Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಕಳವಳ ಮೂಡಿಸುತ್ತಿರುವ ಕೊರೋನ ವೈರಸ್

ಕಳವಳ ಮೂಡಿಸುತ್ತಿರುವ ಕೊರೋನ ವೈರಸ್

ಡಾ. ಮುರಲೀ ಮೋಹನ ಚೂಂತಾರುಡಾ. ಮುರಲೀ ಮೋಹನ ಚೂಂತಾರು26 Jan 2020 12:01 AM IST
share
ಕಳವಳ ಮೂಡಿಸುತ್ತಿರುವ ಕೊರೋನ ವೈರಸ್

 ಇತ್ತೀಚಿನ ದಿನಗಳಲ್ಲಿ ಕೌತುಕ ಹುಟ್ಟಿಸಿ, ಕಳವಳ ಮೂಡಿಸುತ್ತಿರುವ ವಿಷಯಗಳಲ್ಲಿ ಅಗ್ರಸ್ಥಾನದಲ್ಲಿರುವ ವಿಚಾರವೆಂದರೆ ಕೊರೋನ ವೈರಸ್ ಎಂದರೆ ತಪ್ಪಾಗಲಾರದು. ಈಗಾಗಲೇ 40ಕ್ಕೂ ಹೆಚ್ಚು ಮಂದಿ ರೋಗಿಗಳನ್ನು ಅಪೋಶನ ತೆಗೆದುಕೊಂಡಿದ್ದು, ಇನ್ನೂ ಸಾವಿರಾರು ಮಂದಿಯಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಿದೆ. ಚೀನಾದ 5 ನಗರಗಳಲ್ಲಿ ತನ್ನ ರುದ್ರನರ್ತನವನ್ನು ಆರಂಭಿಸಿದ್ದು, ದೇಶದೆಲ್ಲೆಡೆ ಅಘೋಷಿತ ಕರ್ಫ್ಯೂ ಉಂಟಾಗಿದೆ. ಜನರು ಭೀತಿಯಿಂದ ಮನೆ ಬಿಟ್ಟು ಹೊರಹೋಗಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಕಣ್ಣಿಗೆ ಕಾಣದಷ್ಟು ಚಿಕ್ಕದಾದ ಕೊರೋನ ಎಂಬ ವೈರಾಣುವಿನ ಆರ್ಭಟಕ್ಕೆ ಮನುಕುಲ ಹೈರಾಣಾಗಿರುವುದಂತೂ ನಿಜವಾದ ಮಾತು.

 ಏನಿದು ಕೊರೋನ ವೈರಾಣು?

