Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು; ಬಿಎಸ್ಸೆನ್ನೆಲ್ ಸಿಬ್ಬಂದಿಗಳ...

ಪುತ್ತೂರು; ಬಿಎಸ್ಸೆನ್ನೆಲ್ ಸಿಬ್ಬಂದಿಗಳ ಸಾಮೂಹಿಕ ಸ್ವಯಂ ನಿವೃತ್ತಿ

ವಾರ್ತಾಭಾರತಿವಾರ್ತಾಭಾರತಿ31 Jan 2020 10:40 PM IST
share
ಪುತ್ತೂರು; ಬಿಎಸ್ಸೆನ್ನೆಲ್ ಸಿಬ್ಬಂದಿಗಳ ಸಾಮೂಹಿಕ ಸ್ವಯಂ ನಿವೃತ್ತಿ

ಪುತ್ತೂರು; ಸಾರ್ವಜನಿಕರ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಪುತ್ತೂರು ವಿಭಾಗದ ಬಿಎಸ್ಸೆನ್ನೆಲ್ ಸಂಸ್ಥೆಯಲ್ಲಿ ಇದೀಗ ಸ್ವಯಂ ನಿವೃತ್ತಿಯ ಪರ್ವ ನಡೆಯುತ್ತಿದ್ದು, ಸಂಸ್ಥೆಯ  62 ಮಂದಿ ಸಿಬ್ಬಂದಿಗಳ ಪೈಕಿ 43 ಮಂದಿ ಜ.31ರಂದು ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ. ಇದರಿಂದಾಗಿ ಬಿಎಸ್ಸೆನ್ನೆಲ್ ಸಂಸ್ಥೆಯು ಸಿಬ್ಬಂದಿಗಳ ಕೊರತೆಯಿಂದ ಬಳಲುವ ಸ್ಥಿತಿ ನಿರ್ಮಾಣಗೊಂಡಿದೆ. ಜೊತೆಗೆ ಜನಸಾಮಾನ್ಯರ ಸಂಪರ್ಕವನ್ನು ಕಳೆದುಕೊಳ್ಳುವ ಸಂಕಷ್ಟಕ್ಕೆ ಸಿಲುಕಿ ಕೊಂಡಿದೆ.

ಖಾಸಗಿ ನೆಟ್‍ವರ್ಕ್‍ಗಳ ಭರಾಟೆಯ ನಡುವೆ ಹಲವು ತೊಡಕುಗಳ ಮಧ್ಯೆ ಒದ್ದಾಡುತ್ತಿರುವ ಈ ಸರ್ಕಾರಿ ನೆಟ್‍ವರ್ಕ್‍ಗೆ ಸಿಬ್ಬಂದಿಗಳ ಈ ಸ್ವಯಂ ನಿವೃತ್ತಿ ದೊಡ್ಡ ಹೊಡೆತ ನೀಡಿದೆ. ಇದರಿಂದ ಜನರ ಸಂಪರ್ಕದ ಕೊಂಡಿ ಕಳಚಿಕೊಳ್ಳುವ ಸ್ಥಿತಿ ನಿರ್ಮಾಣಗೊಂಡಿದೆ. ಖಾಸಗಿ ನೆಟ್‍ವರ್ಕ್‍ಗಳು ಮುಟ್ಟದ ಎಷ್ಟೋ ಭಾಗಗಳಲ್ಲಿ ಬಿಎಸ್ಸೆನ್ನೆಲ್ ಇಂದೂ ಕೂಡಾ ಅನಿವಾರ್ಯವಾದ ಸಂಪರ್ಕ ಸೇತುವೆಯಾಗಿದ್ದು, ಸೀಮಿತ ಸಿಬ್ಬಂದಿಗಳು ಜನರ ಬೇಡಿಕೆಗಳನ್ನು ಪರಿಹರಿಸುವುದು ಕಷ್ಟಸಾಧ್ಯವೆಂದಾಗಿದೆ.

ಬಿಎಸ್ಸೆನ್ನೆಲ್ ಪುತ್ತೂರು ವಿಭಾಗದಲ್ಲಿ ಒಟ್ಟು 43 ಮಂದಿ ಏಕಕಾಲದಲ್ಲಿ ಸ್ವಯಂ ನಿವೃತ್ತಿ ಪಡೆಕೊಂಡಿದ್ದಾರೆ. ಪುತ್ತೂರು, ಉಪ್ಪಿನಂಗಡಿ, ನೆಲ್ಯಾಡಿ, ಕಡಬ ವ್ಯಾಪ್ತಿಯಲ್ಲಿ ಒಟ್ಟು 62 ಮಂದಿ ಸಿಬ್ಬಂದಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಇದರಲ್ಲಿ ಇದೀಗ 43 ಮಂದಿ ಸ್ವಯಂ ನಿವೃತ್ತಿ ಯಾಗಿದ್ದಾರೆ. ಉಳಿದ 19 ಮಂದಿಯಲ್ಲಿ 8 ಮಂದಿ ಮುಂದಿನ ಮೂರು ತಿಂಗಳಲ್ಲಿ ವಯೋಸಹಜ ನಿವೃತ್ತಿ ಪಡೆಯಲಿದ್ದಾರೆ. ಹಾಗಾಗಿ ಕೇವಲ 11 ಮಂದಿ ಮಾತ್ರ ಸಂಸ್ಥೆಯಲ್ಲಿ ಕರ್ತವ್ಯಪಾಲನೆ ನಡೆಸಲು ಉಳಿಯಲಿದ್ದಾರೆ. 63 ಮಂದಿ ನಿರ್ವಹಣೆ ಮಾಡುತ್ತಿದ್ದ ಕೆಲಸಗಳನ್ನು ಕೇವಲ 11 ಮಂದಿ ಮಾತ್ರ ನಿರ್ವಹಣೆ ಮಾಡಬೇಕಾದ ಅನಿವಾರ್ಯತೆಯ ಸವಾಲು ಬಿಎಸ್ಸೆನ್ನೆಲ್ ಸಂಸ್ಥೆಯ ಮುಂದಿದೆ.

