ತೆಂಕನಿಡಿಯೂರು: ಎನ್ನೆಸ್ಸೆಸ್ ಶಿಬಿರ ಸಮಾರೋಪ

ಉಡುಪಿ, ಜ.31: ಸೇವೆಯೆನ್ನುವುದು ಮನುಷ್ಯನ ಸಹಜ ಗುಣವಾಗಿದ್ದು ಅದನ್ನು ಕರ್ತವ್ಯದ ರೂಪದಲ್ಲಿ ನಿತ್ಯವೂ ಪಾಲಿಸಿದಾಗ ಬದುಕು ಸುಂದರ ಎಂದು ಉಡುಪಿ ಜಿಪಂ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ ಹೇಳಿದ್ದಾರೆ.
ಕುಕ್ಕೆಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡುತಿದ್ದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಮಾತನಾಡಿ ಏಳು ದಿನಗಳ ಶಿಬಿರದಲ್ಲಿ ವಿದ್ಯಾರ್ಥಿಗಳು ಪಡೆದ ಅನುವವನ್ನು ತಮ್ಮ ಶೈಕ್ಷಣಿಕ ಜೀವನದ ಶಿಸ್ತಾಗಿ ಮಾರ್ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಶಿಬಿರಕ್ಕೆ ಸಹಕರಿಸಿದ ಶಾಲಾ ಮುಖ್ಯೋಪಾಧ್ಯಾಯಿನಿ ಆಶಾ, ಎಸ್‌ಡಿಎಂಸಿ ಅಧ್ಯಕ್ಷ ಅಶೋಕ್, ಸ್ಥಳೀಯ ಪ್ರಮುಖರಾದ ಪ್ರಕಾಶ್ ಕುಕ್ಕೆಹಳ್ಳಿ ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ತಾಪಂ ಸದಸ್ಯ ಸುಭಾಸ್ ನಾಯ್ಕ, ಉದ್ಯಮಿ ಸುಧೀಶ್ ನಾಯಕ್, ಎಸ್‌ಡಿಎಂಸಿ ಮಾಜಿ ಅಧ್ಯಕ್ಷರಾದ ದಿಲೀಪ್ ಹೆಗ್ಡೆ, ಶ್ರೀಧರ ಹಾಂಡ, ಲೂಸಿ ಡಿಸೋಜಾ ಹಾಗೂ ಹರಿಜೀವನ್ ಹೆಗ್ಡೆ ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಯೋಜನಾಧಿ ಕಾರಿ ಪ್ರಸಾದ್ ರಾವ್ ಎಂ. ಸ್ವಾಗತಿಸಿ, ಅಶ್ವಿಜಾ ಕಾರ್ಯಕ್ರಮ ನಿರೂಪಿಸಿದರು. ದಯಾನಂದ ವಂದಿಸಿದರು.







