ಭಾರತದ ಪ್ಯಾರಾಲಿಂಪಿಕ್ಸ್ ಸಮಿತಿಯ ಅಧ್ಯಕ್ಷೆಯಾಗಿ ದೀಪಾ ಮಲಿಕ್

ಹೊಸದಿಲ್ಲಿ, ಫೆ.1: ಖ್ಯಾತ ಪ್ಯಾರಾ ಅಥ್ಲೀಟ್ ಹಾಗೂ ಭಾರತದ ಏಕೈಕ ಮಹಿಳಾ ಪ್ಯಾರಾಲಿಂಪಿಕ್ಸ್ ಪದಕ ವಿಜೇತೆ ದೀಪಾ ಮಲಿಕ್ ಭಾರತದ ಪ್ಯಾರಾಲಿಂಪಿಕ್ಸ್ ಸಮಿತಿಯ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯ ಫಲಿತಾಂಶವು ದಿಲ್ಲಿ ಹೈಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪಿಗೆ ಅನುಗುಣವಾಗಿರುತ್ತದೆ.
49ರ ಹರೆಯದ ದೀಪಾ 2016ರ ರಿಯೋ ಪ್ಯಾರಾಲಿಂಪಿಕ್ ಗೇಮ್ಸ್‌ನಲ್ಲಿ ಶಾಟ್‌ಪುಟ್ ಎಫ್-53 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ್ದರು. ಶುಕ್ರವಾರ ನಡೆದ ಭಾರತದ ಪ್ಯಾರಾಲಿಂಪಿಕ್ಸ್ ಸಮಿತಿ(ಪಿಸಿಐ)ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Next Story





