Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. "ನಿಮ್ಮ ಜೀನ್ ಪಾಕಿಸ್ತಾನ ಅಥವಾ ಜರ್ಮನಿಯ...

"ನಿಮ್ಮ ಜೀನ್ ಪಾಕಿಸ್ತಾನ ಅಥವಾ ಜರ್ಮನಿಯ ನಾಝಿಗಳಲ್ಲಿರಬಹುದು. ಆದರೆ ನನ್ನ‌ ಜೀನ್ ಈ ಮಣ್ಣಿನಲ್ಲಿದೆ’’

ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮೂಲಕ ಕಿಡಿಕಾರಿದ ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ25 Jan 2020 11:27 AM IST
share
ನಿಮ್ಮ ಜೀನ್ ಪಾಕಿಸ್ತಾನ ಅಥವಾ ಜರ್ಮನಿಯ ನಾಝಿಗಳಲ್ಲಿರಬಹುದು. ಆದರೆ ನನ್ನ‌ ಜೀನ್ ಈ ಮಣ್ಣಿನಲ್ಲಿದೆ’’

ಬೆಂಗಳೂರು, ಜ.25: ತಾನು ಸೇರಿದಂತೆ 15 ಮಂದಿಯ ವಿರುದ್ಧ ಬಂದಿರುವ  ಅನಾಮಧೇಯ ಕೊಲೆ ಪತ್ರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘’ತನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳೂ” ಎಂದು ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಮಾಡಿರುವ ಆರು ಟ್ವೀಟ್ ಗಳು ಹೀಗಿವೆ..

1. ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ?

2. ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು‌ ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು 'ಪಾಕಿಸ್ತಾನಿ' ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ 'ಉಗ್ರ' ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ.

3. ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು‌. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ.

4. ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ.

5. "ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು" ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು.

6. ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಝಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು.

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ...

ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ.

ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು.
6/6

— H D Kumaraswamy (@hd_kumaraswamy) January 25, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X