Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.1ರಿಂದ ನಂದಿನಿ ಹಾಲು, ಮೊಸರಿನ ದರ...

ಫೆ.1ರಿಂದ ನಂದಿನಿ ಹಾಲು, ಮೊಸರಿನ ದರ ಪರಿಷ್ಕರಣೆ

ವಾರ್ತಾಭಾರತಿವಾರ್ತಾಭಾರತಿ31 Jan 2020 9:24 PM IST
share

ಉಡುಪಿ, ಜ.31: ಗ್ರಾಮೀಣ ಪ್ರದೇಶದಲ್ಲಿ ಹಾಲಿನ ಉತ್ಪಾದನೆಗೆ ಮೇವಿನ ಕೊರತೆ, ರಾಸುಗಳ ಸಾಕಾಣಿಕೆಗೆ ಬಳಸುವ ಪಶು ಆಹಾರದ ಬೆಲೆ, ಸಾಗಾಣಿಕೆ ಮತ್ತು ಸಂಸ್ಕರಣೆ/ಪ್ಯಾಕಿಂಗ್ ವೆಚ್ಚ ದುಬಾರಿ, ನಿರ್ವಹಣಾ ವೆಚ್ಚ ಹೆಚ್ಚಾಗಿ ರುವುದರಿಂದ ಹಾಗೂ ಹಾಲಿನ ಸಂಗ್ರಹಣೆ ಕಡಿಮೆ ಯಾಗಿರುವ ನಿಟ್ಟಿನಲ್ಲಿ ಹಾಲು ಉತ್ಪಾದನೆಗೆ ಪ್ರೋತ್ಸಾಹಿಸಲು ನಂದಿನಿ ಹಾಲಿನ ಮಾರುಕಟ್ಟೆ ದರವನ್ನು ಹೆಚ್ಚಿಸಿ, ರೈತರಿಗೆ ಉತ್ತಮ ದರ ನೀಡುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಹಾಗೂ ಕರ್ನಾಟಕ ಸಹಕಾರಿ ಹಾಲು ಮಹಾ ಮಂಡಳದ ಆದೇಶದಂತೆ ರಾಜ್ಯದಾದ್ಯಂತ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ಬೆಲೆಯನ್ನು ಪರಿಷ್ಕರಿಸಲಾಗಿದೆ. ಅದರಂತೆ ಫೆ.1ರ ಬೆಳಗ್ಗೆ ಅನ್ವಯವಾಗುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರವನ್ನು ಲೀಟರ್‌ಗೆ ತಲಾ ಎರಡು ರೂ.ಗಳಷ್ಟು ಹೆಚ್ಚಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಂದಿನಿ ಹಾಲು ಮತ್ತು ಮೊಸರನ್ನು ನಂದಿನಿ ಡೀಲರುಗಳು ಗರಿಷ್ಟ ಮಾರಾಟ ದರಕ್ಕೆ (ಎಂಆರ್‌ಪಿ) ಮೀರದಂತೆ ಮಾರಾಟ ಮಾಡಿ, ಗ್ರಾಹಕರಿಗೆ ಉತ್ತಮ ಸೇವೆ ನೀಡುವಂತೆ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಪ್ರಕಟಣಯಲ್ಲಿ ತಿಳಿಸಿದ್ದಾರೆ.

ನಂದಿನಿ ಟೋನ್ಡ್ ಹಾಲು (500 ಮಿ.ಲೀ) ಹಳೆಯ ದರ 18 ರೂ., ಪರಿಷ್ಕೃತ ಎಂಆರ್‌ಪಿ ದರ 19 ರೂ., ನಂದಿನಿ ಟೋನ್ಡ್ ಹಾಲು (1000 ಮಿ.ಲೀ) ಹಳೆಯ ದರ 35 ರೂ., ಪರಿಷ್ಕೃತ ಎಂಆರ್‌ಪಿ ದರ 37 ರೂ., ನಂದಿನಿ ಹೋಮೊಜಿನೈಸ್ಡ್ ಹಸುವಿನ ಹಾಲು (500 ಮಿ.ಲೀ) ಹಳೆಯ ದರ 20 ರೂ., ಪರಿಷ್ಕೃತ ದರ 21 ರೂ., ನಂದಿನಿ ಹೋಮೊಜಿನೈಸ್ಡ್ ಹಸುವಿನ ಹಾಲು (6ಲೀ. ಜಂಬೋ) ಹಳೆಯ ದರ 234 ರೂ., ಪರಿಷ್ಕೃತ ಎಂಆರ್‌ಪಿ ದರ 249 ರೂ..

ನಂದಿನಿ ಶುಭಂ ಹಾಲು (500 ಮಿ.ಲೀ.) ಹಳೆಯ ದರ 21 ರೂ., ಪರಿಷ್ಕೃತ ಎಂಆರ್‌ಪಿ ದರ 22 ರೂ., ನಂದಿನಿ ಸಮೃದ್ಧಿ ಹಾಲು (500 ಮಿ.ಲೀ) ಹಳೆಯ ದರ 23 ರೂ., ಪರಿಷ್ಕೃತ ದರ 24 ರೂ., ಮೊಸರು (200 ಗ್ರಾಂ) ಹಳೆಯ ದರ 11 ರೂ., ಪರಿಷ್ಕೃತ ದರ 12 ರೂ., ಮೊಸರು (415 ಗ್ರಾಂ) ಹಳೆಯ ದರ 20 ರೂ., ಪರಿಷ್ಕೃತ ಎಂಆರ್‌ಪಿ ದರ 21 ರೂ., ಮೊಸರು (1 ಕೆ.ಜಿ) ಹಳೆಯ ದರ 43 ರೂ., ಪರಿಷ್ಕೃತ ದರ 45 ರೂ., ಮೊಸರು (6 ಕೆ.ಜಿ. ಜಂಬೋ) ಹಳೆಯ ದರ 252 ರೂ., ಪರಿಷ್ಕೃತ ಎಂಆರ್‌ಪಿ ದರ 267 ರೂ. ಗಳು.

ಒಕ್ಕೂಟದಲ್ಲಿ ಹಳೆಯ ದರಗಳು ಮುದ್ರಿತವಾಗಿರುವ ಪೌಚ್ ಫಿಲಂ ದಾಸ್ತಾನು ಮುಗಿಯುವವರೆಗೆ ಹಳೆಯ ದರಗಳು ಮುದ್ರಿತವಾಗಿರುವ ಪ್ಯಾಕೆಟ್‌ಗಳಲ್ಲಿ ನಂದಿನಿ ಹಾಲು ಮತ್ತು ಮೊಸರನ್ನು ಪ್ಯಾಕ್ ಮಾಡಿ, ಸರಬರಾಜು ಮಾಡಲಾಗುವುದು. ಎಲ್ಲಾ ಗ್ರಾಹಕರು ಹಾಗೂ ನಂದಿನಿ ಹಾಲಿನ ಅಧಿಕೃತ ಡೀಲರುಗಳು ಪರಿಷ್ಕೃತ ದರದಲ್ಲಿಯೇ ವ್ಯವಹರಿಸಿ, ಒಕ್ಕೂಟ ದೊಂದಿಗೆ ಸಹಕರಿಸುವಂತೆ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X