ಇದೊಂದು RNA  ಜಾತಿಯ ವೈರಾಣುವಾಗಿದ್ದು, ಸೂಕ್ತ ದರ್ಶಕದ ಅಡಿಯಲ್ಲಿ ಕಿರೀಟದ ರೀತಿಯಲ್ಲಿ ಈ ವೈರಾಣುವಿನ ಆಕಾರ ಇರುತ್ತದೆ. ಲ್ಯಾಟಿನ್ ಭಾಷೆಯಲ್ಲಿ ಕೊರೋನ ಎಂದರೆ ಕಿರೀಟ ಎಂಬರ್ಥವಿದೆ. ಈ ಕಾರಣದಿಂದಲೇ ಕೊರೋನ ವೈರಸ್ ಎಂಬ ಹೆಸರನ್ನು ಪಡೆದಿದೆ. ಸಾಮಾನ್ಯವಾಗಿ ಈ ವೈರಾಣು ಸಸ್ತನಿಗಳಲ್ಲಿ ಮತ್ತು ಹಕ್ಕಿಗಳಲ್ಲಿ ಜೀರ್ಣಾಂಗ ವ್ಯೆಹ ಮತ್ತು ಶ್ವಾಸಕೋಶ ವ್ಯೆಹವನ್ನು ಸೋಂಕಿಗೆ ತಗುಲಿಸಿ ರೋಗ ಬರುವಂತೆ ಮಾಡುತ್ತದೆ. ಮನುಷ್ಯರಲ್ಲಿ ಸುಮಾರು ಈ ಕೊರೋನ ಗುಂಪಿನ 7 ಬಗೆಯ ವೈರಾಣುಗಳು ಸೋಂಕು ಉಂಟುಮಾಡುವ ಸಾಮರ್ಥ್ಯ ಹೊಂದಿರುತ್ತದೆ. ಕೊರೋನ ವೈರಾಣು ಎನ್ನುವುದು ಬಹುದೊಡ್ಡ ವೈರಾಣುಗಳ ಕುಟುಂಬವಾಗಿದ್ದು,  SARS ಮತ್ತು  MERS ಎಂಬ ರೋಗಕ್ಕೂ ಕಾರಣವಾಗುತ್ತದೆ. ಈ ಹಿಂದೆ ಹಲವು ಬಾರಿ ಯುರೋಪ್ ದೇಶದಲ್ಲಿ SARS ಮತ್ತು MERS  ರೋಗ ಬಂದು ನೂರಾರು ಮಂದಿ ಸಾವನ್ನಪ್ಪಿರುವುದು ಚರಿತ್ರೆಯಿಂದ ಎಲ್ಲರಿಗೂ ತಿಳಿದಿದೆ.  SARS ಎಂದರೆ ಸೀವಿಯರ್ ಅಕ್ಯೂಟ್ ರೆಸ್ಪಿರೇಟರಿ ಸಿಂಡ್ರೋಮ್ ಎಂದೂ ಆಂಗ್ಲ ಭಾಷೆಯಲ್ಲಿ ಕರೆಯುತ್ತಾರೆ.  MERS ಎಂದರೆ ಮಿಡ್ಲ್ ಇಸ್ಟ್ ರೆಸ್ಪಿರೇಟರಿ ಸಿಂಡ್ರೋಮ್ ಎಂದು ಕರೆಯುತ್ತಾರೆ. ಇವೆರಡೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕೊರೋನ ವೈರಾಣುವಿನಿಂದ ಹರಡುವ ರೋಗವಾಗಿರುತ್ತದೆ. ತಕ್ಷಣ ಗುರುತಿಸಿ ಚಿಕಿತ್ಸೆ ನೀಡಿದಲ್ಲಿ ಮಾತ್ರ ಚಿಕಿತ್ಸೆ ಸ್ಪಂದಿಸುತ್ತದೆ. ಚಿಕಿತ್ಸೆಗೆ ತಡವಾದಲ್ಲಿ ಮರಣ ಕಟ್ಟಿಟ್ಟ ಬುತ್ತಿ. ಲಸಿಕೆ ಇಲ್ಲದ ರೋಗ ಇದಾಗಿರುವುದರಿಂದ ಮುಂಜಾಗರೂಕತೆ ವಹಿಸಿ ರೋಗ ಬರದಂತೆ ತಡೆಯುವ ಅನಿವಾರ್ಯತೆ ಇದೆ. ಅದೇ ರೀತಿ ಈ ವೈರಾಣುವಿನ ವಿರುದ್ಧ ಹೋರಾಡುವ ಔಷಧಿಯೂ ಲಭ್ಯವಿಲ್ಲದಿರುವುದೇ ಬಹಳ ದೊಡ್ಡ ಚಿಂತೆಯಾಗಿದೆ.

ಹೇಗೆ ಹರಡುತ್ತದೆ?

 ಸಾಮಾನ್ಯವಾಗಿ ಸಸ್ತನಿ ಮತ್ತು ಹಕ್ಕಿಗಳನ್ನು ಈ ವೈರಾಣು ಕಾಡು ತ್ತದೆ. ಹಂದಿ, ದನ, ಕೋಳಿ, ಬಾವಲಿ ಮತ್ತು ಹಾವುಗಳನ್ನು ಕಾಡುವ ಈ ವೈರಾಣು ಅವುಗಳ ಮಾಂಸದ ಮುಖಾಂತರವೂ ಮನುಷ್ಯರನ್ನು ತಲುಪುವ ಸಾಧ್ಯತೆ ಇರುತ್ತದೆ. ಚೀನಾ ದೇಶದ ನಿಶಾನ್ ನಗರದಲ್ಲಿನ ಅಕ್ರಮ ವನ್ಯಜೀವಿ ಮಾಂಸ ಕೇಂದ್ರ ಮುಖಾಂತರ ಈ ವೈರಾಣು ಮನುಷ್ಯರಿಗೆ ಹರಡಿದೆ ಎಂದು ಶಂಕಿಸಲಾಗಿದೆ. ಶಂಕಿತ ಮತ್ತು ಸೋಂಕಿತ ಪ್ರಾಣಿಗಳ ಮಾಂಸವನ್ನು ಸರಿಯಾಗಿ ಬೇಯಿಸದೆ ತಿನ್ನುವುದರಿಂದಲೂ ಹರಡಿರುವ ಸಾಧ್ಯತೆ ಇದೆ.

