Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯ ಬಜೆಟ್‌ನಲ್ಲಿ ಸಮಗ್ರ ಮೀನುಗಾರಿಕಾ...

ರಾಜ್ಯ ಬಜೆಟ್‌ನಲ್ಲಿ ಸಮಗ್ರ ಮೀನುಗಾರಿಕಾ ನೀತಿ ಘೋಷಣೆ: ಕೋಟ

ವಾರ್ತಾಭಾರತಿವಾರ್ತಾಭಾರತಿ1 Feb 2020 8:12 PM IST
share
ರಾಜ್ಯ ಬಜೆಟ್‌ನಲ್ಲಿ ಸಮಗ್ರ ಮೀನುಗಾರಿಕಾ ನೀತಿ ಘೋಷಣೆ: ಕೋಟ

ಉಡುಪಿ, ಫೆ.1: ವಿವಿಧ ಮೀನುಗಾರಿಕೆಯಲ್ಲಿ ವಿವಾದ, ಮೀನಿನ ಸಂತತಿಗೆ ತೊಂದರೆಯಾಗದಂತೆ ಮತ್ತು ಮೀನುಗಾರರ ಬದುಕು ಸರಿಪರಿಡಸಲು ರೂಪಿಸ ಬೇಕಾದ ಯೋಜನೆಗಳ ಕುರಿತು ಬೇರೆ ಬೇರೆ ರಾಜ್ಯಗಳಲ್ಲಿರುವ ಯೋಜನೆಗಳ ಕುರಿತು ಅಧ್ಯಯನ ನಡೆಸಿ, ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಸಮಗ್ರ ಮೀನುಗಾರಿಕಾ ನೀತಿಯನ್ನು ಘೋಷಿಸಲಾಗುವುದು ಎಂದು ರಾಜ್ಯ ಮೀನು ಗಾರಿಕೆ, ಬಂದರು ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘದ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ಅಂಬಲಪಾಡಿ ಶ್ಯಾಮಿಲಿ ಸಭಾಂಗಣ ದಲ್ಲಿ ಆಯೋಜಿಸಲಾದ ಮಹಿಳಾ ಮೀನುಗಾರರ ಸಮಾವೇಶ ಹಾಗೂ ಹಿರಿಯ ಮನಿ ಮೀನುಗಾರರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ವೈಭವ ಕಾರ್ಯ ಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ಯಾವುದೇ ಕಾರಣಕ್ಕೂ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಮೀನಿನ ಮಳಿಗೆಯನ್ನು ತೆರೆಯುವುದಿಲ್ಲ. ಈ ವಿಚಾರದಲ್ಲಿ ಮಹಿಳಾ ಮೀನುಗಾರರು ಆತಂಕಪಡಬೇಕಾದ ಅಗತ್ಯ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಮಹಿಳಾ ಮೀನುಗಾರರ 69 ಕೋಟಿ ರೂ. ಸಾಲಮನ್ನಾಕ್ಕೆ ಸಂಬಂಧಿಸಿ ಮೂರು ನಾಲ್ಕು ದಿನಗಳಲ್ಲಿ ಅವರ ಖಾತೆಗೆ ಭೂಮಿ ಯೋಜನೆ ಮೂಲಕ ಹಣ ಜಮೆಯಾಗುತ್ತದೆ. ಇದರಿಂದ ಮೀನುಗಾರ ಮಹಿಳೆ ಯರಿಗೆ ಕೇಂದ್ರ ಸರಕಾರ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲು ಯಾವುದೇ ಸಮಸ್ಯೆಗಳು ಆಗುವುದಿಲ್ಲ ಎಂದರು.

