ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಬ್ರಹ್ಮಾವರ, ಫೆ.1: ಅನಾರೋಗ್ಯದಿಂದ ಬಳಲುತ್ತಿದ್ದ ಉಪ್ಪೂರು ಗ್ರಾಮದ ತೆಂಕ ಬೆಟ್ಟು ನಿವಾಸಿ ಸ್ಟೀಪನ್ ಜೊಸೇಫ್ ಜೋನ್ ಲೂವಿಸ್(58) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.1ರಂದು ಬೆಳಗ್ಗೆ ಮನೆಯ ಅಂಗಳದಲ್ಲಿದ್ದ ಬಾವಿಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಎಲ್ಲೂರು ವಿಶ್ವನಾಥ ದೇವಸ್ಥಾನದ ಬಳಿಯ ನಿವಾಸಿ ವಿಶ್ವನಾಥ ಆಚಾರ್ಯ(38) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಫೆ.1ರಂದು ನಸುಕಿನ ಜಾವ ಮನೆಯ ಎದುರಿನ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಬಾಗಲಕೋಟೆ ಮೂಲದ, ಉಪ್ಪೂರು ಗ್ರಾಮದ ಲಕ್ಷ್ಮೀ ನಗರ ನಿವಾಸಿ ಮಂಜುನಾಥ ಎಂಬವರ ಪತ್ನಿ ಹನುಮವ್ವ (20) ಎಂಬ ವರು ವೈಯಕ್ತಿಕ ಕಾರಣದಿಂದ ಮನನೊಂದು ಜ.31ರಂದು ಮಧ್ಯಾಹ್ನ ವೇಳೆ ಮನೆಯಲ್ಲಿ ಕವಾಟಿನ ರಾಡ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲಿೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ





