Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಾರತದಲ್ಲಿ ಜನಿಸಿದ್ದೇ ಪೌರತ್ವಕ್ಕೆ...

ಭಾರತದಲ್ಲಿ ಜನಿಸಿದ್ದೇ ಪೌರತ್ವಕ್ಕೆ ಮಾನದಂಡವಾಗಲಿ: ಕರ್ನಾಟಕ ಮುಸ್ಲಿಂ ಜಮಾಅತ್

ವಾರ್ತಾಭಾರತಿವಾರ್ತಾಭಾರತಿ31 Jan 2020 9:48 PM IST
share
ಭಾರತದಲ್ಲಿ ಜನಿಸಿದ್ದೇ ಪೌರತ್ವಕ್ಕೆ ಮಾನದಂಡವಾಗಲಿ: ಕರ್ನಾಟಕ ಮುಸ್ಲಿಂ ಜಮಾಅತ್

ಬೆಂಗಳೂರು: ಭಾರತದಲ್ಲಿ ಜನಿಸಿದ್ದೇ ಭಾರತದ ಪೌರತ್ವಕ್ಕೆ ಮಾನದಂಡವಾಗಬೇಕು. ತಾತ, ಮುತ್ತಾತಂದಿರ ಜನನಕ್ಕೆ ಪುರಾವೆಗಳನ್ನು ಕೇಳಿ ಪ್ರಜೆಗಳನ್ನು ಸತಾಯಿಸುವುದು ಚುನಾಯಿಸಿದ ಜನತೆಗೆ ಮಾಡುವ ಘೋರ ಅಪರಾಧ. ಹೊರಗಿನಿಂದ ಬಂದವರಿಗೆ ಪೌರತ್ವ ನೀಡುವ ವಿಚಾರದಲ್ಲಿಯೂ ಧರ್ಮ ಮಾನದಂಡವಾಗಬಾರದು. ಜನರನ್ನು ಆತಂಕಕ್ಕೀಡು ಮಾಡಿ ಬೀದಿಗಿಳಿಸಿರುವ ಸಿಎಎ, ಎನ್ಆರ್ ಸಿ, ಎನ್ ಪಿಆರ್ ಗಳನ್ನು ಹಿಂದಕ್ಕೆ ತೆಗೆದು ಸರ್ಕಾರ ಜನರ ಸ್ವಸ್ಥತೆಯನ್ನು ಮರಳಿಸಬೇಕು ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಆಗ್ರಹಿಸಿದೆ. 

ಎನ್ಆರ್ ಸಿ ಜಾರಿಮಾಡಿಯೇ ಸಿದ್ಧ ಎಂದು ಕೇಂದ್ರ ಗೃಹ ಸಚಿವರು ಹೇಳಿದ್ದರೆ, ಅಂತಹ ಚರ್ಚೆ ನಡೆದಿಲ್ಲ ಎಂದು ರಕ್ಷಣಾ ಸಚಿವರು ಹೇಳುತ್ತಾರೆ. ನಿಜ ಸ್ಥಿತಿಯ ಬಗ್ಗೆ ಪ್ರಧಾನಿ ಮೌನ ಮುರಿಯಬೇಕು ಎಂದು ಹೇಳಿರುವ ಮುಸ್ಲಿಂ ಜಮಾತ್, ಮಂಗಳೂರಿನಲ್ಲಿ ನಡೆದ ಗೋಲಿಬಾರ್, ವಿಮಾನ ನಿಲ್ದಾಣದಲ್ಲಿ ನಡೆದಿರುವ ಸ್ಪೋಟಕ ಇರಿಸಿದ್ದ ಪ್ರಕರಣ ಹಾಗೂ ದೆಹಲಿಯಲ್ಲಿ ನಡೆದಿರುವ ಗುಂಡು ಹಾರಾಟ ಪ್ರಕರಣಗಳನ್ನು ನಿಷ್ಪಕ್ಷಪಾತ ತನಿಖೆಗೆ ಒಳಪಡಿಸಿ ನ್ಯಾಯ ವ್ಯವಸ್ಥೆಯ ಬಗ್ಗೆ ಜನರಲ್ಲಿ ಭರವಸೆ ಮೂಡಿಸಬೇಕು ಎಂದು ಆಗ್ರಹಿಸಿದೆ.

ಬೆಂಗಳೂರಿನಲ್ಲಿ ನಡೆದ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯಕಾರಿಣಿಯಲ್ಲಿ ಈ ಸಂಬಂಧ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಎನ್.ಕೆ.ಎಂ ಶಾಫಿ ಸಅದಿ, ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗೆ ಸಂಬಂಧಿಸಿದಂತೆ ಜನ ಜಾಗೃತಿ ಮೂಡಿಸುವುದಕ್ಕಾಗಿ 'ಪ್ರಜಾ ಭಾರತ' ಅಭಿಯಾನವನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ವಿಶ್ವ ಸಾಮಾಜಿಕ ನ್ಯಾಯ ದಿನವಾದ ಫೆ. 20ರಿಂದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ದಿನವಾದ ಎ. 14ರ ವರೆಗಿನ 55 ದಿನಗಳಲ್ಲಿ ರಾಜ್ಯದ ವಿವಿಧ ಕಡೆಗಳಲ್ಲಿ ಪ್ರಜಾ ಭಾರತ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.

ಮುಸ್ಲಿಂ ಜಮಾಅತ್ ರಾಜ್ಯಾಧ್ಯಕ್ಷ ಮುಫ್ತಿಯೇ ಕರ್ನಾಟಕ ಮೌಲಾನಾ ಅನ್ವರ್ ಅಲೀ ಖಾದಿರಿ ರಾಮನಗರ ಅಧ್ಯಕ್ಷತೆ ವಹಿಸಿದ್ದರು. ಕೊಡಗು ಜಿಲ್ಲಾ ಸಹಾಯಕ ಖಾಝಿ ಎಡಪ್ಪಲಂ ಮಹ್ಮೂದ್ ಮುಸ್ಲಿಯಾರ್, ಡಾ. ಮುಹಮ್ಮದ್ ಫಾಝಿಲ್ ಹಝ್ರತ್, ಅಬೂ ಸುಫ್ಯಾನ್ ಮದನಿ, ಮೌಲಾನಾ ಶಬೀರ್ ಹಝ್ರತ್ ಬೆಂಗಳೂರು, ಡಾ. ಎಮ್ಮೆಸ್ಸಂ ಕಾಮಿಲ್ ಸಖಾಫಿ, ಯಾಕೂಬ್ ಯೂಸುಫ್ ಶಿವಮೊಗ್ಗ, ಅಬ್ದುಲ್ಲತೀಫ್ ಶುಂಠಿ ಕೊಪ್ಪ, ಹಮೀದ್ ಬಜ್ಪೆ, ಎಂಬಿ ಹಮೀದ್ ಮಡಿಕೇರಿ, ಎಂಬಿಎಂ ಸಾದಿಕ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X