Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನಸ್ನೇಹಿ, ಕೃಷಿಕರು ಮತ್ತು ಬಡವರ ಪರವಾದ...

ಜನಸ್ನೇಹಿ, ಕೃಷಿಕರು ಮತ್ತು ಬಡವರ ಪರವಾದ ಬಜೆಟ್: ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ1 Feb 2020 5:46 PM IST
share
ಜನಸ್ನೇಹಿ, ಕೃಷಿಕರು ಮತ್ತು ಬಡವರ ಪರವಾದ ಬಜೆಟ್: ಸಿಎಂ ಯಡಿಯೂರಪ್ಪ

ಬೆಂಗಳೂರು, ಫೆ.1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2020-2021ನೆ ಸಾಲಿನ ಆಯವ್ಯಯ ಜನಸ್ನೇಹಿಯಾಗಿದ್ದು, ಕೃಷಿಕರು, ಬಡವರ ಪರವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನಸ್ನೇಹಿ ಬಜೆಟ್ ಮಂಡನೆ ಮಾಡಿದಕ್ಕೆ ಪ್ರಧಾನಿ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರೈತರಿಗೆ, ಬಡವರಿಗೆ ಮತ್ತು ಹಳ್ಳಿಗಳಿಗೆ ಆದ್ಯತೆ ನೀಡಿದ ಆಯವ್ಯಯ ಬಂದಿದೆ ಎಂದರು.

ರೈತರಿಗೆ ಈ ಆಯವ್ಯಯ ವರದಾನವಾಗಲಿದೆ. 2022ರಲ್ಲಿ ರೈತರ ಆದಾಯ ದ್ವಿಗುಣ ಮಾಡುವ ಗುರಿ ಸಾಧನೆಗೆ ಬಜೆಟ್‌ನಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಪೂರಕ. ಜಲಕ್ಷಾಮ ಇರುವ ನೂರು ಜಿಲ್ಲೆಗಳಲ್ಲಿ ವಿಶೇಷ ಯೋಜನೆ ರೈತರಿಗೆ ಅನುಕೂಲವಾಗಲಿದೆ ಎಂದರು.

ವಿದ್ಯುತ್ ಸ್ವಾವಲಂಬನೆ ನಿಟ್ಟಿನಲ್ಲಿ ಬಂಜರು ಭೂಮಿಯಲ್ಲಿ ಸೌರ ವಿದ್ಯುತ್ ಉತ್ಪಾದನೆಗೆ ಉತ್ತೇಜನ, 20 ಲಕ್ಷ ರೈತರಿಗೆ ಸೌರ ಪಂಪ್‌ಸೆಟ್‌ಗಳನ್ನು ಒದಗಿಸಲು ನೆರವು, ಜಮೀನುಗಳಲ್ಲಿ ರೈತರು ರಸಾಯನಿಕ ಗೊಬ್ಬರದ ಬಳಕೆಯನ್ನು ಕಡಿಮೆ ಮಾಡುವುದು ಮೊದಲಾದ ಕಾರ್ಯಕ್ರಮಗಳು ಕೃಷಿ ವಲಯಕ್ಕೆ ಹೆಚ್ಚಿನ ಉತ್ತೇಜನ ನೀಡಲಿದೆ.

