ಸರಕಾರಿ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಪ್ರಯತ್ನ : ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ

ಉಡುಪಿ, ಜ.31: ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಮಂಗಳೂರು ವಿವಿ ವ್ಯಾಪ್ತಿಯ ಸರಕಾರಿ ಕಾಲೇಜುಗಳನ್ನು ಮೇಲ್‌ಸ್ಥರಕ್ಕೇರಿಸುವ ನೈತಿಕ ಜವಾಬ್ದಾರಿ ತನ್ನ ಮೇಲಿದೆ ಎಂದು ಮಂಗಳೂರು ವಿಶ್ವವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದ್ದಾರೆ.
ಶುಕ್ರವಾರ ನಗರದ ಅಜ್ಜರಕಾಡಿನ ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ದಲ್ಲಿ ಕಾಲೇಜಿನ ಕಾಮರ್ಸ್ ಹಾಗೂ ಮ್ಯಾನೇಜ್‌ಮೆಂಟ್ ವಿಭಾಗದಿಂದ ವತಿ ಯಿಂದ ಹಮ್ಮಿಕೊಳ್ಳಲಾದ ‘ವಾಣಿಜ್ಯ ಮತ್ತು ನಿರ್ವಹಣೆಯಲ್ಲಿ ಸಮಕಾಲೀನ ವಿಷಯಗಳು’ ಕುರಿತ ರಾಷ್ಟ್ರೀಯ ವಿಚಾರಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ವಿಶ್ವವಿದ್ಯಾನಿಲಯದ ಗೌರವವನ್ನು ಎತ್ತಿ ಹಿಡಿಯುವಲ್ಲಿ ಶ್ರಮಿಸುವುದಾಗಿ ತಿಳಿಸಿದ ಅವರು, ವಾಣಿಜ್ಯ ಮತ್ತು ನಿರ್ವಹಣೆಯಲ್ಲಿ ಸಮಕಾಲೀನ ವಿಷಯಗಳ ಕುರಿತು ಟಿಪ್ಪಣಿ ನೀಡಿದರು. ಸಮಾಜಮುಖಿ ಕಾರ್ಯಗಳ ಮೂಲಕ ನಾವು ಉತ್ತಮ ಕಾರ್ಯಗಳನ್ನು ಮಾಡಬಹುದು. ನಮ್ಮ ಕೆಲಸಗಳ ಮೂಲಕ ಜನರು ನಮ್ಮನ್ನು ಗುರುತಿಸುವಂತಾಗಬೇಕು ಎಂದರು.
ವಿದ್ಯಾರ್ಥಿಗಳು ಪಠ್ಯ ವಿಚಾರಗಳಲ್ಲಿ ಮಾತ್ರ ಪಾಸಾದರೇ ಸಾಲದು. ಅವರಿಗೆ ಪ್ರಾಯೋಗಿಕ ಜ್ಞಾನದ ಅವಶ್ಯಕತೆ ಇದ್ದು, ಈ ಬಗ್ಗೆ ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆ ಗಮನಹರಿಸಬೇಕು. ಮಂಗಳೂರು ವಿವಿ ಸದ್ಯದಲ್ಲಿಯೇ ಕೌಶಲ್ಯ ಅಭಿವೃದ್ಧಿ ಕೇಂದ್ರ ಆರಂಭಿಸಲಿದೆ. ವಿದ್ಯಾರ್ಥಿಗಳಿಗೆ ಆಪ್ತ ಸಮಾಲೋಚಕರ ಅಗತ್ಯವಿದ್ದು, ಪ್ರತೀ ಕಾಲೇಜಿನಲ್ಲಿ ಕೌನ್ಸಿಲರ್‌ನ್ನು ನೇಮಕ ಾಡುವಂತೆ ಸೂಚಿಸಲಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉದ್ಯಮಿ ನಾಡೋಜ ಡಾ.ಜಿ. ಶಂಕರ್ ಮಾತನಾಡಿ, ಕಾಲೇಜಿನಲ್ಲಿ ಶೇ.70ರಷ್ಟು ಬಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಓದುತ್ತಿದ್ದು, ಈ ಕಾಲೇಜಿಗೆ ವಿಶ್ವವಿದ್ಯಾನಿಲಯ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಅಲ್ಲದೇ ಈ ಕಾಲೇಜಿನ ವಿದ್ಯಾರ್ಥಿಗಳ ಪ್ರಗತಿಗೆ ಸಾಧ್ಯವಾಗುವ ಎಲ್ಲಾ ಸಹಕಾರವನ್ನು ನೀಡಬೇಕು ಎಂದವರು ವಿವಿ ುಲಪತಿ ಗಳಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ದ.ಕ ಮತ್ತು ಉಡುಪಿ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ, ಶ್ರೀಧರ್ ಶೆಟ್ಟಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಪೂರ್ಣಪ್ರಜ್ಞ ಮ್ಯಾನೇಜ್‌ಮೆಂಟ್ ಕಾಲೇಜಿನ ಸ್ಥಾಪಕ ನಿರ್ದೇಶಕ ಡಾ.ಎಂ.ಆರ್ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.
ಕಾಲೇಜಿನ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ವಿಭಾಗದ ಮುಖ್ಯಸ್ಥೆ ಗೌರಿ ಎಸ್. ಭಟ್ ಸ್ವಾಗತಿಸಿದರು. ಕಲಾ ವಿಭಾಗದ ಮುಖ್ಯಸ್ಥ ಪ್ರೊ. ಸೋಜನ್ ಕೆ ಜಾರ್ಜ್ ಕಾರ್ಯಕ್ರಮ ನಿರೂಪಿಸಿದರು. ಸಮ್ಮೇಳನದ ಸಂಚಾಲಕ ಡಾ. ಉಮೇಶ್ ಮಯ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ರಾಮಚಂದ್ರ ಅಡಿಗ ಜಿ ವಂದಿಸಿದರು.







