ಕಳವು ಆರೋಪಿಯ ಬಂಧನ: 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ
ಸಾಂದರ್ಭಿಕ ಚಿತ್ರ
ಬೆಂಗಳೂರು, ಜ.29: ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಪ್ರಕರಣ ಸಂಬಂಧ ಇಲ್ಲಿನ ಜಾಲಹಳ್ಳಿ ಠಾಣಾ ಪೊಲೀಸರು 16 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.
ಕೊಡಗು ಜಿಲ್ಲೆಯ ರಾಜಪೇಟೆಯ ಉದಯ್(34) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಜಾಲಹಳ್ಳಿಯ ಮುತ್ಯಾಲ ನಗರದ ನಿವಾಸಿಯೋರ್ವರ ಮನೆಗೆ ಜ.21 ರಂದು ರಾತ್ರಿ ನುಗ್ಗಿ ಮನೆಯಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಜಾಲಹಳ್ಳಿ ಠಾಣಾ ಪೊಲೀಸರು, ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯಿಂದ 16 ಲಕ್ಷ ಮೌಲ್ಯದ 466 ಗ್ರಾಂ. ಚಿನ್ನಾಭರಣ ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story