ಕೃಷಿ ಉತ್ಪನ್ನಗಳ ಸಾಗಾಣಿಕೆ ಮತ್ತು ರಫ್ತು ಮಾಡಲು ಕಿಸಾನ್ ರೈಲು, ಕಿಸಾನ್ ಉಡಾನ್ ಯೋಜನೆ ಸಹಾಯಕವಾಗಲಿದೆ. 2.83 ಲಕ್ಷ ಕೋಟಿ ರೂ.ದೊಡ್ಡ ಬಜೆಟ್. ಕೃಷಿಗೆ ಆದ್ಯತೆ ನೀಡಲಾಗಿದೆ ಎಂದ ಅವರು, ಕ್ಷಯ ರೋಗ ನಿವಾರಣೆ, ಜನೌಷಧಿ ಕೇಂದ್ರಗಳ ವಿಸ್ತರಣೆ, ಆರೋಗ್ಯ ಸೇವೆ ಸುಧಾರಣೆಗೆ ಆದ್ಯತೆ, ವೈದ್ಯಕೀಯ ಶಿಕ್ಷಣಕ್ಕೆ ಒತ್ತು ನೀಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆ ಹಾಗೂ ವಿದೇಶಿ ಸಾಲ ಪಡೆಯಲು ಅನುಮತಿ ದೊರೆತಿರುವುದು ರಾಜ್ಯದ ವಿವಿಗಳಿಗೆ ಬಹಳ ಅನುಕೂಲ. ಅಲ್ಲದೆ, ಆನ್‌ಲೈನ್ ಶಿಕ್ಷಣ ವ್ಯವಸ್ಥೆಯನ್ನು ಘೋಷಿಸಿರುವುದು ಒಂದು ಮಹತ್ವಪೂರ್ಣ ಬೆಳವಣಿಗೆಯಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶ ಸೃಜನೆಗೆ ಪೂರಕ ಆಯವ್ಯಯ ಇದಾಗಿದ್ದು, ಮಾನವ ಸಂಪನ್ಮೂಲ ಬಳಕೆಗೆ ಉತ್ತೇಜನಕಾರಿಯಾಗಿದೆ. ಉತ್ಪಾದನಾ ವಲಯ, ರಫ್ತಿಗೆ ಉತ್ತೇಜನ ನೀಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿಗೆ 1ಲಕ್ಷ ಕೋಟಿ ರೂ.ಒದಗಿಸಿರುವುದು ಹೂಡಿಕೆದಾರರಿಗೆ ಉತ್ತಮ ಸಂದೇಶ ನೀಡಿದೆ ಎಂದು ಅವರು ತಿಳಿಸಿದರು.

ಆದಾಯ ತೆರಿಗೆ ಹಾಗೂ ಕಾರ್ಪೊರೇಟ್ ತೆರಿಗೆ ಇಳಿಕೆ, ತೆರಿಗೆದಾರರಿಗೆ ಕಿರುಕುಳ ತಡೆಯುವ ನಿಟ್ಟಿನಲ್ಲಿ ತೆರಿಗೆ ಪಾವತಿದಾರರ ಪಟ್ಟಿಗೆ ಕೇಂದ್ರದ ಮಹತ್ವಪೂರ್ಣ ಕ್ರಮಗಳಾಗಿವೆ ಎಂದ ಅವರು, ರಾಷ್ಟ್ರೀಯ ನೇಮಕಾತಿ ಸಂಸ್ಥೆಯನ್ನು ಪ್ರಾರಂಭಿಸುವ ಮೂಲಕ ನಾನ್ ಗಜೆಟೆಡ್ ಹುದ್ದೆಗಳ ನೇಮಕಾತಿಯನ್ನು ಸರಳಗೊಳಿಸುವ ಕೇಂದ್ರದ ತೀರ್ಮಾನವೂ ಸ್ವಾಗತಾರ್ಹ ಎಂದರು.

‘ಬೆಂಗಳೂರು ಸಬ್‌ಅರ್ಬನ್ ರೈಲಿಗೆ ಅನುಮೋದನೆ ನೀಡಿದ್ದು. 18,600ಕೋಟಿ ರೂ.ಅಂದಾಜು ವೆಚ್ಚದಲ್ಲಿ ಕೇಂದ್ರದ ಶೇ.20ರಷ್ಟು ಪಾಲು, ರಾಜ್ಯದ ಶೇ.20 ಪಾಲು ಹಾಗೂ ಶೇ.60ರ ಬಾಹ್ಯ ನೆರವಿನ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಲಾಗಿದ್ದು, ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಅನುಕೂಲಕರ’

-ಯಡಿಯೂರಪ್ಪ, ಮುಖ್ಯಮಂತ್ರಿ

ಬಜೆಟ್ ಪ್ರತಿಕ್ರಿಯೆ...