ರೋಗದ ಲಕ್ಷಣಗಳು:

   ಎಲ್ಲಾ ವೈರಲ್ ಜ್ವರದಂತೆ ಈ ರೋಗದಲ್ಲಿಯೂ ತೀವ್ರ ಜ್ವರ, ಶೀತ, ಕೆಮ್ಮು, ಗಂಟಲು ಕೆರೆತ, ನಡುಕ, ಉಸಿರಾಟದ ತೊಂದರೆ, ತಲೆನೋವು ಇರುತ್ತದೆ. ಮೈಕೈ ನೋವು, ಸುಸ್ತು ಹೆಚ್ಚು ಇರುತ್ತದೆ. ಹೆಚ್ಚಾಗಿ ಈ ವೈರಾಣು ಶ್ವಾಸಕೋಶವನ್ನು ಕಾಡುವುದರಿಂದ ನಿಮೋನಿಯಾ ರೀತಿಯ ಲಕ್ಷಣಗಳು ಹೆಚ್ಚು ಕಂಡುಬರುತ್ತವೆ. ಆರೋಗ್ಯವಂತ ವ್ಯಕ್ತಿಗಳಲ್ಲಿ ಕೆಲವೊಮ್ಮೆ ಈ ರೋಗ ತನ್ನಿಂತಾನೆ ಕಡಿಮೆಯಾಗಬಹುದು. ಆದರೆ ಮಧುಮೇಹ, ಕಿಡ್ನಿ ತೊಂದರೆ, ಧೂಮಪಾನಿಗಳು, ಹೃದಯದ ತೊಂದರೆ ಇರುವವರಲ್ಲಿ ಈ ವೈರಾಣು ಮಾರಣಾಂತಿಕವಾಗಿ ಕಾಡುವ ಸಾಧ್ಯತೆ ಇದೆ. ರೋಗದ ಇಂಕುಬೇಷನ್ ಅವಧಿ ಅಂದರೆ ವೈರಾಣು ದೇಹಕ್ಕೆ ಸೇರಿ ರೋಗದ ಲಕ್ಷಣ ಕಾಣಿಸಿಕೊಳ್ಳುವವರೆಗಿನ ಅವಧಿ ಸುಮಾರು 6 ರಿಂದ 12 ದಿನ ಇರುತ್ತದೆ.

ಹೇಗೆ ಹರಡುತ್ತದೆ?

♦ ದೈಹಿಕ ಸಂಪರ್ಕ, ಸ್ಪರ್ಶದ ಮುಖಾಂತರ ಹರಡುತ್ತದೆ.

♦ ಕೆಮ್ಮು ಮತ್ತು ಸೀನಿನ ಮುಖಾಂತರ ಹರಡುತ್ತದೆ.

 * ಕರವಸ್ತ್ರ, ಊಟದ ತಟ್ಟೆ ಮುಂತಾದವುಗಳನ್ನು ಜೊತೆಗೆ ಬಳಸುವುದರಿಂದ ಹರಡುತ್ತದೆ.

ಹೇಗೆ ತಡೆಗಟ್ಟಬಹುದು

 ♦ ನಿಮ್ಮ ಕೈಗಳನ್ನು ಚೆನ್ನಾಗಿ ಸೋಪು ದ್ರಾವಣ ಬಳಸಿ 30 ಸೆಕೆಂಡ್ ಶುಭ್ರವಾಗಿ ಸ್ವಚ್ಛಗೊಳಿಸಿ.

