Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲಬುರಗಿ: 85ನೇ ಕನ್ನಡ ಸಾಹಿತ್ಯ...

ಕಲಬುರಗಿ: 85ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆ.ಎಂ ಸಿದ್ದೀಕ್ ಮೊಂಟುಗೋಳಿಗೆ ಸನ್ಮಾನ

ಮುಹಮ್ಮದ್ ಅಲಿ ಕಮ್ಮರಡಿಮುಹಮ್ಮದ್ ಅಲಿ ಕಮ್ಮರಡಿ31 Jan 2020 4:50 PM IST
share
ಕಲಬುರಗಿ: 85ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆ.ಎಂ ಸಿದ್ದೀಕ್ ಮೊಂಟುಗೋಳಿಗೆ ಸನ್ಮಾನ

ಕಲಬುರಗಿ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕಲಬುರುಗಿಯಲ್ಲಿ ಫೆ.5,6 ಹಾಗೂ 7ರಂದು ಹಿರಿಯ ಸಾಹಿತಿ ಡಾ.ಎಚ್.ಎಸ್. ವೆಂಕಟೇಶ ಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಸನ್ಮಾನಿಸುವ ಕಾರ್ಯಕ್ರಮವು ಫೆ.6ರಂದು ಮದ್ಯಾಹ್ನ 2.30ಕ್ಕೆ ನಡೆಯಲಿದ್ದು, ಈ ಸಂದರ್ಭ ಕೆ.ಎಂ. ಅಬೂಬಕರ್ ಸಿದ್ದೀಕ್ ಮೊಂಟುಗೋಳಿ ಅವರನ್ನು ಸನ್ಮಾನಿಸಲಾಗುವುದು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆಯುವ ಸನ್ಮಾನ ಸಮಾರಂಭದಲ್ಲಿ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೈಗಾರಿಕಾ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಸಿದ್ದೀಕ್ ಮೊಂಟುಗೋಳಿ ಅವರನ್ನು ಸನ್ಮಾನಿಸಲಿದ್ದಾರೆ.

ಸಿದ್ದೀಕ್ ಮೊಂಟುಗೋಳಿ ಪರಿಚಯ

1979 ಮೇ 21 ರಂದು ಮಂಗಳೂರಿನ ಹರೇಕಳದಲ್ಲಿ ಅಲ್ಹಾಜ್ ಕೆ.ಪಿ.ಕುಂಞಿ ಅಹ್ಮದ್ ಮುಸ್ಲಿಯಾರ್ ಬಾಖವಿ ಮತ್ತು ಅವ್ವಾ ಹಾಜಿಮಾ ಬೈತಾರ್ ಅವರ ಪುತ್ರನಾಗಿ ಜನಿಸಿದ ಕೆ.ಎಂ. ಅಬೂಬಕರ್ ಸಿದ್ದೀಕ್ ಮೊಂಟುಗೋಳಿ ಅವರ ಕುಟುಂಬ ಪ್ರಸಕ್ತ ಕಿನ್ಯಾ ಗ್ರಾಮದ ಮೊಂಟುಗೋಳಿಯಲ್ಲಿ ವಾಸ್ತವ್ಯ ಹೂಡಿದೆ.

ಪತ್ರಿಕೋದ್ಯಮ ಮತ್ತು ಕನ್ನಡ ಸಾಹಿತ್ಯದಲ್ಲಿ ಪದವಿ, ರಾಜ್ಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿ ಯಾಗಿರುವ ಇವರ ಹತ್ತಕ್ಕೂ ಅಧಿಕ ಪುಸ್ತಕಗಳು ಪ್ರಕಟವಾಗಿವೆ. ಹತ್ತಾರು ಸ್ಮರಣ ಸಂಚಿಕೆಗಳ ಸಂಪಾದನೆ ಮಾಡಿರುವ ಇವರ ಸಾವಿರಾರು ಲೇಖನಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ಸುನ್ನಿ ಸಾಹಿತ್ಯ ಪುರಸ್ಕಾರ, ದಾರುರ್ ಇರ್ಶಾದ್ ಬೆಳ್ಳಿಹಬ್ಬ ಪುರಸ್ಕಾರ, ನೂರುಲು ಉಲಮಾ ಸಾಹಿತ್ಯ ಪ್ರಶಸ್ತಿಗಳಿಂದ ಪುರಸ್ಕೃತರಾದ ಇವರು ವೃತ್ತಿಪರವಾಗಿ ಪತ್ರಕರ್ತ ಮತ್ತು ಧರ್ಮ ಗುರುಗಳಾಗಿದ್ದಾರೆ. ಸುನ್ನೀ ಸ್ಟುಡೆಂಟ್ ಫೆಡರೇಶನ್ ಇದರ ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಮುಸ್ಲಿಂ ಜಮಾಅತ್ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ, ಕರ್ನಾ‍ಟಕ ಸುನ್ನಿ ಕೋ ಆರ್ಡಿನೇಶನ್ ಸಮಿತಿಯ ಕಾರ್ಯದರ್ಶಿ, ಹೀಗೆ ಅನೇಕ ಸಂಘಟನೆಗಳಲ್ಲಿ ದುಡಿಯುತ್ತಿರುವ ಇವರು ಕರ್ನಾಟಕ ರಾಜ್ಯ ಹಜ್ ಸಮಿತಿಯ ನಿಕಟ ಪೂರ್ವ ಸದಸ್ಯರಾಗಿದ್ದಾರೆ.

ಅಲ್ ಅನ್ಸಾರ್, ಮೊಯ್ಲಾಂಜಿ ಮತ್ತು ಇಶಾರ ಪತ್ರಿಕೆಗಳಲ್ಲೂ ಸೇವೆ ಸಲ್ಲಿಸಿರುವ ಅಬೂಬಕರ್ ಸಿದ್ದೀಕ್ ಮೊಂಟುಗೋಳಿ ಉತ್ತಮ ವಾಗ್ಮಿಯಾಗಿದ್ದು, ಧರ್ಮ ಭೋಧನೆ, ಕೋಮು ಸೌಹಾರ್ದತೆ, ರಾಷ್ಟ್ರೀಯ ಭಾವೈಕ್ಯ ಇತ್ಯಾದಿಗಳ ಬಗ್ಗೆ ಉಪನ್ಯಾಸ ನೀಡಿದ್ದು, ಅರಬ್ ರಾಷ್ಟ್ರಗಳಿಗೂ ಭೇಟಿ ನೀಡಿದ್ದಾರೆ.

share
ಮುಹಮ್ಮದ್ ಅಲಿ ಕಮ್ಮರಡಿ
ಮುಹಮ್ಮದ್ ಅಲಿ ಕಮ್ಮರಡಿ
Next Story
X