Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಪರಿಷತ್ ಉಪ ಚುನಾವಣೆ: ಬಿಎಸ್‌ವೈಗೆ...

ವಿಧಾನಪರಿಷತ್ ಉಪ ಚುನಾವಣೆ: ಬಿಎಸ್‌ವೈಗೆ ಮತ್ತೆ ಶುರುವಾಯಿತು ಟೆನ್ಶನ್

ವಾರ್ತಾಭಾರತಿವಾರ್ತಾಭಾರತಿ27 Jan 2020 9:18 PM IST
share
ವಿಧಾನಪರಿಷತ್ ಉಪ ಚುನಾವಣೆ: ಬಿಎಸ್‌ವೈಗೆ ಮತ್ತೆ ಶುರುವಾಯಿತು ಟೆನ್ಶನ್

ಬೆಂಗಳೂರು, ಜ.27: ಶಿವಾಜಿನಗರ ಶಾಸಕ ರಿಝ್ವಾನ್ ಅರ್ಶದ್ ಅವರಿಂದ ತೆರವಾಗಿರುವ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಭಾರತೀಯ ಚುನಾವಣಾ ಆಯೋಗವು ಫೆ.17ರಂದು ಉಪ ಚುನಾವಣೆ ಘೋಷಿಸಿದ ಬೆನ್ನಲ್ಲೆ, ಆಡಳಿತರೂಢ ಬಿಜೆಪಿಯಲ್ಲಿ ಮತ್ತೊಂದು ಸುತ್ತಿನ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.

ಈಗಾಗಲೇ, ಸಚಿವ ಸಂಪುಟ ವಿಸ್ತರಣೆ ಮಾಡುವಲ್ಲಿ ಆಗುತ್ತಿರುವ ವಿಳಂಬದಿಂದ ನೂತನ ಶಾಸಕರು ಹೈರಾಣಾಗಿದ್ದು, ಇದೀಗ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಮಾಜಿ ಸಚಿವ ಆರ್.ಶಂಕರ್ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪೈಕಿ ಯಾರಿಗೆ ಮಣೆ ಹಾಕಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಲೋಚನೆಯಲ್ಲಿ ಮುಳುಗಿದ್ದಾರೆ.

ಉಪ ಚುನಾವಣೆಯಲ್ಲಿ ರಾಣೆಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸಲು ಅನರ್ಹ ಶಾಸಕ ಆರ್.ಶಂಕರ್‌ಗೆ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಅವರನ್ನು ವಿಧಾನಪರಿಷತ್ತಿನ ಸದಸ್ಯರನ್ನಾಗಿ ಮಾಡಿ, ಸಚಿವರನ್ನಾಗಿಸಲಾಗುವುದು ಎಂದು ಯಡಿಯೂರಪ್ಪ ಭರವಸೆ ನೀಡಿದ್ದರು. ಅಥಣಿ ವಿಧಾನಸಭಾ ಕ್ಷೇತ್ರದಿಂದ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡಿದ್ದರಿಂದ, ಅಸಮಾಧಾನಗೊಂಡಿದ್ದ ಲಕ್ಷ್ಮಣ ಸವದಿಯನ್ನು ಯಾವುದೇ ಕಾರಣಕ್ಕೂ ಅಗೌರವದಿಂದ ನಡೆಸಿಕೊಳ್ಳಬಾರದು ಎಂದು ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿಗೆ ಸೂಚನೆ ನೀಡಿತ್ತು.

ಅದರಂತೆ, ಲಕ್ಷ್ಮಣ ಸವದಿಯನ್ನು ವಿಧಾನಪರಿಷತ್ತಿಗೆ ಆಯ್ಕೆ ಮಾಡುವುದಲ್ಲದೇ, ಉಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಉಪ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಲಕ್ಷ್ಮಣ ಸವದಿ ಆರು ತಿಂಗಳ ಒಳಗಾಗಿ ವಿಧಾನಸಭೆ ಅಥವಾ ವಿಧಾನಪರಿಷತ್ತಿನ ಸದಸ್ಯತ್ವವನ್ನು ಪಡೆದುಕೊಳ್ಳಬೇಕಿದೆ. ಇವರಿಬ್ಬರನ್ನೂ ಹೊರತುಪಡಿಸಿ, ಬಿಜೆಪಿ ಸರಕಾರ ರಚನೆಗಾಗಿ ಶಾಸಕ ಹಾಗೂ ಸಚಿವ ಸ್ಥಾನ್ಕಕೆ ರಾಜೀನಾಮೆ ನೀಡಿದ್ದ ಎಂಟಿಬಿ ನಾಗರಾಜ್ ಹಾಗೂ ಎಚ್.ವಿಶ್ವನಾಥ್ ಕೂಡ ವಿಧಾನಪರಿಷತ್ತಿನ ಸದಸ್ಯರಾಗುವ ಮೂಲಕ ಯಡಿಯೂರಪ್ಪ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನಪಡೆಯುವ ಪ್ರಯತ್ನಗಳನ್ನು ಮುಂದುವರೆಸಿದ್ದಾರೆ.

ಆದ್ಯತೆಯ ಮೇರೆಗೆ ಶಂಕರ್ ಹಾಗೂ ಲಕ್ಷ್ಮಣ ಸವದಿ ನಡುವೆ ಯಾರನ್ನು ಅಭ್ಯರ್ಥಿಯನ್ನಾಗಿಸಬೇಕು ಎಂಬ ಗೊಂದಲದಲ್ಲಿ ಮುಖ್ಯಮಂತ್ರಿ ಇದ್ದು, ಬಹುತೇಕ ಲಕ್ಷ್ಮಣ ಸವದಿಗೆ ಬಿಜೆಪಿ ಹೈಕಮಾಂಡ್ ಮಣೆಹಾಕುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಮುಂದಿನ ಜೂನ್ ವೇಳೆಗೆ ವಿಧಾನಪರಿಷತ್ತಿನ ಹಲವು ಸ್ಥಾನಗಳು ಖಾಲಿಯಾಗುವುದರಿಂದ, ಅಲ್ಲಿಯವರೆಗೆ ಕಾಯುವಂತೆ ಶಂಕರ್‌ಗೆ ಮುಖ್ಯಮಂತ್ರಿ ಸಂದೇಶ ನೀಡಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X