♦ ಸೋಪ್ ದ್ರಾವಣವಿಲ್ಲದಿದ್ದಲ್ಲಿ ಆಲ್ಕೋಹಾಲ್ ದ್ರಾವಣ ಬಳಸಬಹುದು.

♦  ಶಂಕಿತ ಅಥವಾ ಸೋಂಕಿತ ವ್ಯಕ್ತಿಯ ಬಟ್ಟೆ, ಕರವಸ್ತ್ರ, ತಟ್ಟೆ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸಬೇಡಿ.

♦ ಶಂಕಿತ ರೋಗಿಗಳಿಂದ ದೂರವಿರಿ. ಕೈತೊಳೆಯದೆ ಕಣ್ಣು, ಮುಖ, ಬಾಯಿಯನ್ನು ಸ್ಪರ್ಶಿಸಬೇಡಿ.

♦ ಶಂಕಿತ ರೋಗಿಯೊಂದಿಗೆ ಯಾವುದೇ ದೈಹಿಕ ಸಂಪರ್ಕ, ಚುಂಬನ ಮಾಡಬೇಡಿ.

♦ ಸಾಧ್ಯವಾದಷ್ಟು ಮುಖಕವಚ ಧರಿಸಿ. ಶಂಕಿತ ವ್ಯಕ್ತಿಯಿಂದ ದೂರವಿರಿ.

* ಶಂಕಿತ ರೋಗ ಪ್ರದೇಶಗಳಲ್ಲಿ ಪ್ರಯಾಣ ಮಾಡಬೇಡಿ.

♦ ಆದಷ್ಟು ಶಂಕಿತ ಪ್ರದೇಶದಲ್ಲಿ ಮಾಂಸಾಹಾರವನ್ನು ಸೇವಿಸುವುದನ್ನು ತಪ್ಪಿಸಬೇಕು.

ಚಿಕಿತ್ಸೆ ಹೇಗೆ?

     ಈ ರೋಗಕ್ಕೆ ಲಸಿಕೆ ಇರುವುದಿಲ್ಲ. ಸೂಕ್ತ ಚಿಕಿತ್ಸೆಯೂ ಲಭ್ಯವಿಲ್ಲ. ಕೊರೋನ ವೈರಾಣುವಿನ ವಿರುದ್ಧ ಹೋರಾಡುವ ಔಷಧಿಯೂ ಲಭ್ಯವಿಲ್ಲ. ಆದರೆ ರೋಗಿಯ ರೋಗದ ಲಕ್ಷಣಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಜ್ವರ, ನೋವಿಗೆ ಔಷಧಿ ನೀಡಿ ಸಂಪೂರ್ಣ ವಿಶ್ರಾಂತಿ ನೀಡಲಾಗುತ್ತದೆ. ಸಾಕಷ್ಟು ದ್ರವಾಹಾರ ನೀಡಲಾಗುತ್ತದೆ. ಶಂಕಿತ ರೋಗಿಯನ್ನು ಒಳರೋಗಿಯಾಗಿ ಇರಿಸಿ ಇತರ ರೋಗಿಗಳ ಸಂಪರ್ಕ ಬಾರದಂತೆ ಅಂತರ ಕಾಯ್ದುಕೊಳ್ಳಲಾಗುತ್ತದೆ. ದೇಹದ ರಕ್ಷಣಾ ವ್ಯವಸ್ಥೆ ಹದಗೆಟ್ಟ ಮಧುಮೇಹಿಗಳು, ಗರ್ಭಿಣಿಯರು, ಸಣ್ಣ ಶಿಶುಗಳಲ್ಲಿ ವಿಶೇಷ ಮುತುವರ್ಜಿ ವಹಿಸಿ ತೀವ್ರ ನಿಗಾ ಘಟಕದಲ್ಲಿರಿಸಿ ಎಚ್ಚರಿಕೆ ವಹಿಸಲಾಗುತ್ತದೆ. ಒಟ್ಟಿನಲ್ಲಿ ರೋಗ ಬರದಂತೆ ತಡೆಯುವುದರಲ್ಲಿಯೇ ಜಾಣತನ ಅಡಗಿದೆ.

