Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಮುವಾದಿಗಳು ದೇಶವನ್ನು ಮಹಾ...

ಕೋಮುವಾದಿಗಳು ದೇಶವನ್ನು ಮಹಾ ಭಾರತವನ್ನಾಗಿಸಲು ಹೊರಟಿದ್ದಾರೆ: ಸಾಹಿತಿ ರಂಜಾನ್ ದರ್ಗಾ

ವಾರ್ತಾಭಾರತಿವಾರ್ತಾಭಾರತಿ25 Jan 2020 10:54 PM IST
share
ಕೋಮುವಾದಿಗಳು ದೇಶವನ್ನು ಮಹಾ ಭಾರತವನ್ನಾಗಿಸಲು ಹೊರಟಿದ್ದಾರೆ: ಸಾಹಿತಿ ರಂಜಾನ್ ದರ್ಗಾ

ಮೈಸೂರು,ಜ.25: ಇಂದು ಕೋಮುವಾದಿಗಳು ಹಾಗೂ ಉಗ್ರಗಾಮಿಗಳು ದೇಶವನ್ನು ಮಹಾ ಭಾರತವನ್ನಾಗಿಸಲು ಹೊರಟಿದ್ದಾರೆ ಎಂದು ಸಾಹಿತಿ ರಂಜಾನ್ ದರ್ಗಾ ಆತಂಕ ವ್ಯಕ್ತಪಡಿಸಿದರು.

ಮೈಸೂರು ವಿಶ್ವವಿದ್ಯಾಲಯ ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ '70 ವರ್ಷಗಳ ಗಣರಾಜ್ಯ ನಡಿಗೆಯಲ್ಲಿ ಅಂಬೇಡ್ಕರ್ ಚಿಂತನೆಗಳ ಒಳಗೊಳ್ಳುವಿಕೆ' ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ಬಸವಣ್ಣ ಕರ್ನಾಟಕದ ಬುದ್ಧನಾಗಿದ್ದು, ಇಡೀ ಬಸವ ತತ್ವ ಬೌದ್ಧ ಧರ್ಮದ ಸಾರದಲ್ಲಿ ಅಡಗಿದೆ. ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಭಾರತ ಭಾರತವಾಗಿಯೇ ಉಳಿಯಬೇಕು. ಒಂದು ವೇಳೆ ಮಹಾಭಾರತವಾದರೆ ದೇಶದಲ್ಲಿ ಉಗ್ರಗಾಮಿಗಳು ಹೆಚ್ಚಾಗುತ್ತಾರೆ. ಈ ದೇಶ ಹಿಂದೂಗಳದ್ದೂ ಅಲ್ಲ. ಮುಸ್ಲಿಮರದ್ದೂ ಅಲ್ಲ. ಬದಲಿಗೆ ಯುವಕರ ದೇಶ ಎಂದು ಅಭಿಪ್ರಾಯಪಟ್ಟರು.

ಭಾರತದ ಸಂವಿಧಾನದಲ್ಲಿ ಅಂಬೇಡ್ಕರ್ ಅವರು ಒಳಗೊಳ್ಳುವಿಕೆ ಇದೆ. ವೈದಿಕ ಮತ್ತು ಅವೈದಿಕ ಮಧ್ಯದ ನಡೆದ ತೀವ್ರವಾದ ಸಂಘರ್ಷದಿಂದ ನಮ್ಮ ಸಂವಿಧಾನ ರಚನೆಯಾಗಿದೆ. ಮಹಾಭಾರತದಲ್ಲಿಯೇ ಕೌರವರು ಮತ್ತು ಪಾಂಡವರು ನಡುವೆ ಯುದ್ಧದ ಸಂದರ್ಭದಲ್ಲಿ ಚಾರ್ವಾಕರು ಎರಡು ಬಣಕ್ಕೂ ಯುದ್ಧ ಮಾಡುವುದು ಬೇಡ ಅಮಾಯಕರು ತೊಂದರೆ ಅನುಭವಿಸುತ್ತಾರೆ ಎಂದು ಹೇಳುತ್ತಾರೆ. ಆದರೆ ಅವರಿಬ್ಬರು ಚಾರ್ವಾಕರನ್ನೆ ಹತ್ಯೆ ಮಾಡಿದರು ಎಂದರು.