ಗ್ರಾಮೀಣಾಭಿವೃದ್ಧಿಗೆ ಒತ್ತು

‘ಕೇಂದ್ರದ ಬಜೆಟ್ ಭರವಸೆಯ ಬೆಳಕನ್ನು ಮೂಡಿಸಿದ್ದು, ಘೋಷಣೆಯಾಗಿರುವ ಯೋಜನೆಗಳು ದೂರದೃಷ್ಟಿ ಹೊಂದಿದೆ. ಹೊಸ ತೆರಿಗೆ ವಿಧಿಸದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರ ಕ್ರಮವನ್ನು ಸ್ವಾಗತಿಸುತ್ತೇನೆ. ಗ್ರಾಮೀಣಾಭಿವೃದ್ಧಿಗೆ 1.23 ಲಕ್ಷ ಕೋಟಿ ರೂ.ನೀಡಿದ್ದು, ರೈತರ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ. ವಿದ್ಯುತ್ ಸ್ವಾವಲಂಬನೆಗೆ ಆದ್ಯತೆ ನೀಡಲಾಗಿದ್ದು, ದೇಶದ ಜಿಡಿಪಿ ಪ್ರಗತಿಗೆ ಒತ್ತು ಕೊಡಲಾಗಿದೆ. ಬೆಂಗಳೂರು ಸಬ್‌ಅರ್ಬನ್ ರೈಲು ಯೋಜನೆಗೆ ಒತ್ತು ನೀಡಿದ್ದು, ತೆರಿಗೆದಾರರ ಹಿತ ಕಾಯುವ ಭರವಸೆ ಸಿಕ್ಕಿದೆ. ಅನ್ನದಾತನನ್ನು ದೃಷ್ಟಿಯಲ್ಲಿರಿಸಿಕೊಂಡು ಮಂಡಿಸಲಾಗಿರುವ ಆಯವ್ಯಯದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ, ಸ್ವಾವಲಂಬನೆಗೆ ಉತ್ತೇಜನ ಕೊಟ್ಟಿರುವುದು ಸ್ವಾಗತಾರ್ಹ’

-ಕೆ.ಎಸ್.ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ

ಪರಿಶಿಷ್ಟರ ಅಭಿವೃದ್ಧಿಗೆ ಒತ್ತು

‘ಕೇಂದ್ರದ ಆಯವ್ಯಯ ಏಳೆ ಮಗುವನಿಂದ ಹಿಡಿದು ವೃದ್ದಾಪ್ಯದವರೆಗೂ ಎಲ್ಲರ ಗಮನದಲ್ಲಿ ಇಟ್ಟುಕೊಂಡು ಮಂಡನೆ ಮಾಡಲಾಗಿದೆ. ಕೃಷಿ, ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿದ್ದು, ಬಜೆಟ್ ಗಾತ್ರವೂ ಹೆಚ್ಚಾಗಿದೆ. ಆರೋಗ್ಯ, ಕುಡಿಯುವ ನೀರು, ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ, ಎಸ್ಸಿ-ಎಸ್ಟಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಬೆಂಗಳೂರಿನ ಸಬ್‌ಅರ್ಬನ್ ರೈಲ್ವೆ ಯೋಜನೆ ನೀಡಿದ್ದು ಸಂತಸ ತಂದಿದೆ. ಪ್ರಧಾನಿ ಮತ್ತು ಹಣಕಾಸು ಸಚಿವರಿಗೆ ಧನ್ಯವಾದ ಅರ್ಪಿಸುವೆ’

-ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ

ರೈತರ ಆದಾಯ ದ್ವಿಗುಣ

‘ಕೇಂದ್ರ ಬಜೆಟ್‌ನಲ್ಲಿ ದೇಶದ ರೈತರಿಗೆ ಆದ್ಯತೆ ನೀಡಿದ್ದು, ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಆಸ್ಥೆ ವಹಿಸಲಾಗಿದೆ. ಕೃಷಿ ಉತ್ಪನ್ನ ದ್ವಿಗುಣಗೊಳಿಸಲು ನಬಾರ್ಡ್‌ನಿಂದ 16 ಲಕ್ಷ ಕೋಟಿ ರೂ.ಪ್ರೋತ್ಸಾಹಧನ ನೀಡುವ ಘೋಷಣೆ ಮಾಡಲಾಗಿದೆ. ನೀರಾವರಿಗೆ ಒತ್ತು ನೀಡಲಾಗಿದೆ. ನಿರುಪಯುಕ್ತ ಭೂಮಿಯಲ್ಲಿ ಸೋಲಾರ್ ಘಟಕ ಸ್ಥಾಪಿಸುವ ಘೋಷಿಸಲಾಗಿದೆ. ಜಿಡಿಪಿ ಹೆಚ್ಚಿಸಲು ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ’

-ಲಕ್ಷ್ಮಣ ಸವದಿ, ಉಪಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X