ಪುತ್ತೂರು ನಗರದಲ್ಲಿರುವ ಬಿಎಸ್ಸೆನ್ನೆಲ್ ಪ್ರಧಾನ ಕಚೇರಿಯಲ್ಲಿ ಒಟ್ಟು 33 ಮಂದಿ ಸ್ವಯಂ ನಿವೃತ್ತಿ ಹೊಂದಲಿದ್ದಾರೆ. ಇಲ್ಲಿ ಕೇವಲ 8 ಮಂದಿ ಮಾತ್ರ ಉಳಿಯಲಿದ್ದಾರೆ. ಉಪ್ಪಿನಂಗಡಿ ಕಚೇರಿಯಲ್ಲಿ 21 ಸಿಬ್ಬಂದಿಗಳ ಪೈಕಿ 10 ಮಂದಿ ಸ್ವಯಂ ನಿವೃತ್ತಿಯಾಗಲಿದ್ದು, ಇಲ್ಲಿ 11 ಮಂದಿ ಮಾತ್ರ ಉಳಿಯಲಿದ್ದಾರೆ.

ಬಿಎಸ್ಸೆನ್ನೆಲ್ ಪುತ್ತೂರು ವಿಭಾಗದಲ್ಲಿ ಪ್ರಸ್ತುತ ಸರಿಸುಮಾರು 5500 ಸ್ಥಿರ ದೂರವಾಣಿಗಳಿದ್ದು, ಇದು ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಲೇ ಬರುತ್ತಿದೆ. ವ್ಯವಸ್ಥಿತ ರೂಪದಲ್ಲಿ ಈ ಸಂಪರ್ಕ ಸೇತುವನ್ನು ಉಳಿಸಿಕಪಳ್ಳಲಾಗದ ಕಾರಣ ಜನಸಾಮಾನ್ಯರಲ್ಲಿ ಬಿಎಸ್ಸೆನ್ನೆಲ್ ಬಗ್ಗೆ ಹಲವು ಆರೋಪಗಳಿವೆ. ಹಾಗಾಗಿಯೇ ಬಹುತೇಕ ಮಂದಿ ಬಿಎಸ್ಸೆನ್ನೆಲ್ ನೆಟ್‍ವರ್ಕ್‍ನಿಂದ ದೂರವಾಗುತ್ತಿದ್ದಾರೆ. ಹಾಗಿದ್ದರೂ ಗ್ರಾಮೀಣ ಪ್ರದೇಶದ ಹಲವು ಕಡೆಗಳಲ್ಲಿ ಬಿಎಸ್ಸೆನ್ನೆಲ್ ಇನ್ನೂ ಜೀವಂತವಾಗಿದೆ. ಗ್ರಾಮೀಣ ಜನತೆಯ ಪಾಲಿಗೆ ಇದು ಅನಿವಾರ್ಯವೂ ಆಗಿದೆ. ಇದೀಗ ಸ್ವಯಂ ನಿವೃತ್ತಿ ಎಂಬ ಯೋಜನೆ ಬಿಎಸ್ಸೆನ್ನೆಲ್ ಪಾಲಿಗೆ ಮಗ್ಗುಲ ಮುಳ್ಳಾಗಲಿದೆ. ಶೇ100ರಷ್ಟು ತೊಂದರೆಯಾಗಿ ಕಾಡಲಿದೆ.

ಸ್ವಯಂ ನಿವೃತ್ತಿಯಿಂದ ಬಿಎಸ್ಸೆನ್ನೆಲ್ ಸಂಸ್ಥೆಗೆ ಪ್ರಸ್ತುತ ತೊಂದರೆಯಾದರೂ ಮುಂದೆ ಇದಕ್ಕೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ಗುತ್ತಿಗೆ ಆಧಾರ ಪದ್ದತಿಯಲ್ಲಿ ಸಿಬ್ಬಂದಿಗಳನ್ನು ನೇಮಕ ಮಾಡುವ ಚಿಂತನೆ ಇದೆ.  ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕಾಗಬಹುದು. ಆನಂತರ ಮತ್ತೆ ಯಥಾ ರೀತಿಯಲ್ಲಿ ಬಿಎಸ್ಸೆನ್ನೆಲ್ ತನ್ನ ಸೇವೆ ಮುಂದುವರಿಸಲಿದೆ- 

ಆನಂದ್, ಎಜಿಎಂ ಬಿಎಸ್ಸೆನ್ನಲ್ ಪ್ರಧಾನ ಕಚೇರಿ ಪುತ್ತೂರು.   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X