ್ರ ಜಡೇಜ ತಂಡದಲ್ಲಿರುವ ಆಲ್‌ರೌಂಡರ್‌ಗಳು.

2019ರ ವಿಶ್ವಕಪ್ ಬಳಿಕ ಯಜುವೇಂದ್ರ ಚಹಾಲ್ ಮತ್ತು ಕುಲದೀಪ್ ಯಾದವ್ ಇನ್ನೂ ಒಟ್ಟಿಗೆ ಆಡಿಲ್ಲ. ವೇಗದ ಬೌಲಿಂ  ಗ್ ವಿಭಾಗದಲ್ಲಿ ಮುಹಮ್ಮದ್ ಶಮಿ ಮತ್ತು ಜಸ್‌ಪ್ರೀತ್ ಬುಮ್ರಾ ದಾಳಿ ಆರಂಭಿಸಲಿದ್ದಾರೆ. ಶಾರ್ದುಲ್ ಠಾಕೂರ್ ಮತ್ತು ನವದೀಪ್ ಸೈನಿ ಇವರ ನಡುವೆ ಇನ್ನೊಂದು ಬೌಲರ್ ಸ್ಥಾನಕ್ಕಾಗಿ ಪೈಪೋಟಿ ಕಂಡು ಬಂದಿದೆ.

   ಕಳೆದ ವರ್ಷ ನಡೆದ ಟ್ವೆಂಟಿ-20 ಸರಣಿಯಲ್ಲಿ ಭಾರತವನ್ನು ನ್ಯೂಝಿಲ್ಯಾಂಡ್ 2-1 ಅಂತರದಲ್ಲಿ ಸೋಲಿಸಿತ್ತು. ಶ್ರೀಲಂಕಾ ಪ್ರವಾಸದಲ್ಲಿ ಕಿವೀಸ್ ಟ್ವೆಂಟಿ-20 ಸರಣಿಯಲ್ಲಿ 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿತ್ತು. ಐದು ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ 2-2 ಸಮಬಲ ಸಾಧಿಸಿತ್ತು.

  ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಝಿಲ್ಯಾಂಡ್ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಯಲ್ಲಿ ಉತ್ತಮ ದಾಖಲೆ ಹೊಂದಿದ್ದರೂ ಟೆಸ್ಟ್ ಸರಣಿಯಲ್ಲಿ ಹಿನ್ನಡೆ ಉಂಟಾಗಿದೆ. ಕಳೆದ ತಿಂಗಳು 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯ ವಿರುದ್ಧ 3 ಟೆಸ್ಟ್‌ಗಳಲ್ಲೂ ಹೀನಾಯ ಸೋಲು ಅನುಭವಿಸಿತ್ತು. ಇದರಿಂದಾಗಿ ನಾಯಕ ಕೇನ್ ವಿಲಿಯಮ್ಸನ್ ಭವಿಷ್ಯದ ಬಗ್ಗೆ ಪ್ರಶ್ನೆ ಎದುರಾಗಿದೆ.

 ಸದ್ಯಕ್ಕೆ, ನ್ಯೂಝಿಲ್ಯಾಂಡ್‌ನ ಪ್ರಮುಖ ಬ್ಯಾಟ್ಸ್‌ಮನ್ ಕೇನ್ ವಿಲಿಯಮ್ಸನ್ ಎ

ಲ್ಲಾ ಸ್ವರೂಪಗಳಲ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ನ್ಯೂಝಿಲ್ಯಾಂಡ್ ತಂಡಕ್ಕೆ ಯಾವಾಗಲೂ ಆಯ್ಕೆಯಲ್ಲಿ ಆಲ್‌ರೌಂಡರ್‌ಗಳ ಕೊರತೆ ಎದ್ದು ಕಾಣಿಸುತ್ತದೆ. ವೇಗದ ವಿಭಾಗದಲ್ಲಿ ಸಮತೋಲನ ಸಾಧಿಸಬೇಕಾಗಿದೆ. ಗಾಯದ ಕಾರಣದಿಂದಾಗಿ ಟ್ರೆಂಟ್ ಬೌಲ್ಟ್, ಮ್ಯಾಟ್ ಹೆನ್ರಿ ಮತ್ತು ಎಲ್. ಫರ್ಗುಸನ್ ಅವರ ಸೇವೆಗಳನ್ನು ಕಳೆದುಕೊಂಡಿದೆ.

  ಮೊದಲ ಎರಡು ಟ್ವೆಂಟಿ-20 ಪಂದ್ಯಗಳು ಈಡನ್ ಪಾರ್ಕ್ ನಲ್ಲಿ ನಡೆಯಲಿವೆೆ. ಇಬ್ಬರು ಸ್ಪಿನ್ನರ್‌ಗಳಾದ ಐಶ್ ಸೋಧಿ ಮತ್ತು ಮಿಚೆಲ್ ಸ್ಯಾಂಟ್ನೆರ್ ಅವರನ್ನು ತಂಡದ ಅಂತಿಮ ಹನ್ನೊಂದರ ಬಳಗದಲ್ಲಿ ಸೇರಿಸಿಕೊಳ್ಳುವ ವಿಚಾರ ಇನ್ನೂ ಸ್ಪಷ್ಟಗೊಂಡಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X