ಸಮಾವೇಶವನ್ನು ಉದ್ಘಾಟಿಸಿದ ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಡಾ.ಜಿ.ಶಂಕರ್ ಮಾತನಾಡಿ,ವಿವಿಧ ಮೀನುಗಾರಿಕೆ ಮಧ್ಯೆ ಸಾಕಷ್ಟು ಗೊಂದಲಗಳಿರುವುದರಿಂದ ಈ ಬಾರಿಯ ಬಜೆಟ್ನಲ್ಲಿ ಸಮಗ್ರ ಮೀನು ಗಾರಿಕಾ ನೀತಿಯನ್ನು ಘೋಷಿಸಬೇಕು. ಮಹಿಳಾ ಮೀನುಗಾರ ರಿಗೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಸುವರ್ಣ ತ್ರಿಭುಜ ಬೋಟು ಅವಘಡದಿಂದ ನಾಪತ್ತೆಯಾಗಿರುವ ಮೀನುಗಾರ ಕುಟುಂಬಗಳು ಬಹಳ ಸಂಕಷ್ಟದಲ್ಲಿದ್ದು, ಕೇಂದ್ರ ಸರಕಾರದಿಂದ ವಿಶೇಷ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಫೆ.10ರಂದು ದೆಹಲಿಗೆ ನಿಯೋಗ ತೆರಳಿ ಸಂಬಂಧ ಪಟ್ಟ ಸಚಿವರನ್ನು ಭೇಟಿ ಮಾಡಲಾಗುವುದು ಎಂದರು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಬೇಬಿ ಎಚ್.ಸಾಲ್ಯಾನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮೀನುಗಾರಿಕೆ ಇಲಾಕೆ ಉಪ ನಿರ್ದೇಶಕ ಕೆ.ಗಣೇಶ್, ಮಲ್ಪೆಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಜಿ.ಸುವರ್ಣ, ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಮಲ್ಪೆಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್, ಜಿಲ್ಲಾ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ಶಿವರಾಮ ಕೆ.ಎಂ., ಕುಂದಾಪುರ ಜೈ ಕರ್ನಾಟಕ ಚಿಲ್ಲರೆ ಮೀನು ವ್ಯಾಪರಸ್ಥರ ಸಂಘದ ಅಧ್ಯಕ್ಷೆ ರತ್ನ ಮೊಗವೀರ, ಮಲ್ಪೆ ಸಹಕಾರಿ ಸಂಘದ ಅಧ್ಯಕ್ಷೆ ಜಲಜ ಕೋಟ್ಯಾ್ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಿರಿಯ ಮಹಿಳಾ ಮೀನುಗಾರರನ್ನು ಸನ್ಮಾನಿಸ ಲಾಯಿತು. ಅದೇ ರೀತಿ ಆರೋಗ್ಯ ನೆರವನ್ನು ವಿತರಿಸಲಾಯಿತು. ಕರಾವಳಿ ಮೀನುಗಾರ ಮಹಿಳೆಯರ ವಿವಿಧ ಬೇಡಿಕೆಗಳ ಮನವಿಯನ್ನು ಸಚಿವರಿಗೆ ಸಲ್ಲಿಸಲಾಯಿತು.

ಸಂಘದ ಸಲಹೆಗಾರ ಹಾಗೂ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಸ್ವಾಗತಿಸಿ ಪ್ರಾಸಾತಿವಿಕವಾಗಿ ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಆನಂದ್ ವರದಿ ವಾಚಿಸಿ, ವಂದಿಸಿದರು. ಪ್ರಕಾಶ್ ುವರ್ಣ ಕಾರ್ಯಕ್ರಮ ನಿರೂಪಿಸಿದರು.

