ಅಗ್ರ 100 ಶಿಕ್ಷಣ ಸಂಸ್ಥೆಗಳಿಂದ ಆನ್‌ಲೈನ್ ಶಿಕ್ಷಣ ಯೋಜನೆ
ಹೊಸದಿಲ್ಲಿ, ಫೆ.1: ದೇಶದ ಅಗ್ರ 100 ಶಿಕ್ಷಣ ಸಂಸ್ಥೆಗಳು ಆನ್‌ಲೈನ್ ಮೂಲಕ ಪೂರ್ಣ ಪ್ರಮಾಣದ ಪದವಿ ಕೋರ್ಸ್‌ಗಳನ್ನು ಒದಗಿಸಲಿವೆ ಎಂದು ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಮಾಜದ ಅವಕಾಶ ವಂಚಿತ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಅಸಮರ್ಥರಾಗಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ದೇಶದ ಅಗ್ರ 100 ಶಿಕ್ಷಣ ಸಂಸ್ಥೆಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಸಂಸ್ಥೆಗಳಿಗೆ ಮಾತ್ರ ಈ ಅವಕಾಶವಿದೆ ಎಂದವರು ಹೇಳಿದ್ದಾರೆ.
ಕೇಂದ್ರ ಸರಕಾರದ ಈ ಯೋಜನೆಯಿಂದ ಒಟ್ಟು ದಾಖಲಾತಿ ಅನುಪಾತ ಹೆಚ್ಚಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಹೇಳಿದ್ದಾರೆ.
Next Story