ದೇಶದಲ್ಲಿ ಬೌದ್ಧ ಹಾಗೂ ವಚನ ಸಾಹಿತ್ಯಗಳು ವೈದಿಕ ಸಾಹಿತ್ಯದ ಹಂಗಿಲ್ಲದ ಸಾಹಿತ್ಯಗಳಾಗಿವೆ. ತಳ ಸಮುದಾಯದಿಂದ ಬಂದ ಬಾಬಾ ಸಾಹೇಬ್ ಅಂಬೇಡ್ಕರ್ ಅಂತಹ ವ್ಯಕ್ತಿ ರಚಿಸಿರುವ ಸಂವಿಧಾನ ಇಡೀ ವಿಶ್ವದಲ್ಲೇ ಏಕೈಕ ಸಂವಿಧಾನ, ಸಂವಿಧಾನದ ರಚನೆಗಾಗಿ ದಿನಾ 18 ಗಂಟೆಗಳನ್ನು ಮೀಸಲಿಟ್ಟು ತಮ್ಮ ಆರೋಗ್ಯದ ಬಗ್ಗೆ ಚಿಂತಿಸದೆ ದೇಶದ ಬಡವರು ಮಹಿಳೆಯರು ಹಾಗೂ ಕಾರ್ಮಿಕರ ಪರವಾಗಿ ಹೋರಾಡಿದರು. ತಮ್ಮ ಜೀವನದಲ್ಲಿ ಜನಪರ ವಿಚಾರಗಳಲ್ಲಿ ಯಾರೊಂದಿಗೂ ರಾಜಿಯನ್ನೆ ಮಾಡಿಕೊಳ್ಳದ ರಾಷ್ಟ್ರ ನಾಯಕರಾಗಿದ್ದರು ಎಂದು ಹೇಳಿದರು.

ಮೈಸೂರು ವಿವಿಯ ವಿಶ್ರಾಂತ ಕುಲಪತಿ ಪ್ರೊ. ಎಂ.ಮಾದಯ್ಯ ಮಾತಾನಾಡಿ, ಅಂಬೇಡ್ಕರ್ ಸಾಮಾಜಿಕ, ಆರ್ಥಿಕ ನ್ಯಾಯಗಳ ಪರ ಹೋರಾಟ ನಡೆಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯ ಇರುವವರೆಗೂ ಅವರು ಜೀವಂತವಾಗಿರುತ್ತಾರೆ. ಅವರ ವಿವೇಚನೆಯಿಂದ ಭಾರತದಲ್ಲಿ ಹಣಕಾಸು ಆಯೋಗ 1951 ರಲ್ಲಿ ಅಸ್ತಿತ್ವಕ್ಕೆ ಬಂತು. ಆರ್ಥಿಕ ವಿಷಯಕ್ಕೆ ಸಂಬಂಧಿಸಿದಂತೆ ಅನೇಕ ಸಂಶೋಧನೆಗಳನ್ನು ನಡೆಸಿದ್ದರು. ಆರ್ಥಿಕ ಅಸಮಾನೆ ಹೋಗಲಾಡಿಸಲು ಬಡವರಿಗೆ ಕಡಿಮೆ ಟ್ಯಾಕ್ಸ್ ಹಾಕುವಂತೆ ಧ್ವನಿ ಎತ್ತಿದ್ದರು. ಅವರ ವಿಚಾರಗಳು ಮತ್ತು ಚಿಂತನೆಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕಿದೆ. ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ದೊರೆಯಿತು. ಅದಕ್ಕೆ ಬೇಸರ ಪಡಬಾರದು ಅವರಿಗೆ ಬಿ.ಆರ್ ಎನ್ನುವುದರಲ್ಲೇ ಭಾರತ ರತ್ನ ಹುಟ್ಟಿನಿಂದೆ ಬಂದಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ, ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ನಿರ್ದೇಶಕ ಪ್ರೊ.ಜಿ.ಸೋಮಶೇಖರ್, ಸಂಯೋಜಕ ಡಾ.ಎಸ್. ನರೇಂದ್ರ ಕುಮಾರ್ ಹಾಗೂ ಸಂದರ್ಶಕ ಪ್ರಾಧ್ಯಾಪಕ ದೇವನೂರು ಬಸವರಾಜು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X