300ಕೋ.ರೂ. ವಿಶೇಷ ಪ್ಯಾಕೇಜ್ ಘೋಷಿಸಿ: ಜಿ.ಶಂಕರ್

ಮತ್ಸ್ಯ ಕ್ಷಾಮದ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ನಲ್ಲಿ ಕರ್ನಾಟಕ ಕರಾವಳಿ ಮೂರು ಜಿಲ್ಲೆಗಳಿಗೆ 300 ಕೋಟಿ ರೂ. ವಿಶೇಷ ಪ್ಯಾಕೇಜನ್ನು ಸರಕಾರ ಘೋಷಣೆ ಮಾಡಬೇಕು. ಈ ನಿಟ್ಟಿನಲ್ಲಿ ಕರಾವಳಿಯ ಶಾಸಕರುಗಳು ಮುಖ್ಯಮಂತ್ರಿಗೆ ಒತ್ತಡ ಹಾಕಬೇಕು ಎಂದುಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅ್ಯಕ್ಷ ಡಾ.ಜಿ.ಶಂಕರ್ ಒತ್ತಾಯಿಸಿದರು.

ಮೀನುಗಾರ ಮಹಿಳೆಯರ ಸಾಲ ಮನ್ನಾದ 60 ಕೋಟಿ ರೂ. ಹಣವನ್ನು ಅವರವರ ಖಾತೆಗೆ ತಕ್ಷಣವೇ ಜಮೆ ಮಾಡಬೇಕು.ಈ ವಿಚಾರದಲ್ಲಿ ಸಚಿವರು ಮತ್ತು ಶಾಸಕರು ಒಟ್ಟಿಗೆ ಪ್ರಯತ್ನ ಮಾಡಬೇಕು. ಬ್ರಹ್ಮಾವರ ಮೀನು ಮಾರು ಕಟ್ಟೆ ನಿರ್ಮಾಣಕ್ಕೆ ಸಂಬಂಧಿಸಿ ಎದುರಾಗಿರುವ ಸಮಸ್ಯೆಯನ್ನು ಶಾಸಕರು ಮುತುವರ್ಜಿ ವಹಿಸಿ ರಿಹರಿಸಬೇಕು ಎಂದರು.

‘12 ಮತ್ಸ್ಯ ದರ್ಶಿನಿ ಮೀನಿನ ಹೊಟೇಲ್’

ಮತ್ಸ್ಯ ದರ್ಶಿನಿ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 12 ಮೀನಿನ ಹೊಟೇಲನ್ನು ಸರಕಾರದ ವತಿಯಿಂದ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಪಂಚತಾರ ಹೊಟೇಲ್‌ಗಳಲ್ಲಿ 500-1000ರೂ.ಗೆ ಸಿಗುವ ಮೀನುಗಳ ಖಾದ್ಯವು, ಮತ್ಸ್ಯ ದರ್ಶಿನಿ ಹೊಟೇಲಿನಲ್ಲಿ ಕೇವಲ 90-110ರೂ.ಗೆ ದೊರೆಯ ಲಿದೆ. ಇದನ್ನು ಮೀನುಗಾರರೇ ನಡೆಸಿಕೊಂಡು ಹೋಗಲಿದ್ದಾರೆ. ಉಡುಪಿ ಯಲ್ಲಿ ಈ ಹೊಟೇಲನ್ನು ಯಶ್ಪಾಲ್ ಸುವರ್ಣ ಅವರ ಫೆಡರೇಶನ್‌ಗೆ ವಹಿಸಿ ಕೊಡಲಾಗುವುದು ಎಂದರು.

ರಾಜ್ಯದ 320ಕಿ.ಮೀ. ಉದ್ದದ ಸಮುದ್ರ ಕಿನಾರೆಯಲ್ಲಿರುವ ಕಿರುಬಂದರು, ಜಟ್ಟಿಗಳ ಅಭಿವೃದ್ಧಿಗೆ 2000 ಕೋಟಿ ರೂ. ಅನುದಾನ ನೀಡಲು ಕೇಂದ್ರ ಸರಕಾರ ಸಿದ್ಧ ಇದ್ದು, ಇದಕ್ಕೆ ಬೇಕಾದ ಯೋಜನೆಗಳ ಸಿದ್ಧತೆಯನ್ನು ಮಾಡ ಲಾಗುತ್ತಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X