ಬಿಬಿಎಂಪಿ ಚುನಾಯಿತ ಸದಸ್ಯರ ಅವಧಿ ಮುಗಿಯುವ ಹಿನ್ನೆಲೆ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಜ.28: ಬಿಬಿಎಂಪಿ ಚುನಾಯಿತ ಸದಸ್ಯರ ಅವಧಿ 2020ರ ಸೆ.10ಕ್ಕೆ ಮುಗಿಯುವ ಹಿನ್ನೆಲೆಯಲ್ಲಿ 198 ವಾರ್ಡ್‌ಗಳ ಮರು ವಿಂಗಡಣೆ ಮತ್ತು ಮೀಸಲಾತಿ ಪಟ್ಟಿಯನ್ನು ಒದಗಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ನಗರ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ವಕೀಲರ ವಾದ ಆಲಿಸಿದ ನ್ಯಾಯಪೀಠವು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ನಗರ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿತು.
Next Story





