ಜಿಲ್ಲಾ ಆಸ್ಪತ್ರೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಆರಂಭ
ಹೊಸದಿಲ್ಲಿ, ಫೆ.1: ಅರ್ಹ ವೈದ್ಯರ ಕೊರತೆಯನ್ನು ನಿವಾರಿಸುವ ಉದ್ದೇಶದಿಂದ ಸರಕಾರಿ ಖಾಸಗಿ ಸಹಭಾಗಿತ್ವ(ಪಿಪಿಪಿ)ಯಡಿ ಈಗಿರುವ ಜಿಲ್ಲಾ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಸ್ಪತ್ರೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಪಿಪಿಪಿ ಮಾದರಿಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು. ಇದಕ್ಕೆ ಅಗತ್ಯವಿರುವ ಭೂಮಿಯನ್ನು ರಿಯಾಯಿತಿ ದರದಲ್ಲಿ ಒದಗಿಸುವ ರಾಜ್ಯಗಳಿಗೆ ಕಾರ್ಯಸಾಧ್ಯತೆಯ ಅಂತರ ನಿಧಿ ನೀಡಲಾಗುವುದು. ಈ ಯೋಜನೆಯ ವಿವರವನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಸಚಿವೆ ಹೇಳಿದ್ದಾರೆ.
ಸಾಕಷ್ಟು ಸಾಮರ್ಥ್ಯವಿರುವ ದೊಡ್ಡ ಆಸ್ಪತ್ರೆಗಳಲ್ಲಿ ಸ್ಥಾನಿಕ ವೈದ್ಯರ ಡಿಪ್ಲೊಮಾ ಕೋರ್ಸ್ ಹಾಗೂ ಫೆಲೊ ನ್ಯಾಷನಲ್ ಬೋರ್ಡ್ ಕೋರ್ಸ್ ಆರಂಭಿಸಲು ಸರಕಾರ ಪ್ರೋತ್ಸಾಹ ನೀಡಲಿದೆ ಎಂದವರು ಹೇಳಿದ್ದಾರೆ.
Next Story





