ಕೊರೊನಾ ವೈರಸ್ ಸೋಕಿಗೊಳಗಾದ ಶಂಕೆ: ತಾಯಿ, ಮಗ ಆಸ್ಪತ್ರೆಗೆ ದಾಖಲು
ಇಂದೋರ್, ಜ. 28: ಕೊರೊನಾ ವೈರಸ್ ಸೋಂಕಿನ ಶಂಕೆಯಲ್ಲಿ ಚೀನಾದಿಂದ ಇತ್ತೀಚೆಗೆ ಹಿಂದಿರುಗಿರುವ ಓರ್ವ ಮಹಿಳೆ ಹಾಗೂ ಆಕೆಯ ಪುತ್ರನನ್ನು ಮಧ್ಯಪ್ರದೇಶದ ಉಜ್ಜೈನಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಿದೆ.
ಚೀನಾದ ವುಹಾನ್‌ನಿಂದ ಹಿಂದಿರುಗಿದ ವೈದ್ಯಕೀಯ ವಿದ್ಯಾರ್ಥಿ ಹಾಗೂ ಉಜ್ಜೈನಿ ನಿವಾಸಿ ಆತನ ತಾಯಿ ಇಬ್ಬರೂ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿರುವ ಶಂಕೆ ಇದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಉಜ್ಜೈನಿಯಲ್ಲಿ ಇಬ್ಬರು ವ್ಯಕ್ತಿಗಳು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿರುವ ಶಂಕೆ ವ್ಯಕ್ತವಾದ ಬಳಿಕ ಕಟ್ಟೆಚ್ಚರ ವಹಿಸಲು ಹಾಗೂ ಪರಿಸ್ಥಿತಿಯ ಬಗ್ಗೆ ನಿಗಾ ಇರಿಸಲು ಆರೋಗ್ಯ ಇಲಾಖೆಯ ಪ್ರಾಥಮಿಕ ಕಾರ್ಯದರ್ಶಿ ಹಾಗೂ ಆಯುಕ್ತರು ಸೇರಿದಂತೆ ನನ್ನ ಇಲಾಖೆಯ ಎಲ್ಲ ಉನ್ನತ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಧ್ಯಪ್ರದೇಶದ ಆರೋಗ್ಯ ಸಚಿವ ತುಲ್ಸಿ ಸಿಲಾವತ್ ಇಂದೋರ್‌ನಲ್ಲಿ ಮಂಗಳವಾರ ತಿಳಿಸಿದ್ದಾರೆ.
Next Story