ಕೊನೆಮಾತು

ಆಧುನಿಕತೆ, ತಂತ್ರಜ್ಞಾನ ಬೆಳೆದಂತೆಲ್ಲಾ ಜಗತ್ತು ಕಿರಿದಾಗುತ್ತದೆ. ಹೊಸ ಹೊಸ ತಂತ್ರಜ್ಞಾನ ಮತ್ತು ಔಷಧಿ ಹುಟ್ಟಿದಂತೆ ಹೊಸ ರೋಗಗಳೂ ಹುಟ್ಟಿಕೊಳ್ಳುತ್ತವೆ. ಸಂಚಾರ ಕ್ಷೇತ್ರದಲ್ಲಿ ಉಂಟಾದ ಕ್ರಾಂತಿಯಿಂದಾಗಿ ಜನರು ದಿನಬೆಳಗಾಗುವುದರೊಳಗೆ ಜಗತ್ತಿನೆಲ್ಲೆಡೆ ಸಂಚರಿಸಲು ಸಾಧ್ಯವಾಗಿದೆ. ಆದರೆ ತಾವು ಚಲಿಸುವಾಗ ತಮ್ಮ ಜೊತೆ ರೋಗವನ್ನು ಒಂದು ದೇಶದಿಂದ ಇನ್ನೊಂದು ದೇಶಕ್ಕೆ ಹರಡುತ್ತಿರುವುದು ದೌರ್ಭಾಗ್ಯಕರ ವಿಚಾರವಾಗಿದೆ. ಈ ಕಾರಣದಿಂದಲೇ ಎಲ್ಲೋ ಆಫ್ರಿಕಾ ಖಂಡದ ಕಾಡಿನಲ್ಲಿ ಹುಟ್ಟಿದ ವೈರಾಣು ಸೋಂಕು ಏಶ್ಯ ಖಂಡದ ಚೀನಾ ಮತ್ತು ಭಾರತಕ್ಕೆ ದಿನ ಬೆಳಗಾಗುವುದರೊಳಗೆ ಹರಡಲು ಸಾಧ್ಯವಿದೆ. ಈ ಕಾರಣದಿಂದ ಎಲ್ಲೋ ಚೀನಾದಲ್ಲಿ ರೋಗ ಬಂದಿದೆ ನಮಗೇನೂ ಆಗದು ಎಂದು ಕೈಕಟ್ಟಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ಎಬೋಲಾ ಕಳೆದ ವರ್ಷ ಮಾಡಿದ ದಾಂಧಲೆ ನಮಗೆಲ್ಲಾ ನೆನಪಿದೆ. 2003ರಲ್ಲಿ SARS  ರೋಗ ಮತ್ತು 2012ರಲ್ಲಿ MERS ರೋಗ 2017ರಲ್ಲಿ ಎಬೋಲಾ ಹೀಗೆ ಪಟ್ಟಿ ಬೆಳೆಯುತ್ತಲೇ ಇದೆ. ಈ ನಿಟ್ಟಿನಲ್ಲಿ ನಾವೆಲ್ಲಾ ಸಾಕಷ್ಟು ಮುಂಜಾಗರೂಕತೆ ವಹಿಸಿದಲ್ಲಿ ಮಾತ್ರ ಈ ರೀತಿ ಸಾಂಕ್ರಾಮಿಕ ರೋಗಗಳನ್ನು ತಡೆಯಲು ಸಾಧ್ಯವಿದೆ. ಇಲ್ಲವಾದಲ್ಲಿ ಕಣ್ಣಿಗೆ ಕಾಣಿಸದ ವೈರಾಣುಗಳು ಮನುಕುಲಕ್ಕೆ ಪ್ರತಿ ದಿನ ಹೊಸ ಹೊಸ ರೋಗಗಳನ್ನು ತಂದೊಡ್ಡಿ ನಮ್ಮ ಅಸ್ತಿತ್ವಕ್ಕೆ ಕುಂದುಂಟಾಗಬಹುದು.

share
ಡಾ. ಮುರಲೀ ಮೋಹನ ಚೂಂತಾರು
ಡಾ. ಮುರಲೀ ಮೋಹನ ಚೂಂತಾರು
Next Story
X