ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು: ಸಚಿವ ಸಿ.ಟಿ.ರವಿ

ಬೆಂಗಳೂರು, ಫೆ. 1: ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು. ಪಕ್ಷ ಯಾವುದೇ ನಿರ್ಧಾರವನ್ನು ಕೈಗೊಂಡರೂ ಅದನ್ನು ಒಪ್ಪಿಕೊಳ್ಳಲೇಬೇಕು ಎಂದು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಇಂದಿಲ್ಲಿ ಹೇಳಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವೈಯಕ್ತಿಕ ಹಿತಾಸಕ್ತಿಗಳಿಗಿಂತ ಪಕ್ಷದ ಹಿತವೇ ಮುಖ್ಯ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು. ಡಿಸಿಎಂ ಹುದ್ದೆ ಸೃಷ್ಟಿ ಸಂಬಂಧ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು.
ಯೋಗ ಇದ್ದವರಿಗೆ ಯೋಗ ಒಲಿಯುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ವರಿಷ್ಠರ ಜೊತೆ ಚರ್ಚಿಸಿದ್ದು, ಅವರು ಯಾವ ರೀತಿ ಸಲಹೆ ನೀಡಿದ್ದಾರೆಂದು ನನಗೆ ಗೊತ್ತಿಲ್ಲ. ಸೋಮವಾರ ಅಥವಾ ಮಂಗಳವಾರ ಸಂಪುಟ ವಿಸ್ತರಣೆ ಆಗುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ ಎಂದರು.
ತಾನು ಯಾವುದೇ ಖಾತೆ ಕೊಡಿ ಎಂದು ಕೇಳಿರಲಿಲ್ಲ. ಮುಂದೆಯೂ ಕೇಳುವುದಿಲ್ಲ. ನನಗೆ ಯಾವುದೇ ಜವಾಬ್ದಾರಿ ವಹಿಸಿದರೂ ನಿಷ್ಠೆಯಿಂದ ನಿರ್ವಹಿಸುತ್ತೇನೆ. ನನ ಮೇಲೆ ಪಕ್ಷ ವಿಶ್ವಾಸವಿಟ್ಟಿದೆ. ಖಾತೆ ಬದಲಾವಣೆ ಮಾಡಿದರೂ ಅದನ್ನು ನಿಭಾಯಿಸುವೆ ಎಂದರು.







